
ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ವಿತರಣಾ ಕಾರ್ಯಕ್ರಮವಾದ ಆರನೇ ದಿನವಾದ ಜ.22ರಂದುನೀಡಲಾದ 2447 ಗುರಿಯಲ್ಲಿ ಒಟ್ಟು 1002 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಒಂಭತ್ತು ಲಸಿಕಾ ಕೇಂದ್ರದಲ್ಲಿ ನೀಡಲಾದ 775 ಗುರಿಯಲ್ಲಿ 253 ಮಂದಿ ಆರೋಗ್ಯ ಕಾರ್ಯಕರ್ತರಿಗೆ, ದೇವನಹಳ್ಳಿ ತಾಲ್ಲೂಕಿನ ಆರು ಲಸಿಕಾ ಕೇಂದ್ರದಲ್ಲಿ ನೀಡಲಾದ 382 ಗುರಿಯಲ್ಲಿ 285 ಮಂದಿ ಆರೋಗ್ಯ ಕಾರ್ಯಕರ್ತರಿಗೆ, ಹೊಸಕೋಟೆ ತಾಲ್ಲೂಕಿನ ಹದಿಮೂರು ಲಸಿಕಾ ಕೇಂದ್ರದಲ್ಲಿ ನೀಡಲಾದ 886 ಗುರಿಯಲ್ಲಿ 354 ಮಂದಿ ಹಾಗೂ ನೆಲಮಂಗಲ ತಾಲ್ಲೂಕಿನ ಏಳು ಲಸಿಕಾ ಕೇಂದ್ರದಲ್ಲಿ ನೀಡಲಾದ 404 ಗುರಿಯಲ್ಲಿ 110 ಮಂದಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

