
ಬೆಂ.ಗ್ರಾ.ಜಿಲ್ಲೆ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲ್ಲೂಕು ವ್ಯಾಪ್ತಿಯ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿಕಲಚೇತನ ವಿದ್ಯಾರ್ಥಿಗಳಿಗೆ ಇತ್ತೀಚಿನ ತಂತ್ರಜ್ಞಾನ ಮತ್ತು ತಂತ್ರಾಂಶದ ಉಪಯೋಗದಿಂದ ಉನ್ನತ ಶಿಕ್ಷಣ ಪಡೆಯಲು ಅನುಕೂಲವಾಗುವಂತೆ ಉಚಿತ ಟಾಕಿಂಗ್ ಲ್ಯಾಪ್‌ಟಾಪ್ ಪಡೆಯಲು ಶೇ.40ಕ್ಕಿಂತ ಅಧಿಕ ದೃಷ್ಟಿ ದೋಷವುಳ್ಳ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿಕಲಚೇತನರು ನಿಗದಿತ ಅರ್ಜಿ ನಮೂನೆಗಳನ್ನು ತಮ್ಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್.ಡಬ್ಲ್ಯೂ. ಹಾಗೂ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಂ.ಆರ್.ಡಬ್ಲ್ಯೂ. ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಲು 2021ರ ಫೆಬ್ರವರಿ 01 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗೆ, ತಮ್ಮ ಗ್ರಾಮ ಪಂಚಾಯಿತಿಯ ವಿ.ಆರ್.ಡಬ್ಲ್ಯೂ, ತಾಲ್ಲೂಕು ಪಂಚಾಯತಿಯ ಎಂ.ಆರ್.ಡಬ್ಲ್ಯೂ ಹಾಗೂ ವಿಕಲಚೇತನರ ಸಹಾಯವಾಣಿ ದೂ.ಸಂ.: 080-29787441 ಅನ್ನು ಸಂಪರ್ಕಿಸಬಹುದಾಗಿದೆ ಎಂದು ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

