
ದೊಡ್ಡಬಳ್ಳಾಪುರ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಜ.18 ರಂದು ಬೆಳಿಗ್ಗೆ 10 ಗಂಟೆಗೆ ರೈತ ಮಹಿಳೆಯರಿಂದ ನಗರದಲ್ಲಿ ಬೃಹತ್ ಜಾಥಾ ನಡೆಯಲಿದೆ ಎಂದು ರೈತ, ದಲಿತ, ಕಾರ್ಮಿಕ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡ ಆರ್.ಚಂದ್ರತೇಜಸ್ವಿ ಹೇಳಿದರು.
ನಗರದಲ್ಲಿ ರೈತ ಮಹಿಳೆಯರ ಜಾಥಾ ಕುರಿತು ವಿವಿಧ ಸಂಘಟನೆಗಳ ಮುಖಂಡರೊಂದಿಗೆ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ರೈತ,ಕಾರ್ಮಿಕರ ಹಕ್ಕುಗಳ ಉಳಿವು,ಆಹಾರ ಭದ್ರತೆ,ಉದ್ಯೋಗದ ಉಳಿವು,ಪೆಟ್ರೋಲ್-ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ, ವಿದ್ಯುತ್ ಕ್ಷೇತ್ರ,ಬ್ಯಾಂಕ್ ಸೇರಿದಂತೆ ಸಾರ್ವಜನಿಕ ಉದ್ಯಮಗಳ ಖಾಸಗೀಕರಣ ಮಾಡಲಾಗುತ್ತಿದೆ. ಇದೇ ಸಾಲಿಗೆ ಈಗ ಇಡೀ ಕೃಷಿ ಕ್ಷೇತ್ರವನ್ನೇ ನಾಶಮಾಡುವಂತ ಕಾಯ್ದೆಗಳನನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ. ಜ.26 ರಂದು ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ ಬೃಹತ್ ಟ್ರ್ಯಾಕ್ಟರ್, ಬೈಕ್ ಜಾಥಾದಲ್ಲೂ ತಾಲ್ಲೂಕಿನಿಂದ ನೂರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಲಿದ್ದಾರೆ ಎಂದರು.
ದೊಡ್ಡಬಳ್ಳಾಪುರದ ಸಿದ್ದಲಿಂಗಯ್ಯ ವೃತ್ತದಿಂದ ರೈತ ಮಹಿಳೆಯರ ಜಾಥಾ ಆರಂಭವಾಗಲಿದೆ. ತಾಲ್ಲೂಕು ಕಚೇರಿ ವೃತ್ತದಲ್ಲಿ ನಡೆಯಲಿರುವ ಬಹಿರಂಗ ಸಭೆಯಲ್ಲಿ ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ಸಿಪಿಐಎಂ ಮುಖಂಡ ಕೆ.ಎನ್.ಉಮೇಶ್ ಸೇರಿದಂತೆ ವಿವಿಧ ಮುಖಂಡರು ಭಾಗವಹಿಸಲಿದ್ದಾರೆ. ಜಾಥಾದಲ್ಲಿ ನೇಕಾರರು, ಕಾರ್ಮಿಕರು ಸೇರಿದಂತೆ ನೂರಾರು ಜನ ಭಾಗವಹಿಸಲಿದ್ದಾರೆ ಎಂದರು.
ಸಭೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಮೂಲಕ ನಮ್ಮೊಂದಿಗೆ ಜೊತೆಯಾಗಿ.

