ಮಾತೃ ಹೃದಯದ ಮಹಿಳೆ ಸುಧಾ ಮೂರ್ತಿ: ಶಿಕ್ಷಣ ಸಚಿವ ಸುರೇಶಕುಮಾರ್

ಬಾಗಲಕೋಟೆ: ಇನ್ಪೋಸಿಸ್ ಫೌಂಡೇಸನ್‍ದ ಅಧ್ಯಕ್ಷರಾದ ಡಾ.ಸುಧಾ ಮೂರ್ತಿಯವರು ಜಮಖಂಡಿ ತಾಲೂಕಿನ ಸರಕಾರಿ ಶಾಲೆಯ ವಿದ್ಯಾರ್ಥಿಗೆ ಕಂಪ್ಯೂಟರ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳಿಗೆ 400 ಕಂಪ್ಯೂಟರಗಳನ್ನು ನೀಡುವ ಮೂಲಕ ಮಾತೃ ಹೃದಯಿ ಮಹಿಳೆಯಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶಕುಮಾರ್ ಹೇಳಿದರು.

ಜಮಖಂಡಿಯ ಹುಲ್ಯಾಳ ಕ್ರಾಸ್‍ನಲ್ಲಿರುವ ರಾನಡೆ ಸ್ಮಾರಕ ಶಿಕ್ಷಣ ಸಂಸ್ಥೆಯ ಆವರಣದಲ್ಲಿಂದು ಇನ್ಪೋಸಿಸ್ ಫೌಂಡೇಶನ್ ವತಿಯಿಂದ ಹಮ್ಮಿಕೊಂಡ ಸರಕಾರ ಶಾಲೆಗಳಿಗೆ 400 ಕಂಪ್ಯೂಟರ ಮತ್ತು 100 ಶಾಲೆಗಳಿಗೆ ಗ್ರಂಥಾಲಯದ ಪುಸ್ತಕ ವಿತರಣಾ ಕಾರ್ಯಕ್ರಮವನ್ನು ಪಾರಿವಾಳ ಹಾರಿ ಬಿಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.  ದೇಶ ವಿದೇಶಗಳಲ್ಲಿ ತಮ್ಮ ಪ್ರತಿಭೆ ತೋರಿ ಪ್ರಸಿದ್ದರಾದ ಅನೇಕ ಜನ ಸರಕಾರಿ ಶಾಲೆಗಳಲ್ಲಿಯೇ ಕಲಿತ ವಿದ್ಯಾರ್ಥಿಯಾಗಿದ್ದಾರೆ. ಸರಕಾರ ಹಾಗೂ ಸುಧಾ ಮೂರ್ತಿಯವರಂತಹ ಸಹಕಾರ ನಿರಂತರವಾಗಿದ್ದಲ್ಲಿ ಸರಕಾರಿ ಶಾಲೆಗಳು ಯಾವುದೇ ಖಾಸಗಿ ಶಾಲೆಗಳಿಗೆ ಹಿಂದೆ ಬೀಳಲಾರವು. ಪಾಲಕರು ಮುಂದೊಂದು ದಿನ ಸರಕಾರಿ ಶಾಲೆಗೆ ಪ್ರವೇಶ ಪಡೆಯಬೇಕಾದರೆ ಸರದಿ ಸಾಲಿನಲ್ಲಿ ನಿಲ್ಲುವ ಸಮಯ ಸನ್ನಿತವಾಗಿದೆ ಎಂದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಮಾತನಾಡಿ ಜಮಖಂಡಿಯ ನೆಲ, ಜಲದ ಮಹಿಮೆ ಬಹಳ ಹಿಂದಿನಿಂದ ಗಮನಿಸಿದಾಗ ಬಿ.ಡಿ.ಜತ್ತಿಯಂತಹ ಮಹಾನ್ ವ್ಯಕ್ತಿಯನ್ನು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿಯನ್ನಾಗಿ ನೋಡಿದ್ದೇವೆ. ಇಂದು ಈ ನೆಲ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿಯಂತಹ ಅಗ್ರಗಣ್ಯರ ತಾಣವಾಗಿದೆ. ಇನ್ಪೋಸಿಸ್ ಸಂಸ್ಥೆ ಪ್ರಾರಂಭಿಸಿ ದೇಶ ವಿದೇಶಗಳಲ್ಲಿ ಹೆಸರು ಮಾಡಿ ಜಮಖಂಡಿಯನ್ನು ರಾಷ್ಟ್ರ ಮಟ್ಟದಲ್ಲಿ ಪರಿಚಯಿಸುವ ಕಾರ್ಯ ಮಾಡಿದನ್ನು ಗಮನಿಸಿದರೆ ಇವರ ಕಾರ್ಯ 12ನೇ ಶತಮಾನದ ಶರಣರ ಬದುಕನ್ನು ನೆನಪಿಸುತ್ತಿದೆ ಎಂದರು.

ಸರಕಾರಿ ಶಾಲೆಗಳು ಉತ್ತಮಗೊಳ್ಳಬೇಕಾದರೆ ಶಾಸಕರು, ಸದಸ್ಯರು, ಐಪಿಎಸ್ ಅಧಿಕಾರಿಗಳು ಇನ್ನುಳಿದ ಅಧಿಕಾರಿಗಳ ಮಕ್ಕಳು ಸರಕಾರಿ ಶಾಲೆಗಳಿಗೆ ಬಂದಲ್ಲಿ ಶಿಕ್ಷಕರು ಕೂಡಾ ಜಾಗೃತರಾಗಿ ಎಚ್ಚರಿಕೆಯಿಂದ ಒಳ್ಳೆಯ ಶಿಕ್ಷಣ ನೀಡಲು ಮುಂದಾಗುತ್ತಾರೆ. ರಾಜ್ಯದ ಪ್ರತಿಯೊಂದು ಮಕ್ಕಳು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶದ ಕಾರ್ಯವನ್ನು ಜಾರಿಗೆ ತಂದ ಗೋವಿಂದಗೌಡರನ್ನು ನಾವು ಇಂದು ಸ್ಮರಿಸಬೇಕಾಗಿದೆ ಎಂದರು.

ಸಾನಿಧ್ಯ ವಹಿಸಿದ್ದ ಜಪಾನಂದ ಸ್ವಾಮಿಜಿಯವರು ಮಾತನಾಡಿ ಸುಧಾ ಮೂರ್ತಿಗಳು ಕೇವಲ ಜಮಖಂಡಿಗೆ ಅವರ ಕಾರ್ಯ ಸೀಮಿತವಾಗಿಲ್ಲ. ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸೀಮಿತವಾಗಿರದೇ ನೆರೆ ರಾಜ್ಯಗಳಾದ ಕೇರಳ, ತಮಿಳುನಾಡುಗಳಲ್ಲಿ ಪ್ರವಾಹ ಸಂದರ್ಭದಲ್ಲಿಯೂ ಕೂಡಾ ನೆರವಿನ ಹಸ್ತ ನೀಡಿದ್ದಾರೆ. ಅನೇಕ ಕಡುಬಡವರಿಗೆ, ರೋಗಿಗಳಿಗೆ, ಅಶಕ್ತರಿಗೆ, ಅಂಗವಿಕಲರಿಗೆ ದಾರಿದೀಪವಾಗಿದ್ದಾರೆ ಎಂದು ತಿಳಿಸಿದರು. ಧಾರವಾಡ ವಿಭಾಗದ ಶಿಕ್ಷಣ ಇಲಾಖೆಯ ಆಯುಕ್ತ ಸಿದ್ದಲಿಂಗಯ್ಯ ಹಿರೇಮಠ ಮಾತನಾಡಿದರು. ಇನ್ಪೋಸಿಸ್‍ನ ಸಂಚಾಲಕ ಎನ್.ಆರ್.ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಉತ್ತಮ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ನಗದು ಪ್ರೋತ್ಸಾಹಧನದ ಚೆಕ್‍ಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಕೈಮಗ್ಗ ಅಭಿವೃದ್ದಿ ನಿಗಮದ ಅಧ್ಯಕ್ಷರು ಆಗಿರುವ ತೇರದಾಳ ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯ ಹನಮಂತ ನಿರಾಣಿ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಇನ್ಪೋಸಿಸ್‍ನ ರಾಘವೇಂದ್ರ ಕುಲಕರ್ಣಿ, ಜಿ.ಪಂ ಸಿಇಓ ಟಿ.ಭೂಬಾಲನ್, ಉಪವಿಭಾಗಾಧಿಕಾರಿ ಸಿದ್ದು ಹುಳ್ಳೊಳ್ಳಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]