ಹಕ್ಕಿ ಜ್ವರ: ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜಾಗೃತಿ ಮೂಡಿಸಿ: ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂ.ಗ್ರಾ.ಜಿಲ್ಲೆ: ದೇಶದ ವಿವಿಧ ರಾಜ್ಯಗಳಲ್ಲಿ ಹಕ್ಕಿ ಜ್ವರ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಣಿಜನ್ಯ ರೋಗಗಳ ತುರ್ತು ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದುವರೆಗೂ ಹಕ್ಕಿಜ್ವರದ ಯಾವುದೇ ಪ್ರಕರಣಗಳು ಪತ್ತೆಯಾಗಿರುವುದಿಲ್ಲ. ಹಕ್ಕಿ ಜ್ವರದ ಬಗ್ಗೆ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ, ಇದುವರೆಗೂ 254 ಹಕ್ಕಿಗಳ ದ್ರಾವಣದ ಮಾದರಿಯನ್ನು ಸಂಗ್ರಹಿಸಿ ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಕಳಿಸಲಾಗಿದ್ದು, ಎಲ್ಲಾ ವರದಿಗಳು ನೆಗೆಟಿವ್ ಎಂದು ಬಂದಿರುತ್ತದೆ. ಜನರು ಕೋಳಿ ಮಾಂಸ ಮತ್ತು ಮೊಟ್ಟೆಯನ್ನು ಚೆನ್ನಾಗಿ ಬೇಯಿಸಿ ತಿನ್ನಬಹುದು ಎಂದು ಸಲಹೆ ನೀಡಿದರು.

ಜಿಲ್ಲಾ ವ್ಯಾಪ್ತಿಯಲ್ಲಿ ಐದಕ್ಕಿಂತ ಹೆಚ್ಚು ಹಕ್ಕಿಗಳು ಅಸಹಜ ಸಾವು ಕಂಡುಬಂದಲ್ಲಿ ಸಾರ್ವಜನಿಕರು ಕೂಡಲೇ ಹತ್ತಿರದ ಸ್ಥಳೀಯ ಸಂಸ್ಥೆ, ಪಶುವೈದ್ಯ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಕೆರೆಗಳ ನೀರನ್ನು ಪರೀಕ್ಷಿಸುವ ಕಾರ್ಯ ಮಾಡಬೇಕು ಎಂದರಲ್ಲದೆ, ಕೋಳಿ ಸಾಕಾಣಿಕೆ, ಕಸಾಯಿಖಾನೆ, ಕೋಳಿ ಮಾಂಸದ ಅಂಗಡಿಗಳಿಗೆ ಭೇಟಿ ನೀಡಿ ಸ್ವಚ್ಛತೆ ಬಗ್ಗೆ ಪರಿಶೀಲಿಸುವ ಜೊತೆಗೆ ತ್ಯಾಜ್ಯವನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸಭೆ ನಡೆಸುವ ಮೂಲಕ ಹಕ್ಕಿ ಜ್ವರದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಎಂದರಲ್ಲದೆ, ಉದಾಸೀನತೆ ತೋರದೆ, ಎಚ್ಚರಿಕೆ ವಹಿಸಿ  ಎಂದರು.

ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆ ಉಪ ನಿರ್ದೇಶಕ ಡಾ.ಜಿ.ಎಂ.ನಾಗರಾಜು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 385 ಕೋಳಿ ಸಾಕಾಣಿಕೆ ಕೇಂದ್ರಗಳಿದ್ದು, ಒಟ್ಟಾರೆ  31,38,559 ಕೋಳಿಗಳನ್ನು ಸಾಕಲಾಗುತ್ತಿದೆ ಹಾಗೂ ಹೊಸಕೋಟೆ ತಾಲ್ಲೂಕಿನ ಅಮಾನಿಕೆರೆ ಮಾತ್ರ ವಲಸೆ ಹಕ್ಕಿಗಳ ತಾಣವಾಗಿದೆ ಎಂದರು.

ನಾಲ್ಕು ತಾಲ್ಲೂಕಿನ ಪಶು ಪಾಲನಾ ಇಲಾಖೆ ಸಹಾಯಕ ನಿರ್ದೇಶಕರು ಕೋಳಿ ಸಾಕಾಣಿಕೆ ಕೇಂದ್ರಗಳಿಗೆ ಭೇಟಿ ನೀಡಿ ಕೋಳಿಗಳ ಅಸಹಜ ಸಾವಿನ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸುತ್ತಿದ್ದು, ಹಕ್ಕಿಜ್ವರದ ಯಾವುದೇ ಪ್ರಕರಣಗಳು ವರದಿಯಾಗಿಲ್ಲ ಎಂದು ಮಾಹಿತಿ ನೀಡಿದರು.

ಪ್ರಾಣಿ ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ವಿಜ್ಞಾನಿ ಡಾ.ಶಿವರಾಜು ಹಕ್ಕಿ ಜ್ವರದ ಬಗ್ಗೆ ಮಾಹಿತಿ ನೀಡುತ್ತಾ, ಸೋಂಕಿತ ಹಕ್ಕಿಗಳ ಹಿಕ್ಕೆ, ಕಣ್ಣು, ಮೂಗು ದ್ರವದ ನೇರ ಸಂಪರ್ಕದಿಂದ ಗಾಳಿಯ ಮೂಲಕ ಹಾಗೂ ಸೋಂಕಿತ ಕೋಳಿ ಆಹಾರ, ನೀರು ಮತ್ತು ಉಪಕರಣಗಳಿಂದ ಈ ವೈರಸ್ ಹರಡುತ್ತದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಆಂಥೋಣಿ ಮರಿಯಪ್ಪನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸುಮಾ, ಪಶುವೈದ್ಯಕೀಯ ಸಹಾಯಕ ನಿರ್ದೇಶಕ ಡಾ.ಅನಿಲ್‌ಕುಮಾರ್, ನಗರಸಭೆ ಪೌರಾಯುಕ್ತರು/ಮುಖ್ಯಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]