ಬೆಂ.ಗ್ರಾ.ಜಿಲ್ಲೆ: ಕೋವಿಡ್-19/ ಕೊರೋನಾ ವೈರಾಣು ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ, ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಯಿತು.
“ಶ್ರೀ ನಿಜಶರಣ ಅಂಬಿಗರ ಚೌಡಯ್ಯ” ಅವರ ಭಾವಚಿತ್ರಕ್ಕೆ ದೊಡ್ಡಬಳ್ಳಾಪುರ ತಹಶೀಲ್ದಾರ್ ಟಿ.ಎಸ್.ಶಿವರಾಜ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಬಿ.ಮಂಜುನಾಥ ಆರಾಧ್ಯ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.