
ದೊಡ್ಡಬಳ್ಳಾಪುರ: ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮಮಂದಿರಕ್ಕೆ ಭಕ್ತರಿಂದ ದೇಣಿಗೆ ಸಂಗ್ರಹಿಸುವ ಕಾರ್ಯಕ್ಕೆ ತಾಲೂಕಿನಲ್ಲಿ ಶುಕ್ರವಾರ ಚಾಲನೆ ನೀಡಲಾಗಿದೆ.
ಹಿಂದು ಪರ ಸಂಘಟನೆಗಳ ಕಾರ್ಯಕರ್ತರು ಫೆ.27ರವರೆಗೆ ಈ ತಾಲೂಕಿನಾಧ್ಯಂತ ದೇಣಿಗೆ ಸಂಗ್ರಹ ಅಭಿಯಾನದಲ್ಲಿ ತೊಡಗಿಸಿಕೊಳ್ಳಲಿದ್ದಾರೆ.
ಅಯೋಧ್ಯೆಯಲ್ಲಿ ರಾಮಮಂದಿರ ಸಂಕೀರ್ಣವನ್ನು ಒಟ್ಟು 1100 ಕೋಟಿ ರು.ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿದ್ದು, ಈ ಪೈಕಿ 2.7 ಎಕರೆ ಪ್ರದೇಶದಲ್ಲಿ ನಿರ್ಮಾಣವಾಗಲಿರುವ ರಾಮಮಂದಿರದ ವೆಚ್ಚವೇ 300-400 ಕೋಟಿ ರೂ. ಆಗಬಹುದು ಎಂದು ಅಂದಾಜಿಸಲಾಗಿದೆ.
ಈ ದೇಗುಲವನ್ನು 2024ರೊಳಗೆ ಪೂರ್ಣಗೊಳಿಸುವ ಉದ್ದೇಶವನ್ನು ರಾಮಮಂದಿರ ನಿರ್ಮಾಣ ಟ್ರಸ್ಟ್ ಹೊಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

