ನಾಳೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕರೊನಾ ಲಸಿಕೆ ತಾಲೀಮು / ಸುಳ್ಳು ವದಂತಿಗಳಿಗೆ ಕಿವಿ ಕೊಡದಂತೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ

ಬೆಂಗಳೂರು: ನಾಳೆ ಎಲ್ಲಾ ಜಿಲ್ಲೆಗಳಲ್ಲಿ ಕೊರೊನಾ ಲಸಿಕೆ ತಾಲೀಮು ನಡೆಯಲಿದ್ದು, ಕರೊನಾ ಲಸಿಕೆಗೆ ಅನುಮತಿ ನೀಡಲು ಸರ್ಕಾರ ಎಲ್ಲಾ ವೈಜ್ಞಾನಿಕ ಪ್ರಕ್ರಿಯೆಗಳನ್ನು ಪಾಲಿಸಿದ್ದು, ಜನತೆ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.

ಕರೊನಾ ಲಸಿಕೆ ವಿತರಣೆ ಕುರಿತು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಅವರೊಂದಿಗೆ ವಿಡಿಯೋ ಸಂವಾದದಲ್ಲಿ ಪಾಲ್ಗೊಂಡ ನಂತರ ಟ್ವಿಟ್ ಮಾಡಿರುವ ಅವರು,  ಕೊರೊನಾ ಲಸಿಕೆ ತಾಲೀಮು ನಡೆಸಲು 24 ಜಿಲ್ಲಾಸ್ಪತ್ರೆ, ರಾಜ್ಯದ 20 ಮೆಡಿಕಲ್ ಕಾಲೇಜು, 43 ತಾಲೂಕು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ, 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, 28 ಖಾಸಗಿ ಆರೋಗ್ಯ ಕೇಂದ್ರಗಳು ಸೇರಿ ರಾಜ್ಯಾದ್ಯಂತ ಒಟ್ಟು 263 ಸ್ಥಳಗಳನ್ನು ಗುರುತಿಸಲಾಗಿದೆ.

ರಾಜ್ಯದಲ್ಲಿ 10 ವಾಕ್-ಇನ್ ಕೂಲರ್, 4 ವಾಕ್-ಇನ್ ಫ್ರೀಜರ್, 3201 ಐಎಲ್ ಆರ್, 3039 ಡೀಪ್ ಫ್ರೀಜರ್, 3312 ಕೋಲ್ಡ್ ಬಾಕ್ಸ್, 46591 ಲಸಿಕೆ ಕ್ಯಾರಿಯರ್, 225749 ಐಸ್ ಪ್ಯಾಕ್ ಲಭ್ಯವಿದೆ. ಕೇಂದ್ರ ಸರ್ಕಾರ 24 ಲಕ್ಷ ಸಿರಿಂಜು, 64 ಐಎಲ್ ಆರ್ ಗಳನ್ನು ಕಳುಹಿಸಿಕೊಟ್ಟಿದ್ದು, 2 ವಾಕ್-ಇನ್ ಕೂಲರ್, 1 ವಾಕ್-ಇನ್ ಫ್ರೀಜರ್ ಒದಗಿಸಲಿದೆ.

ಕರೊನಾ ಲಸಿಕೆ ವಿತರಣೆಯಂತಹ ಬೃಹತ್ ಕಾರ್ಯಾಚರಣೆ ಯಶಸ್ವಿಯಾಗಲು ಸಾರ್ವಜನಿಕರ ಸಹಭಾಗಿತ್ವ ಹಾಗೂ ಸಹಕಾರ ನಿರ್ಣಾಯಕವಾಗಿದ್ದು, ಇದನ್ನು ಜನಾಂದೋಲನದ ರೀತಿ ಪರಿಗಣಿಸಬೇಕಿದೆ ಎಂದಿದ್ದಾರೆ. ಅಲ್ಲದೆ, ಕರೊನಾ ಲಸಿಕೆಗೆ ಅನುಮತಿ ನೀಡಲು ಸರ್ಕಾರ ಎಲ್ಲಾ ವೈಜ್ಞಾನಿಕ ಪ್ರಕ್ರಿಯೆಗಳನ್ನು ಪಾಲಿಸಿದ್ದು, ಜನತೆ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದೆಂದು ಮನವಿ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]