ಸ್ವಾಮಿ ವಿವೇಕಾನಂದರು ಭಾರತದ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಸಾರಿದ ಮಹಾನ್ ಚೇತನ: ಪ್ರೊ.ಚಂದ್ರಪ್ಪ

ದೊಡ್ಡಬಳ್ಳಾಪುರ: ಕುವೆಂಪು 20ನೇ ಶತಮಾನದ ದೈತ್ಯ ಪ್ರತಿಭೆ. ಬೇಂದ್ರೆ ಕುವೆಂಪುರವರನ್ನು ಯುಗದ ಕವಿ, ಜಗದ ಕವಿ ಎಂದು ಕರೆದಿದ್ದಾರೆ. ಜಿ.ಎಸ್.ಶಿವರುದ್ರಪ್ಪ ಕ್ರಾಂತಿಕಾರಿಕವಿ ಎಂದು ಕರೆದಿರುವುದು ಔಚಿತ್ಯ ಪೂರ್ಣವಾಗಿದೆ ಎಂದು ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಚಂದ್ರಪ್ಪ ತಿಳಿಸಿದರು.

ತಾಲೂಕಿನ ಕೊನಘಟ್ಟ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ರಾಷ್ಟ್ರಕವಿ ಕುವೆಂಪು ಮತ್ತು ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಕುವೆಂಪು ರನ್ನನಂತೆ ಶಕ್ತಿ ಕವಿ. ಹರಿಹರನಂತೆ ಪ್ರಯೋಗಶೀಲ ಕವಿ. ಅವರ ಸಾಹಿತ್ಯದಲ್ಲಿ ಕಾರ್ಲ್‍ಮಾಕ್ರ್ಸ್ ಸಮತಾವಾದವಿದೆ. ಗಾಂಧೀಜಿಯ ಅಹಿಂಸಾ ತತ್ವವಿದೆ. ಅರವಿಂದರ ಪೂರ್ಣ ದೃಷ್ಟಿ ಇದೆ. ಕುವೆಂಪು ಸಮಾಜದಲ್ಲಿನ  ಸಮಕಾಲೀನ ಸತ್ಯಗಳಿಗೆ ಸಾಹಿತ್ಯದ ಮೂಲಕ ನ್ಯಾಯ ಒದಗಿಸಿದ್ದಾರೆ. ಯಾವ ಕವಿ ಭೂತ ವರ್ತಮಾನಗಳ ಆಧಾರದ ಮೇಲೆ ಭವಿಷ್ಯತ್ತನ್ನು ರೂಪಿಸುತ್ತಾನೋ ಆತನೆ ದಾರ್ಶನಿಕ ಕವಿ. ಕುವೆಂಪು ಸಾಹಿತ್ಯದಲ್ಲಿ ಪ್ರಕೃತಿಯ ಸೊಬಗಿನ ಜೊತೆಗೆ ಸಮಾಜದ ಏರು-ಪೇರುಗಳು ಪ್ರತಿಬಿಂಬಿತವಾಗಿ ವಿದ್ಯಾರ್ಥಿಗಳು ಕುವೆಂಪು ಸಾರಿದ ವಿಶ್ವಮಾನವ ಪ್ರಜ್ಞೆಯನ್ನು ರೂಢಿಸಿಕೊಳ್ಳುವುದು ಒಳ್ಳೆಯದೆಂದರು. 

ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿ, ವಿವೇಕಾನಂದರು ಬಾಲ್ಯ ಜೀವನದಿಂದಲೇ ಅತ್ಯಂತ ಸೂಕ್ಷ್ಮಮತಿಯಾಗಿದ್ದವರು. ದರಿದ್ರದೇವೋಭವ ಮುಖ್ಯವೆಂದು ಸಾರಿದವರು. ಹಿಂದೂ ಧರ್ಮದಲ್ಲಿದ್ದ ಮೂಢಾಚಾರಗಳನ್ನು ಖಂಡಿಸಿದವರು. ಮನುಷ್ಯನಿಗೆ ಕಾಯಿಲೆಗಳು ಬರುವಂತೆ ಸಮಾಜಕ್ಕೂ ಜಾಡ್ಯಗಳು ಬಡಿಯುತ್ತವೆ ಅವೇ ಮೂಢನಂಬಿಕೆಗಳು, ಅವು ಮೈಮೇಲಿನ ಹುಣ್ಣುಗಳಂತೆ ಇರುತ್ತವೆ. ಅವುಗಳನ್ನು ಕತ್ತರಿಸಿ ಹಾಕಬೇಕು. ನಾನು ಪವಿತ್ರ ನೀ ನನ್ನ ಮುಟ್ಟಬೇಡ ಎಂಬ ಅಸ್ಪೃಶ್ಯತೆಯು ಬೇಡ. ಎಂಬ ಜಾತ್ಯಾತೀತ ಮನೋಭಾವದವರಾಗಿದ್ದವರು. ಸರ್ವಧರ್ಮಸಮನ್ವಯಿ. ಭಾರತದ ಸಂಸ್ಕೃತಿಯನ್ನು ವಿಶ್ವಮಟ್ಟದಲ್ಲಿ ಸಾರಿದವರು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಪ್ರಾಂಶುಪಾಲ ಜಿ.ದಯಾನಂದ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ನಾಯಕರ ಮಾತುಗಳನ್ನು ಕೇಳುವುದಷ್ಟೇ ಅಲ್ಲ. ತಾವು ಶಿಸ್ತು ಮತ್ತು ಶ್ರದ್ಧೆಯಿಂದ ಓದಿ ಸಮಾಜದ ಮುಖ್ಯ ವಾಹಿನಿಗೆ ಬರಬೇಕು. ಗಿಡಕ್ಕೆ ಪೋಷಕಾಂಶಗಳನ್ನು ಕೊಟ್ಟು ಬೆಳೆಸುವಂತೆ ಶೈಕ್ಷಣಿಕ ಪೋಷಕಾಂಶಗಳನ್ನು ಬಳಸಿಕೊಂಡು ಉತ್ತಮ ಪ್ರೆಜೆಗಳಾಗಿ ಬೆಳೆಯಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ  ಉಪನ್ಯಾಸಕರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.

ರಾಜಕೀಯ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಬಿಜೆಪಿಯಿಂದ ನಾರಿ ಶಕ್ತಿಗೆ ಗೌರವ: ಬಿ.ವೈ. ವಿಜಯೇಂದ್ರ

ಕಾಂಗ್ರೆಸ್ (Congress) ಪಕ್ಷ ಮತ್ತು ಇಂಡಿ ಒಕ್ಕೂಟವು ಮಹಿಳೆಯರಿಗೆ ಮಾಡಿರುವ ಅನ್ಯಾಯವನ್ನು ಸಾರಿಸಾರಿ ಹೇಳಬೇಕೆಂದು ಶಾಸಕ ಹಾಗೂ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ಮನವಿ ಮಾಡಿದ್ದಾರೆ.

[ccc_my_favorite_select_button post_id="121644"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ದೊಡ್ಡಬಳ್ಳಾಪುರ: ನಿರ್ಜನ ಪ್ರದೇಶದಲ್ಲಿ ಹೊತ್ತಿ ಉರಿದ ಕಾರು.. ಗೃಹಿಣಿ ಭಸ್ಮ.!

ಪರಿಚಯದವರ, ಸಂಬಂಧಿಕರ ಮಾತನ್ನು ನಂಬಿ, ವಾಹನಗಳನ್ನು ನೀಡುವುದು ಎಷ್ಟು ಸಮಸ್ಯೆ ತಂದೊಡ್ಡುತ್ತದೆ ಎಂಬುದಕ್ಕೆ ಇಂದು ದೊಡ್ಡಬಳ್ಳಾಪುರದ ಹೊರವಲಯದಲ್ಲಿರುವ ಜಿಂಕೆಬಚ್ಚಹಳ್ಳಿ ನಿರ್ಜನ ಪ್ರದೇಶದಲ್ಲಿ (Desolate area) ನಡೆದಿರುವ ಘಟನೆ ಸಾಕ್ಷಿಯಾಗಿ ನಿಂತಿದೆ.

[ccc_my_favorite_select_button post_id="121633"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]