ಧ್ವನಿವರ್ಧಕ ಮತ್ತು ದೀಪಾಲಂಕಾರ ತಂತ್ರಜ್ಞರಿಗೆ ಸರ್ಕಾರದ ನೆರವು ಅಗತ್ಯ: ಆರ್.ಶಂಕರ್

ದೊಡ್ಡಬಳ್ಳಾಪುರ: ಕೊವಿಡ್ ಸಂದರ್ಭದಲ್ಲಿ ಧ್ವನಿವರ್ಧಕ ಮತ್ತು ದೀಪಾಲಂಕಾರ ತಂತ್ರಜ್ಞರಿಗೆ ಹಾಗೂ ವಾದ್ಯಗೋಷ್ಟಿ ಕಲಾವಿದರು ತೀವ್ರ ಸಂಕಷ್ಟಕ್ಕೀಡಾಗಿದ್ದರೂ ಸರ್ಕಾರ ಯಾವುದೇ ನೆರವು ನೀಡಲಿಲ್ಲ. ಈ ದಿಸೆಯಲ್ಲಿ ಧ್ವನಿವರ್ಧಕ ಮತ್ತು ದೀಪಾಲಂಕಾರ ತಂತ್ರಜ್ಞರಿಗೆ ಇಎಸ್‍ಐ ಸೌಲಭ್ಯ ನೀಡುವುದು, ಹಾಗೂ ವಸತಿ ಯೋಜನೆಗಳಲ್ಲಿ ವಸತಿ ಕಲ್ಪಿಸುವುದು ಸೇರಿದಂತೆ ಸರ್ಕಾರ ಸೌಲಭ್ಯಗಳನ್ನು ನೀಡಬೇಕಿದೆ ಎಂದು  ಅಖಿಲ ಕರ್ನಾಟಕ ವಾದ್ಯಗೋಷ್ಟಿ ಕಲಾವಿದರ ಸಂಘದ ರಾಜ್ಯ ಅಧ್ಯಕ್ಷ ಆರ್.ಶಂಕರ್ ಒತ್ತಾಯಿಸಿದರು.

ನಗರದ ಕಾವೇರಿ ಭವನದಲ್ಲಿ ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲೀಕರು ಮತ್ತು ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

ಇಂದು ಚೈನಾ ಸೌಂಡ್ ಸಿಸ್ಟಮ್ ಪ್ರಭಾವದಿಂದಾಗಿ ಧ್ವನಿವರ್ಧಕ ಮತ್ತು ದೀಪಾಲಂಕಾರ ತಂತ್ರಜ್ಞರಿಗೆ ಕೆಲಸ ಕಡಿಮೆ ಆಗುತ್ತಿದ್ದು, ಇದಕ್ಕೆ ಆದ್ಯತೆ ನೀಡಬಾರದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಧ್ವನಿವರ್ಧಕ ಮತ್ತು ದೀಪಾಲಂಕಾರ ತಂತ್ರಜ್ಞರನ್ನು ಯಾವುದೇ ಸೌಲಭ್ಯ ನೀಡಲು ಪರಿಗಣಿಸುತ್ತಿಲ್ಲ. ಈ ನಿಟ್ಟಿನಲ್ಲಿ ನಾವೇ ಸಂಘಟಿತರಾಗಿ ನಮ್ಮ ಸಂಕಷ್ಟಗಳನ್ನು ಬಗೆಹರಿಸಿಕೊಳ್ಳಬೇಕಿದೆ. ಸಂಘಕ್ಕೆ ಸದಸ್ಯರಾಗುವ ಮೂಲಕ ರಾಜ್ಯ ಸಂಘದಿಂದ ನೀಡಲಾಗುವ 2 ಲಕ್ಷದವರೆಗಿನ ಅಪಘಾತ ವಿಮೆ, ವೈದ್ಯಕೀಯ ವೆಚ್ಚದ ನೆರವುಗಳನ್ನು ಪಡೆದುಕೊಳ್ಳಬಹುದಾಗಿದೆ. ಹಾಗೂ ಶೇ.1ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಾಗುವುದು ಎಂದರು.

ಜ.18ರಂದು ಪ್ರತಿಭಟನೆ: ವಿವಿಧ ವೃತ್ತಿಗಳಿಗೆ ಅನುಮತಿ ನೀಡಿರುವಂತೆ ಧ್ವನಿವರ್ಧಕ ಮತ್ತು ದೀಪಾಲಂಕಾರ ತಂತ್ರಜ್ಞರಿಗೆ ತಮ್ಮ ವೃತ್ತಿಯನ್ನು ಮಾಡಲು ವಿಪುಲ ಅವಕಾಶ ನೀಡಬೇಕು. ಜಾತ್ರೆ ಉತ್ಸವಗಳಿಗೆ ಅನುಮತಿ ನೀಡಬೇಕು. ಇಎಸ್‍ಐ, ವಸತಿ ಸೌಲಭ್ಯ ಮೊದಲಾದ ನೆರವು ನೀಡಿ, ಸರ್ಕಾರ ಈ ವೃತ್ತಿಯಲ್ಲಿರುವವರನ್ನು ಪರಿಗಣಿಸುವಂತೆ ಒತ್ತಾಯಿಸಿ ಜ.18 ಮತ್ತು 19ರಂದು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಿರಂತರ 24 ಗಂಟೆಗಳ ಕಾಲ, ಹಾಡು, ಮಿಮಿಕ್ರಿ ಮೊದಲಾಗಿ ಸಾಂಸ್ಕೃತಿಕ ಪ್ರದರ್ಶನದೊಂದಿಗೆ ಪ್ರತಿಭಟನೆ ಮಾಡಲಾಗುವುದು. ಎಲ್ಲ ಕಲಾವಿದರು ಈ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವ ಅಧ್ಯಕ್ಷ ಟಿ.ಎನ್.ಪ್ರಭುದೇವ್ ಮಾತನಾಡಿ, ಧ್ವನಿವರ್ಧಕ ಮತ್ತು ದೀಪಾಲಂಕಾರ ವೃತ್ತಿಪರರರು ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸಂಘಟನೆಯ ಮೂಲಕ ಸರ್ಕಾರಕ್ಕೆ ನಮ್ಮ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವಲ್ಲಿ ಸಂಘ ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಮತ್ತು ದೀಪಾಲಂಕಾರ ಹಿರಿಯ ವೃತ್ತಿ ಪರರನ್ನು ಸನ್ಮಾನಿಸಲಾಯಿತು.

ವಿವಿಧ ಕ್ಷೇತ್ರದ ಮುಖಂಡರು, ಸಂಘಟನೆಯ ಪದಾಧಿಕಾರಿಗಳು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]