ಸಾರ್ವಜನಿಕರು ಮಾತ್ರವಲ್ಲ ಪೊಲೀಸ್ ಸಿಬ್ಬಂದಿ ಬಳಸುವ ವಾಹನಗಳ ದಾಖಲೆಗಳು ಸರಿಯಾಗಿ ಇರಲೇ ಬೇಕು: ಡಿವೈಎಸ್ಪಿ ಟಿ.ರಂಗಪ್ಪ

ದೊಡ್ಡಬಳ್ಳಾಪುರ: ನಗರದ ಭಗತ್ಸಿಂಗ್ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪೊಲೀಸ್ ಪೆರೇಡ್ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳ ಖಾಸಗಿ ದ್ವಿಚಕ್ರ ವಾಹನಗಳ ದಾಖಲಾತಿಗಳನ್ನು ಡಿವೈಎಸ್ಪಿ ಟಿ.ರಂಗಪ್ಪ ಪರಿಶೀಲನೆ ನಡೆಸಿದರು. 

ಈ ಸಂದರ್ಭದಲ್ಲಿ ಮಾತನಾಡಿ, ಸಾರ್ವಜನಿಕರ ವಾಹನಗಳ ತಪಾಸಣೆ ನಡೆಸುವ ಸಿಬ್ಬಂದಿಗಳು ಬಳಸುವ ಖಾಸಗಿ ವಾಹನಗಳ ಎಲ್ಲಾ ದಾಖಲಾತಿಗಳು ಸರಿಯಾಗಿರಬೇಕು. ಈ ನಿಟ್ಟಿನಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದಲ್ಲಿನ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು ಬಳಸುತ್ತಿರುವ ವಾಹನಗಳ ದಾಖಲಾತಿ, ಚಾಲನ ಪರವಾನಿಗಿ, ವಾಹನದ ವಿಮೆ ಮತ್ತಿತರೆ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ದಾಖಲಾತಿಗಳು ಸರಿ ಇಲ್ಲದ ಸಿಬ್ಬಂದಿಗೆ 15 ದಿನಗಳ ಕಾಲ ಗಡುವು ನೀಡಲಾಗಿದೆ ಎಂದರು.

ಪೊಲೀಸರು ಸೇರಿದಂತೆ ಎಲ್ಲರ ವಾಹನಗಳು ಅಪಘಾತಕ್ಕೆ ಒಳಗಾಗುವುದು ಸಾಮಾನ್ಯವಾಗಿರುತ್ತದೆ. ಇಂತಹ ಸಂದರ್ಭದಲ್ಲಿ ಗಾಯಗೊಂಡಾಗ ಪರಿಹಾರ ಪಡೆಯಲು ಅಥವಾ ತಮ್ಮ ಕುಟುಂಬದವರು ಪರಿಹಾರ ಪಡೆಯಲು ದಾಖಲಾತಿಗಳು ಇಲ್ಲದೆ ನ್ಯಾಯಾಲಯಕ್ಕೆ ಅಲೆದಾಡುವುದನ್ನು ನೋಡಿದ್ದೇವೆ. ಮೋಟಾರು ವಾಹನದ ಎಲ್ಲಾ ಕಾನೂನುಗಳನ್ನು ತಿಳಿದವರೇ ತಪ್ಪುಮಾಡಿದಾಗ ನ್ಯಾಯಾಲಯದಲ್ಲು ಸಹ ನ್ಯಾಯಪಡೆಯುವುದು ಕಷ್ಟವಾಗಲಿದೆ ಎಂದರು. 

1992ರ ಪೊಲೀಸ್ ಕಾನೂನಿನ ಅಡಿಯಲ್ಲಿ ಪೆಟ್ಟಿ ಕೇಸ್ಗಳನ್ನು ದಾಖಲು ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ಸೂಕ್ತ ರೀತಿಯಲ್ಲಿ ದೂರುಗಳನ್ನು ದಾಖಲಿಸಿದರೆ ದೊಡ್ಡ ಮಟ್ಟದ ಅಪರಾಧಗಳನ್ನು ತಡೆಗಟ್ಟಲು ಹಾಗೂ ಸಾರ್ವಜನಿಕರು ನೆಮ್ಮದಿಯಿಂದ ದಿನ ನಿತ್ಯದ ಬದುಕನ್ನು ನಡೆಸಲು ಸಹಕಾರಿಯಾಗಲಿದೆ. ಪೊಲೀಸ್ ಕೆಲಸದ ಕಾರ್ಯವೈಖರಿ ಬದಲಾಗಬೇಕಿದೆ. ಜನ ಸ್ನೇಹಿ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದಾಗ ಮಾತ್ರ ಸಾರ್ವಜನಿಕ ವಲಯದಲ್ಲಿ ಪೊಲೀಸರ ಬಗ್ಗೆ ಗೌರವ ಮೂಡಲು ಸಾಧ್ಯ. ಆನ್ಲೈನ್ ಗೇಮ್ಗಳು ಸೇರಿದಂತೆ ಮಟ್ಕ, ಜೂಜು, ಗಾಂಜಾ ಸೇರಿದಂತೆ ಯಾವುದೇ ಅಕ್ರಮ ಚಟುವಟಿಕೆಗಳಿಗು  ದೊಡ್ಡಬಳ್ಳಾಪುರ ಉಪವಿಭಾಗದಲ್ಲಿ ಅವಕಾಶ ಇಲ್ಲದಂತೆ ನೋಡಿಕೊಳ್ಳುವ ಜವಾಬ್ದಾರಿ ಪ್ರತಿಯೊಬ್ಬ ಬೀಟ್ ಪೊಲೀಸ್ ಸಿಬ್ಬಂದಿ ಮೇಲಿದೆ. ಈ ಬಗ್ಗೆ ಹೆಚ್ಚಿನ ನಿಗಾವಹಿಸುವ ಮೂಲಕ ಇಂತಹ ಕೃತ್ಯಗಳಲ್ಲಿ ತೊಡಗಿರುವವರ ಹಾಗೂ ಇಂತಹ ಕೃತ್ಯಗಳಿಗೆ ಪ್ರೋತ್ಸಾಹ ನೀಡುತ್ತಿರುವವ ವಿರುದ್ಧ ದೂರು ದಾಖಲಿಸಿ ರೌಢಿ ಶೀಟರ್ ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ಉಪವಿಭಾಗದ ಎಲ್ಲಾ ಠಾಣೆಗಳ ಸಬ್ಇನ್ಸ್ಪೆಕ್ಟರ್ ಹಾಗೂ ಸಿಬ್ಬಂದಿ ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

ರಾಜಕೀಯ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ದೊಡ್ಡಬಳ್ಳಾಪುರ: ಮೇ.08 ರಂದು ಜೆಡಿಎಸ್ ಸಮಾವೇಶ.. 20 ಸಾವಿರ ಮಂದಿ ಸೇರುವ ನಿರೀಕ್ಷೆ

ಜೆಡಿಎಸ್ (JDS) ಪಕ್ಷದ ಎಲ್ಲಾ ಹಿರಿಯರನ್ನು ವಿಶ್ವಾಸಕ್ಕೆ ಪಡೆಯುವ ಮೂಲಕವೇ ಮೇ.8 ರಂದು ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಜೆಡಿಎಸ್ (JDS) ರಜತ ಮಹೋತ್ಸವ ಸಮಾರಂಭ ನಡೆಸಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ

[ccc_my_favorite_select_button post_id="121754"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]