ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶದಿಂದ ಕರ್ನಾಟಕದಲ್ಲಿ ಆಪ್ತ ಸಮಾಲೋಚನೆ ಅಗತ್ಯವಿರುವ ಎಲ್ಲಾ ಮಕ್ಕಳಿಗಾಗಿ ಉಚಿತ ಟೆಲಿ ಕೌನ್ಸಿಲಿಂಗ್ ಸೌಲಭ್ಯವನ್ನು ನೀಡಲು ಟೋಲ್ ಫ್ರೀ ಸಂಖ್ಯೆ: 14499 ಸ್ಥಾಪಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮಕ್ಕಳು ಈ ಸೌಲಭ್ಯ ಪಡೆದುಕೊಳ್ಳುವುದು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮಗ್ರ ಮಕ್ಕಳ ರಕ್ಷಣಾ ಯೋಜನೆಯು, ನಿರ್ಲಕ್ಷತೆಗೊಳಗಾದ, ಪರಿತ್ಯಜಿಸಲ್ಪಟ್ಟ, ಒಪ್ಪಿಸಲ್ಪಟ್ಟ, ದೌರ್ಜನ್ಯಕ್ಕೆ ಒಳಗಾದ, ಶೋಷಣೆಗೆ ಒಳಗಾದ ಮತ್ತು ಕುಟುಂಬದಿಂದ ಬೇರ್ಪಟ್ಟ ಮಕ್ಕಳು ದುರ್ಬಲ ಸ್ಥಿತಿಗೆ ತಲುಪದಿರುವಂತೆ ತಡೆಯಲು ಹಾಗೂ ಇಂತಹ ಪ್ರಕರಣಗಳನ್ನು ಕಡಿಮೆ ಮಾಡಲು ಮತ್ತು ಸಂಕಷ್ಟದಲ್ಲಿರುವ ಮಕ್ಕಳ ಪರಿಸ್ಥಿತಿಯನ್ನು ಉತ್ತಮಪಡಿಸುವ ಉದ್ದೇಶವನ್ನು ಹೊಂದಿರುವ ಕೇಂದ್ರ ಪುರಸ್ಕøತ ಯೋಜನೆಯಾಗಿದೆ.
ಆಪ್ತಸಮಾಲೋಚನೆ ಬಯಸುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಮಕ್ಕಳು ಹಾಗೂ ಪೋಷಕರು ಟೋಲ್ ಫ್ರೀ ಸಂಖ್ಯೆ: 14499 ಸಂಖ್ಯೆಗೆ ಬೆಳಿಗ್ಗೆ 08:00 ಗಂಟೆಯಿಂದ ರಾತ್ರಿ 08:00 ಗಂಟೆವರೆಗೆ ಕರೆ ಮಾಡುವ ಮೂಲಕ ಉಚಿತವಾಗಿ ಆಪ್ತ ಸಮಾಲೋಚನೆ ಸೌಲಭ್ಯ ಪಡೆಯಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

