
ದೊಡ್ಡಬಳ್ಳಾಪುರ: ನಗರದ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆ ವಿತರಣೆ ಕಾರ್ಯಕ್ಕೆ ಶಾಸಕ ಟಿ.ವೆಂಕಟರಮಣಯ್ಯ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ದೇಶದ ಹೆಮ್ಮೆಯ ವಿಜ್ಞಾನಿಗಳು ಕೋವಿಡ್ ಶೀಲ್ಡ್ ಎಂಬ ಲಸಿಕೆಯನ್ನು ಕಂಡು ಹಿಡಿಯುವ ಮೂಲಕ, ಮಹಾಮಾರಿ ಕರೊನಾ ಸೋಂಕನ್ನು ಹೋಗಲಾಡಿಸಲು ಪ್ರಶಂಸನೀಯ ಕಾರ್ಯವನ್ನು ಮಾಡಿದ್ದಾರೆ. ಇಂದು ನಗರದ ಐದು ಮಂದಿ ವೈದ್ಯರಿಗೆ ಲಸಿಕೆಯನ್ನು ಹಾಕುವ ಮೂಲಕ ಕಾರ್ಯಕ್ಕೆ ಚಾಲನೆ ದೊರಕಿದ್ದು, ಆರೋಗ್ಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು ಸೇರಿ ಮೊದಲ ಹಂತದಲ್ಲಿ ಕರೊನಾ ವಾರಿಯಾರ್ಸ್ ಗಳಿಗೆ ಲಸಿಕೆ ನೀಡಲಾಗುತ್ತಿದೆ ಎಂದರು.
ಈ ವೇಳೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶ್ರೀವತ್ಸ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ವೈದ್ಯಾಧಿಕಾರಿಗಳಾದ ಡಾ.ಚನ್ನಕೇಶವ್, ಡಾ.ಮಂಜುನಾಥ್, ಡಾ.ಗಿರೀಶ್, ಡಾ.ಅರ್ಚನಾ, ಡಾ.ಪಲ್ಲವಿ, ಡಾ.ಪ್ರೇಮಲತಾ, ಡಾ.ರಾಜ್ ಮತ್ತಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

