ಆಸ್ಟ್ರೇಲಿಯಾ ವಿರುದ್ದ ಭಾರತಕ್ಕೆ ಐತಿಹಾಸಿಕ ಗೆಲುವು

ಬ್ರಿಸ್ಬೇನ್: ಬಾರ್ಡರ್ – ಗವಾಸ್ಕರ್ ಟ್ರೋಫಿಯ ಟೆಸ್ಟ್​ ಸರಣಿಯಲ್ಲಿ ಭಾರತ 2-1 ಮುನ್ನಡೆ ಸಾಧಿಸುವ ಮೂಲಕ ಕಾಂಗರೂಗಳ ನಾಡಿನಲ್ಲಿ ಟೆಸ್ಟ್​ ಸರಣಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದೆ.

ಭಾರತ ತಂಡದ ವಿಕೆಟ್ ಕೀಪರ್ ರಿಷಭ್‍ಪಂತ್ ಹಾಗೂ ಶುಭಮನ್ ಗಿಲ್‍ರ ಆಟದಿಂದಾಗಿ ರಹಾನೆ ತಂಡವು 2-1 ರಿಂದ ಐತಿಹಾಸಿಕ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ನೀಡಿದ್ದ 328 ರನ್‍ಗಳ ಗುರಿಯನ್ನು ಬೆನ್ನಟ್ಟಿದ್ದ ಟೀಂ ಇಂಡಿಯಾಗೆ ನಿನ್ನೆ ಮಳೆ ಕಾಡಿತಾದರೂ ಇಂದು ದಿನಪೂರ್ತಿ ಭಾರತದ ಯುವ ಬ್ಯಾಟ್ಸ್‍ಮನ್‍ಗಳು ಆಸ್ಟ್ರೇಲಿಯಾದ ಅನುಭವಿ ಬೌಲಿಂಗ್ ಪಡೆಯನ್ನು ದಂಡಿಸುವ ಮೂಲಕ ರಹಾನೆ ತಂಡ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ.

ಇಂದು ಬೆಳಗ್ಗೆ ಇನ್ನಿಂಗ್ಸ್ ಆರಂಭಿಸಿದ ಉಪನಾಯಕ ರೋಹಿತ್ ಶರ್ಮಾ ಹಾಗೂ ಗಿಲ್ ಆಕ್ರಮಣಕಾರಿ ಆಟ ಪ್ರದರ್ಶಿಸಲು ಮುಂದಾದರಾದರೂ ರೋಹಿತ್ 3 ರನ್ ಗಳಿಸಿ ಕುಮ್ಮಿನ್ಸ್ ಬೌಲಿಂಗ್‍ನಲ್ಲಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು.

ಪಂತ್- ಪೂಜಾರ ತಾಳ್ಮೆಯ ಆಟ:‌ ರಹಾನೆ ಔಟಾದ ನಂತರ ಕ್ರೀಸ್‍ಗೆ ಇಳಿದ ರಿಷಭ್‍ಪಂತ್ ಅವರು ಪೂಜಾರರೊಂದಿಗೆ ಕೂಡಿಕೊಂಡು ಆಸ್ಟ್ರೇಲಿಯಾ ಬೌಲಿಂಗ್ ಪಡೆಯನ್ನು ದಂಡಿಸಿದರು. ಈ ಜೋಡಿಯು ಟೀ ವಿರಾಮದ ವೇಳೆಗೆ ತಂಡದ ಮೊತ್ತವನ್ನು 183 ರನ್ ಗಡಿ ಮುಟ್ಟಿಸಿದರು.

ಟೀ ವಿರಾಮದ ನಂತರ ಆಕ್ರಮಣಕಾರಿ ಆಟಕ್ಕೆ ಮುಂದಾದ ಪೂಜಾರ 56 ರನ್ ಗಳಿಸಿ ಕುಮ್ಮಿನ್ಸ್ ಬೌಲಿಂಗ್‍ನಲ್ಲಿ ಎಲ್‍ಬಿಡಬ್ಲ್ಯು ಬಲೆಗೆ ಬಿದ್ದಾಗ ತಂಡದ ಮೊತ್ತ 228 ರನ್ ಗಳಾಗಿತ್ತು. ನಂತರ ಬಂದ ಮಯಾಂಕ್ ಆಗರ್ವಾಲ್ 9 ರನ್ ಗಳಿಸಿ ನಿರಾಸೆಯಿಂದ ಪೆವಿಲಿಯನ್‍ನತ್ತ ಹೆಜ್ಜೆ ಹಾಕಿದರು.

ಅರ್ಧಶತಕ ಬಾರಿಸಿದ ಬಳಿಕ ಪೂಜಾರ ಹೆಚ್ಚುಹೊತ್ತು ಕ್ರೀಸ್​ನಲ್ಲಿ ನಿಲ್ಲಲಿಲ್ಲ. 211 ಎಸೆತಗಳಲ್ಲಿ 56 ರನ್ ಗಳಿಸಿ ಎಲ್​ಬಿ ಬಲೆಗೆ ಪೂಜಾರ ಸಿಲುಕಿದರು. ಮಯಾಂಕ್ ಅಗರ್ವಾಲ್ ಮತ್ತೊಮ್ಮೆ ವೈಫಲ್ಯ ಅನುಭವಿಸಿ 9 ರನ್​ಗೆ ನಿರ್ಗಮಿಸಿದರು. ಆದರೆ, ಇತ್ತ ರಿಷಭ್ ಪಂತ್ ತಂಡದ ಗೆಲುವಿಗೆ ಹೋರಾಟ ನಡೆಸುತ್ತಲೇ ಇದ್ದರು.

ಅಂತಿಮ ಹಂತದಲ್ಲಿ ವಾಷಿಂಗ್ಟನ್ ಸುಂದರ್ ಜೊತೆಗೂಡಿದ ಪಂತ್ ಆಕರ್ಷಕ ಅರ್ಧಶತಕ ಸಿಡಿಸಿ ಬಿರುಸಿನ ಬ್ಯಾಟಿಂಗ್ ಮಾಡಿ ತಂಡಕ್ಕೆ ಗೆಲುವು ತಂದುಕೊಡುವಲ್ಲಿ ಯಶಸ್ವಿಯಾದರು. ಭಾರತ 97 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 329 ರನ್ ಬಾರಿಸಿ 3 ವಿಕೆಟ್​ಗಳ ಜಯ ತನ್ನದಾಗಿಸಿತು.

ಸ್ಕೋರ್ ವಿವರ: ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್: 369, ದ್ವಿತೀಯ ಇನ್ನಿಂಗ್ಸ್ 294 ರನ್

ಭಾರತ ಮೊದಲ ಇನ್ನಿಂಗ್ಸ್:336, ದ್ವಿತೀಯ ಇನ್ನಿಂಗ್ಸ್ 329/7

(ಪೊಟೋ ಕೃಪೆ: ಇಂಡಿಯನ್ ಕ್ರಿಕೆಟ್ ಟೀಮ್)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]