
ದೊಡ್ಡಬಳ್ಳಾಪುರ: ಸದಾ ಒತ್ತಡದಲ್ಲೆ ಕಾರ್ಯನಿರ್ವಹಸುತ್ತಿರುವ ಅಧಿಕಾರಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡೆಯಲ್ಲಿ ಭಾಗವಹಿಸುವುದನ್ನು ಅಧಿಕಾರಿಗಳು ರೂಢಿಸಿಕೊಳ್ಳಬೇಕೆಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ಸಲಹೆ ನೀಡಿದರು.
ತಾಲ್ಲೂಕು ಆಡಳಿತ ಮತ್ತು ತಾಲ್ಲೂಕು ಪಂಚಾಯ್ತಿ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ(ರಿ.) ದೊಡ್ಡಬಳ್ಳಾಪುರ ತಾಲ್ಲೂಕು ಘಟಕ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2020-21 ನೇ ಸಾಲಿನ ತಾಲ್ಲೂಕು ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲರಲ್ಲಿಯೂ ಸ್ಪರ್ಧಾ ಮನೋಭಾವ ಇರಬೇಕಿದೆ. ಆದರೆ ಆ ಸ್ಪರ್ಧೆ ಕ್ರೀಡಾಲೋಕಕ್ಕೆ ಮಾತ್ರ ಸೀಮಿತವಾಗಿರಬೇಕು, ಆರೋಗ್ಯದ ದೃಷ್ಟಿಯಿಂದ ಕ್ರೀಡೆ ಬಹು ಮುಖ್ಯ ಎಲ್ಲರೂ ಏಕತೆ ಮತ್ತು ಉತ್ತಮ ಮನೋಭಾವದಿಂದ ಸ್ಪರ್ಧೆ ಮಾಡಬೇಕು ಎಂದರು
ಈ ವೇಳೆ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣ ಗೌಡ, ಮಾತನಾಡಿ ಸದಾಕಾಲ ಜನಪರ ಕಾರ್ಯಗಳ ಒತ್ತಡದಲ್ಲಿರುವ ಅಧಿಕಾರಿಗಳು ವರ್ಷದಲ್ಲಿ ಒಮ್ಮೆಯಾದರೂ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಒತ್ತಡದಿಂದ ಹೊರಬರಬೇಕೆಂದರು.
ಈ ವೇಳೆ ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಯಶೋಧಮ್ಮ ಶಿವಕುಮಾರ್, ಇಒ ಮುರುಡಯ್ಯ, ಸ್ಥಾಯಿಸಮಿತಿ ಅಧ್ಯಕ್ಷೆ ಚನ್ನಮ್ಮ ರಾಮಲಿಂಗಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ವಿಜಯ್ ಕುಮಾರ್, ದೇವನಹಳ್ಳಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಾಲಕೃಷ್ಣ, ಕ್ಷೇತ್ರ ಶಿಕ್ಷಣದಿಕಾರಿ ಬೈಯಪ್ಪರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಕೆ.ಸೋಮಶೇಖರ್, ನಗರಸಭೆ ಎಇಇ ಶೇಕ್ ಫಿರೋಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಗಂಗಾಧರ್, ಕಂದಾಯ ಇಲಾಖೆ ನೌಕರರ ಸಂಘದ ಅಧ್ಯಕ್ಷ ಸುರೇಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಜೈಕುಮಾರ್ ಸೇರಿದಂತೆ ಅನೇಕರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

