ಕೆರೆಗಳ ಸಂರಕ್ಷಣೆಗೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳ ನೀರಿನ ಗುಣಮಟ್ಟ ಹಾಗೂ ಸಂರಕ್ಷಣೆಗೆ ಆದ್ಯತೆ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯ ಉಚ್ಛ ನ್ಯಾಯಾಲಯವು ಕೆರೆಗಳ ಸಂರಕ್ಷಣೆಗೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಿದ್ದು ಅವುಗಳನ್ನು ಪಾಲಿಸಬೇಕು ಎಂದರು. ಸಣ್ಣ ನೀರಾವರಿ ಇಲಾಖೆಯಡಿ 98 ಕೆರೆಗಳು ಹಾಗೂ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ 611 ಕೆರೆಗಳಿದ್ದು, ಎಲ್ಲಾ ಕೆರೆಗಳ ಸಂರಕ್ಷಣೆಗೆ ಅಧಿಕಾರಿಗಳು ಮುಂದಾಗಬೇಕು ಎಂದು ತಿಳಿಸಿದರು.  

ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಅಪೆಕ್ಸ್ ಸಮಿತಿಗಳನ್ನು ರಚಿಸಿದ್ದು, ಸದಸ್ಯರು ಅಕ್ರಮ ಹಾಗೂ ಅತಿಕ್ರಮಣವನ್ನು ತಡೆಯುವ ಕಾರ್ಯ ಮಾಡಬೇಕು, ನಗರ ಪ್ರದೇಶಗಳಲ್ಲಿ ಕೊಳಚೆ ನೀರು ನೇರವಾಗಿ ಕೆರೆಗಳ ಒಡಲು ಸೇರಿ, ನೀರು ಮಲಿನವಾಗುತ್ತಿರುವುದನ್ನು ತಡೆಗಟ್ಟಲು ನಗರ ಪ್ರದೇಶದ ಬಡಾವಣೆಗಳಲ್ಲೇ ನೀರು ಇಂಗುವಂತೆ ಮಾಡಬೇಕು ಎಂದು ಪೌರಾಯುಕ್ತರಿಗೆ ಸೂಚಿಸಿದರು. 

ಕೆರೆಗಳ ಸುತ್ತ 30 ಮೀಟರ್ ವ್ಯಾಪ್ತಿಯನ್ನು ಬಫರ್ ಪ್ರದೇಶವೆಂದು ಘೋಷಿಸಲಾಗಿದ್ದು, ಅತಿಕ್ರಮಣವನ್ನು ತೆರವುಗೊಳಿಸಬೇಕು ಹಾಗೂ ಯೋಜನಾ ಪ್ರಾಧಿಕಾರದ ಸಹಾಯ ಪಡೆದು ತಹಶೀಲ್ದಾರರು ಕೆರೆಗಳ ಅಭಿವೃದ್ಧಿಗೆ ಒತ್ತು ಕೊಡಬೇಕು ಎಂದರು. 

ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಕೆರೆಗಳ ಗಡಿ ಗುರುತಿಸಿ, ಕೆರೆಯಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸಿ, ಹೂಳೆತ್ತುವ ಕಾರ್ಯ ಮಾಡಬೇಕು. ಜೊತೆಗೆ, ಕೆರೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂದು ಸಲಹೆ ನೀಡಿದರು. 

ಹೊಸಕೋಟೆಯ ಅಮಾನಿಕೆರೆ, ಚಿಕ್ಕಕೆರೆ, ದೇವನಹಳ್ಳಿ ಹಾಗೂ ವಿಜಯಪುರದ ಅಮಾನಿಕೆರೆ, ದೊಡ್ಡಬಳ್ಳಾಪುರದ ನಾಗರಕೆರೆ ಹಾಗೂ ನೆಲಮಂಗಲ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಉಪವಿಭಾಗಾಧಿಕಾರಿ ಅರುಳ್‍ಕುಮಾರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ತಹಶೀಲ್ದಾರರು, ಪೌರಾಯುಕ್ತರು, ಪುರಸಭೆ ಮುಖ್ಯಾಧಿಕಾರಿಗಳು, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]