ಬೆಂ.ಗ್ರಾ.ಜಿಲ್ಲೆ: ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ಖಾಜಾ ಮಹಮದ್ ಹುಸೇನ್ ಮುಧೋಳ್ ಅವರು ಜ.6 ರಂದು ರಾತ್ರಿ ಹೃದಯಾಘಾತದಿಂದ ಮರಣ ಹೊಂದಿದ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮೃತರ ಭಾವಚಿತ್ರಕ್ಕೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಪುಷ್ಪ ನಮನ ಸಲ್ಲಿಸುವ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಮೃತರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

