ಬೆಂ.ಗ್ರಾ.ಜಿಲ್ಲೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಖಾಲಿ ಇರುವ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ನಿವೃತ್ತರಾಗಿರುವ ಪತ್ರಾಂಕಿತ ಅಧಿಕಾರಿಗಳಾಗಿರಬೇಕು. ಅಭ್ಯರ್ಥಿಗಳು ಮಾನಸಿಕವಾಗಿ ದೈಹಿಕವಾಗಿ ಸಧೃಢರಾಗಿರತಕ್ಕದ್ದು ಹಾಗೂ 60-65 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇಲ್ಲಿ ಪಡೆದು 2021ರ ಫೆಬ್ರವರಿ 09 ರೊಳಗೆ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾಡಳಿತ ಭವನ, 2ನೇ ಮಹಡಿ, ಕೊಠಡಿ ಸಂಖ್ಯೆ: 206, ವಿಶ್ವನಾಥಪುರ ಪೊಲೀಸ್ ಠಾಣಾ ಮುಂಭಾಗ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಹಾಗೂ ದೂ.ಸಂ.: 080-29560034 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕಿ ಪುಷ್ಪ.ಜಿ.ರಾಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.