
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿಂದು ಉಪ ಆರೋಗ್ಯ ಘಟಕವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್ ಅವರು ಉದ್ಘಾಟಿಸಿದರು.
ಈ ಆರೋಗ್ಯ ಘಟಕದಲ್ಲಿ ಜಿಲ್ಲಾಡಳಿತ ಭವನದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರಿಗೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಈ ಘಟಕದಲ್ಲಿ ಒಬ್ಬ ವೈದ್ಯ, ಒಬ್ಬ ಶುಶ್ರೂಷಕಿ ಹಾಗೂ ಒಂದು ಡಿ ಗ್ರೂಪ್ ನೌಕರರು ಇರಲಿದ್ದಾರೆ.
ಆರೋಗ್ಯ ಘಟಕದಲ್ಲಿ ಪ್ರಾಥಮಿಕ ಚಿಕಿತ್ಸೆ ದೊರೆಯಲಿದ್ದು, ಉಸಿರಾಟದ ಸಮಸ್ಯೆ, ಹೃದಯ ಸಂಬಂಧಿ ಸಮಸ್ಯೆಗಳ ಹೊರ ರೋಗಿಗಳು ಬಂದಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗುವುದು. ಜಿಲ್ಲಾಡಳಿತದ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ಒ.ಪಿ.ಡಿ. ತಪಾಸಣೆ ಮಾಡಲಾಗುವುದು.
ಆರೋಗ್ಯ ಘಟಕದಲ್ಲಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿ.ಪ್ರಸಾದ್ ಅವರ ಆರೋಗ್ಯ ತಪಾಸಣೆ ಮಾಡಲಾಯಿತು ಹಾಗೂ ಮತ್ತು ಸಿಬ್ಬಂದಿ ವರ್ಗದ ನೌಕರರಿಗೆ ಇಸಿಜಿ ಪರೀಕ್ಷೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ವಿನುತಾರಾಣಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

