
ಬೆಂ.ಗ್ರಾ.ಜಿಲ್ಲೆ: ಪ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಎಸ್.ಸುರೇಶ್ಕುಮಾರ್ ಜ.19 ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಜ.19 ರಂದು ಬೆಳಗ್ಗೆ 08.00 ಗಂಟೆಗೆ, ಸಚಿವರು ನೆಲಮಂಗಲ ಟೌನ್ನ ಅಂಬೇಡ್ಕರ್ ನಗರದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿರುವ, ಶ್ರೀ ವಿದ್ಯಾ ಗಣಪತಿ ದೇವಾಲಯ, ಶಾಲಾ ಕೊಠಡಿಗಳು, ಶಾಲಾ ಕಾಂಪೌಂಡ್ ಧ್ವಜಸ್ತಂಭ ಹಾಗೂ ಅಂಗನವಾಡಿ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಂತರ ಮಾದವಾರ ರಸ್ತೆ ಮೂಲಕ ಆನೇಕಲ್ ತಲುಪಲಿದ್ದಾರೆ ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿ ಫಣಿಕುಮಾರ್.ಟಿ.ಎಸ್. ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

