ಸಹಕಾರಿ ನಡಿಗೆ ಡಿಸಿಸಿ ಬ್ಯಾಂಕ್ ಕಡೆಗೆ: ಎಸ್.ಟಿ.ಸೋಮಶೇಖರ್ / ಬೆಂ.ಗ್ರಾ.ಜಿಲ್ಲೆಯ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ.,(ಬಿಡಿಸಿಸಿ) ಶಾಖೆಗಳಿಗೆ ಭೇಟಿ

ಬೆಂ.ಗ್ರಾ.ಜಿಲ್ಲೆ: ಪ್ರಸಕ್ತ ಸಾಲಿನಲ್ಲಿ ರೈತರಿಗೆ ನೀಡಬೇಕೆಂದಿರುವ ಬೆಳೆ ಸಾಲದ ಗುರಿಯನ್ನು ತಲುಪುವ ನಿಟ್ಟಿನಲ್ಲಿ “ಸಹಕಾರಿ ನಡಿಗೆ ಡಿಸಿಸಿ ಬ್ಯಾಂಕ್ ಕಡೆಗೆ” ಎಂಬ ಧ್ಯೇಯದೊಂದಿಗೆ ರಾಜ್ಯದಲ್ಲಿರುವ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಎಲ್ಲಾ ಅಂಕಿ-ಅಂಶಗಳನ್ನು ಪಡೆಯಲಾಗುತ್ತಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್  ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ದೇವನಹಳ್ಳಿಯ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ.,(ಬಿಡಿಸಿಸಿ) ಶಾಖೆಗಳಿಗೆ ಗುರುವಾರ ಭೇಟಿ ನೀಡಿ, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಪ್ರಗತಿ ಪರಿಶೀಲನೆ ನಡೆಸಿ ಸಹಕಾರ ಸಚಿವರು ಮಾತನಾಡಿದರು.

ರಾಜ್ಯದ 24.50 ಲಕ್ಷ ರೈತರಿಗೆ ಶೀಘ್ರವಾಗಿ ರೂ.15,300 ಕೋಟಿ ಬೆಳೆ ಸಾಲವನ್ನು ಫೆಬ್ರವರಿ ಮಾಸಾಂತ್ಯದೊಳಗೆ ಸಂಪೂರ್ಣ ಸಾಲ ವಿತರಣೆ ಮಾಡಲು ಗುರಿ ಹೊಂದಲಾಗಿದೆ. ಈಗಾಗಲೇ 19.50 ಲಕ್ಷ ರೈತರಿಗೆ 12.50 ಸಾವಿರ ಕೋಟಿ ರೂಪಾಯಿ ಸಾಲವನ್ನು ವಿತರಣೆ ಮಾಡಲಾಗಿದೆ. ಯಾವ ಯಾವ ವಿಭಾಗದಲ್ಲಿ ಬಾಕಿ ಇದೆ, ಯಾವ ಸಾಲ ನೀಡಿಕೆಯಲ್ಲಿ ಹಿನ್ನಡೆಯಾಗಿದೆ, ಎಂಬ ಬಗ್ಗೆ ಮಾಹಿತಿ ಕಲೆಹಾಕಿ, ಶೀಘ್ರದಲ್ಲಿ ಗುರಿ ಮುಟ್ಟುವಂತೆ ಸೂಚನೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ನೂರಕ್ಕೆ ನೂರು ಗುರಿ ಮುಟ್ಟುವತ್ತ ಹೆಜ್ಜೆಯಿಟ್ಟಿದ್ದು, ಈಗಾಗಲೇ ಮಂಡ್ಯದ ಪಾಂಡವಪುರ, ನಾಗಮಂಗಲ, ಮೈಸೂರಿನ ಟಿ.ನರಸೀಪುರ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಲಾಗಿದೆ. ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಹಾಗೂ ದೇವನಹಳ್ಳಿ ಡಿಸಿಸಿ ಬ್ಯಾಂಕ್ ಶಾಖೆಗಳಿಗೆ ಭೇಟಿ ನೀಡಿ ಪರಿಶೀಲಿಸಿ ಸಂಪೂರ್ಣ ಮಾಹಿತಿ ಪಡೆದು, ಸೂಕ್ತ ಮಾರ್ಗದರ್ಶನ, ಸೂಚನೆ ನೀಡಿದ್ದೇನೆ ಎಂದರು.

ಸರ್ಕಾರವು ಜನಪರ ಹಾಗೂ ರೈತಪರವಾಗಿದ್ದು, ಕೊರೋನಾ ಸಂಕಷ್ಟದ ಕಾಲದಲ್ಲಿ ಸಾಲ ಕೊಡುವುದೇ ಕಷ್ಟ ಎಂಬ ಸ್ಥಿತಿಯಲ್ಲಿಯೂ, ಮುಖ್ಯಮಂತ್ರಿಗಳ ನಿರ್ದೇಶನದಂತೆ ಕಳೆದ ವರ್ಷಕ್ಕಿಂತ ಒಂದೂವರೆ ಸಾವಿರ ಕೋಟಿಗೂ ಅಧಿಕ ಅಂದರೆ 15,300 ಕೋಟಿ ರೂಪಾಯಿ ಸಾಲ ನೀಡುವ ಗುರಿಯನ್ನು ಸಹಕಾರ ಇಲಾಖೆಯಿಂದ ಹಾಕಿಕೊಳ್ಳಲಾಗಿತ್ತು. ಅದರಂತೆ ಒಟ್ಟು 24.50 ಲಕ್ಷ ರೈತರಿಗೆ ಸಾಲ ವಿತರಣೆ ಮಾಡುವ ಹೊಣೆಯನ್ನು ಅಪೆಕ್ಸ್, 21 ಡಿಸಿಸಿ ಬ್ಯಾಂಕ್ ಹಾಗೂ ಪ್ಯಾಕ್ಸ್ ಗಳಿಗೆ ವಹಿಸಲಾಗಿತ್ತು. ಈಗಾಗಲೇ 19,17,334 ರೈತರಿಗೆ 12420.10 ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಬೆಂಗಳೂರಿನ ಚಾಮರಾಜನಗರದಲ್ಲಿರುವ ಡಿಸಿಸಿ ಬ್ಯಾಂಕ್ ಒಟ್ಟಾರೆಯಾಗಿ ವಿತರಣೆ ಮಾಡಿರುವ ಸಾಲ, ಮರುಪಾವತಿ ಹಾಗೂ ಹಾಕಿಕೊಂಡಿರುವ ಗುರಿಗಳ ಬಗ್ಗೆ ಸಚಿವರು ಮಾಹಿತಿ ಕೇಳಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬ್ಯಾಂಕ್ ಅಧಿಕಾರಿಗಳು, ಪ್ರಸಕ್ತ ಸಾಲಿನಲ್ಲಿ 1 ಲಕ್ಷ ಮಂದಿಗೆ 550 ಕೋಟಿ ರೂಪಾಯಿ ಸಾಲ ನೀಡಬೇಕೆಂಬ ಗುರಿ ಹೊಂದಲಾಗಿತ್ತು. ಈವರೆಗೆ 80060 ರೈತರಿಗೆ 421 ಕೋಟಿ ರೂಪಾಯಿ ಸಾಲ ವಿತರಣೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 

ಪ್ರಸಕ್ತ ಆರ್ಥಿಕ ವರ್ಷದೊಳಗೆ ಹಾಕಿಕೊಂಡ ಗುರಿ ಮುಟ್ಟುವ ಮೂಲಕ ಶೇ.100ರಷ್ಟ್ಟು ಸಾಲ ವಿತರಣೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಬ್ಯಾಂಕ್ ಗಳ ಪ್ರಗತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಹೊಸಕೋಟೆ ಡಿಸಿಸಿ ಬ್ಯಾಂಕ್ ಉತ್ತಮ ಗುರಿಯನ್ನು ಮುಟ್ಟಿದೆ. ಇದೇ ರೀತಿಯಾಗಿ ಮುಂದೆಯೂ ಕೆಲಸ ಮಾಡಲಿ ಎಂದು ಹೇಳಿದರು.

ಹೊಸಕೋಟೆ ಶಾಖೆಯಲ್ಲಿ ಇದುವರೆಗೆ ನೀಡಿರುವ ಕೃಷಿ ಮತ್ತು ಕೃಷಿಯೇತರ ಸಾಲಗಳ ಮೊತ್ತ 34.60 ಕೋಟಿ ರೂಪಾಯಿಗಳಾಗಿವೆ ಎಂದು ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿದಾಗ ಪ್ರತಿಕ್ರಿಯಿಸಿದ ಸಚಿವರು ಮಧ್ಯಮಾವಧಿ ಸಾಲದಡಿ ಹೈನುಗಾರಿಕೆಗೆ, ಕೋಳಿ ಸಾಕಾಣಿಕೆಗೆ, ಕುರಿ ಸಾಕಾಣಿಕೆಗೆ ಹಾಗೂ ನೇಕಾರಿಕೆಗೆ ಸಾಲ ನೀಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎಲ್ಲಾ ಪಕ್ಷದವರೂ ಆಯ್ಕೆಗೊಂಡಿದ್ದರೂ ಪ್ರಸ್ತುತವಾಗಿ ಸಹಕಾರ ರಂಗದಲ್ಲಿ ಪಕ್ಷಭೇದ ಮರೆತು ತಂಡವಾಗಿ ಕಾರ್ಯನಿರ್ವಹಣೆ ಮಾಡಲಾಗುತ್ತಿದೆ. ಇದೇ ರೀತಿ ತಂಡ ಮುಂದುವರಿದರೆ ಸಹಕಾರ ಇಲಾಖೆ ಶೇಕಡಾ 100ರಷ್ಟು ಸಾಧನೆ ಮಾಡಲಿದೆ ಎಂದು ಹೇಳಿದರು. ಹೈನುಗಾರಿಕೆಗೆ 2 ಲಕ್ಷ ರೂಪಾಯಿ ಸಾಲವನ್ನು ಆತ್ಮನಿರ್ಭರ ಅಡಿ ನೀಡಲಾಗುತ್ತಿದೆ. ರೈತರಿಗೆ ಯಾವುದೇ ರೀತಿಯಲ್ಲಿ ರಸಗೊಬ್ಬರಕ್ಕೆ ತೊಂದರೆಯಾಗುತ್ತಿಲ್ಲ. ಎಲ್ಲವನ್ನೂ ಸರಾಗವಾಗಿ ನಡೆಸಿಕೊಂಡು ಹೋಗಲಾಗುತ್ತಿದೆ. ಇದು ಒಳ್ಳೆಯ ಬೆಳವಣಿಗೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಬ್ಯಾಂಕ್ ನಗರ ಹಾಗೂ ಗ್ರಾಮಾಂತರ ಬಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷರಾದ ಹನುಮಂತಯ್ಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಕೃಷ್ಣಮೂರ್ತಿ, ಪಟ್ಟಾಭಿರಾಮಯ್ಯ, ಮಂಡಿಬೆಲೆ ರಾಜಣ್ಣ ಸೇರಿದಂತೆ ಅಧಿಕಾರಿಗಳು ಹಾಜರಿದ್ದರು.

ಸಚಿವರು ಮೊದಲಿಗೆ ಹೊಸಕೋಟೆ ದಿ ಟೌನ್ ಕೋ ಆಪರೇಟಿವ್ ಬ್ಯಾಂಕ್ ಕಚೇರಿಗೆ ಭೇಟಿ ನೀಡಿದ ಸಹಕಾರ ಸಚಿವರು, ಬ್ಯಾಂಕ್ ವ್ಯವಹಾರಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ನಂತರ ಹೊಸಕೋಟೆ ಟಿಎಪಿಸಿಎಂಎಸ್ ಶಾಖೆಗೆ ಭೇಟಿ ನೀಡಿದ ಸಚಿವರು, ಕಾರ್ಯವೈಖರಿ ಬಗ್ಗೆ ತೃಪ್ತಿ ವ್ಯಕ್ತಪಡಿಸಿದರು. ಇದೇ ವೇಳೆ ಶಾಖೆಯ ರಸಗೊಬ್ಬರ ಗೋದಾಮುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತದನಂತರ ದೇವನಹಳ್ಳಿ ಬಿಡಿಸಿಸಿ ಬ್ಯಾಂಕಿಗೆ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.

ಬಿಡಿಸಿಸಿ ಬ್ಯಾಂಕ್‍ನ ಅಧ್ಯಕ್ಷ ಹನುಮಂತಯ್ಯ, ಉಪಾಧ್ಯಕ್ಷ ಪಟ್ಟಾಭಿರಾಮಯ್ಯ, ವ್ಯವಸ್ಥಾಪಕ ನಿರ್ದೇಶಕಿ ಮೀನಾ ನಾಯ್ಕ್, ಟಿಎಪಿಸಿಎಂ ನ ಅಧ್ಯಕ್ಷರಾದ ಮಂಜುನಾಥ ಹಾಗೂ ಮಂಡಿಬೆಲೆ ರಾಜಣ್ಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]