ಬೆಂ.ಗ್ರಾ.ಜಿಲ್ಲೆಯಲ್ಲಿ ಇಂದಿನಿಂದ ಮಹಿಳಾ ಕಾಯಕೋತ್ಸವ ಅಭಿಯಾನ

ಬೆಂ.ಗ್ರಾ.ಜಿಲ್ಲೆ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ರಾಜ್ಯಾದ್ಯಂತ 2021 ರ ಜನವರಿ 15 ರಿಂದ ಮಾರ್ಚ್ 15 ರವರೆಗೆ ಹಮ್ಮಿಕೊಂಡಿರುವ ಮಹಿಳಾ ಕಾಯಕೋತ್ಸವ ಅಭಿಯಾನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿ ತಾಲ್ಲೂಕಿನಲ್ಲಿ ಕಡಿಮೆ ಮಹಿಳೆಯರ ಭಾಗವಹಿಸುವಿಕೆ ಇರುವ ನಾಲ್ಕು ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 2011 ರ ಜನಗಣತಿ ಪ್ರಕಾರ ಶೇ. 48.49 ರಷ್ಟು ಮಹಿಳೆಯರಿದ್ದು, 2020-21ನೇ ಸಾಲಿನಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಶೇ. 48.23 ರಷ್ಟಿರುತ್ತದೆ.

ಕಡಿಮೆ ಭಾಗವಹಿಸುವಿಕೆಯಿರುವ ಗ್ರಾಮ ಪಂಚಾಯಿತಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯ ಪ್ರಮಾಣವನ್ನು ಶೇ.5 ರಷ್ಟು ಅಂದರೆ ಒಟ್ಟಾರೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಮಹಿಳೆಯರ ಭಾಗವಹಿಸುವಿಕೆ ಪ್ರಮಾಣವ‌ನ್ನು ಶೇ.55 ರಷ್ಟು ಹೆಚ್ಚಿಸುವುದರೊಂದಿಗೆ ಮಹಿಳಾ ಪ್ರಧಾನ ಕುಟುಂಬಗಳನ್ನು ಗುರುತಿಸುವುದು, ಕಾಮಗಾರಿ ಸ್ಥಳಗಳನ್ನು ಮಹಿಳೆ ಮತ್ತು ಮಕ್ಕಳ ಸ್ನೇಹಿಯನ್ನಾಗಿ ಮಾಡುವ ಉದ್ದೇಶ ಹೊಂದಲಾಗಿದೆ.

ತಾಲ್ಲೂಕು ಮಟ್ಟದಲ್ಲಿ ಕಾಯಕೋತ್ಸವದ ಅನುಷ್ಠಾನಕ್ಕಾಗಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ‌ಮತ್ತು‌ ಸಹಾಯಕ ನಿರ್ದೇಶಕರ ನೇತೃತ್ವದಲ್ಲಿ ಎರಡು ಟಾಸ್ಕ್ ಫೋರ್ಸ್ ಸಮಿತಿಗಳು ‌ಕಾರ್ಯನಿರ್ವಹಿಸಲಿವೆ. ಈ‌ ಸಮಿತಿಗಳಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಲ್ಲೂಕು ಸಾಮಾಜಿಕ ಪರಿಶೋಧನೆ ಸಂಯೋಜಕರು, ತಾಲ್ಲೂಕು ಐ.ಇ.ಸಿ. ಸಂಯೋಜಕರು, ಸಂಬಂಧಪಟ್ಟ‌‌  ಪಿಡಿಓಗಳು, ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್, ಗ್ರಾಮ ಪಂಚಾಯತಿ ಕ್ಲರ್ಕ್ / ಡಾಟಾ ಎಂಟ್ರಿ ಅಪರೇಟರ್, ಅಂಗನವಾಡಿ ಕಾರ್ಯಕರ್ತೆಯರು, ಸಾಮಾಜಿಕ ‌ಪರಿಶೋಧನೆ ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ತಾಲ್ಲೂಕು ಎನ್.ಆರ್.ಎಲ್.ಎಮ್. ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಮಹಿಳಾ ಕಾಯಕ ಬಂಧುಗಳು ಸದಸ್ಯರಾಗಿ ಇರಲಿದ್ದಾರೆ. ಸಮೀಕ್ಷಾ ಕಾರ್ಯಕರ್ತರು ಗ್ರಾಮ ಮಟ್ಟದಲ್ಲಿ ‌ಪ್ರತಿ‌ ದಿನ ಕನಿಷ್ಟ 50 ಮನೆಗಳಿಗೆ ಭೇಟಿ ನೀಡಿ ಮಹಿಳೆಯರ ಸಮೀಕ್ಷೆಯನ್ನು ನಡೆಸಲಿದ್ದಾರೆ.

ನರೇಗಾ ಯೋಜನೆಯಡಿಯಲ್ಲಿ ಕೆಲಸ ಮಾಡಲು ಇಚ್ಚಿಸುವ ಮಹಿಳೆಯರು ಜಾಬ್ ಕಾರ್ಡ್ ಪಡೆಯಲು ಮತ್ತು ಕೆಲಸದ ಬೇಡಿಕೆಯ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಈ ಯೋಜನೆಯಡಿಯಲ್ಲಿ ತೋಟಗಾರಿಕೆ, ಅರಣ್ಯೀಕರಣ ಮತ್ತು ರೇಷ್ಮೆ ಕಾಮಗಾರಿಗಳಿಗೆ ಗುಂಡಿ ತೆಗೆಯುವುದು, ಬದು ನಿರ್ಮಾಣ, ಕೃಷಿ ಹೊಂಡ ನಿರ್ಮಾಣ, ದನ,ಕುರಿ ಹಾಗೂ ಕೋಳಿಗಳ ಸಾಕಾಣಿಕೆ  ಶೆಡ್ ನಿರ್ಮಾಣ ಸೇರಿದಂತೆ ಮಹಿಳೆಯರು ನಿರ್ವಹಿಸಬಹುದಾದ ಇತರೆ ಅಕುಶಲ ಕಾಮಗಾರಿಗಳನ್ನು ನೀಡಲಾಗುವುದು.

ಜಿಲ್ಲೆಯಲ್ಲಿ ಜನವರಿ 15 ರಿಂದ ಮಾರ್ಚ್ 15 ರವರಗೆ ಮಹಿಳಾ ಕಾಯಕೋತ್ಸವ ಅಭಿಯಾನ ನಡೆಯಲಿದೆ. ಜಿಲ್ಲೆಯ ಪ್ರತಿ ‌ತಾಲ್ಲೂಕಿನಲ್ಲಿ ಮಹಿಳೆಯರು ಭಾಗವಹಿಸುವಿಕೆ ಅತಿ ಕಡಿಮೆ ಇರುವ 04 ಗ್ರಾಮ ಪಂಚಾಯತಿಗಳಲ್ಲಿ ಮೊದಲನೇ ತಿಂಗಳಿನಲ್ಲಿ ಕಾಯಕೋತ್ಸವ ಆಯೋಜಿಸಲಾಗುವುದು ಹಾಗೂ ಎರಡನೇ‌ ತಿಂಗಳಲ್ಲಿ 06 ಗ್ರಾಮ ಪಂಚಾಯತಿಗಳಲ್ಲಿ  ಕಾಯಕೋತ್ಸವ ಆಯೋಜಿಸಲು ಆಯ್ಕೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]