ಸಮಸಮಾಜ ನಿರ್ಮಾಣದ ಕನಸು ಕಂಡಿದ್ದ ಬಸವಣ್ಣ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಮೈಸೂರು: ವರ್ಗ, ವರ್ಣ, ಜಾತಿ, ಮತ ಮತ್ತು ಲಿಂಗ ತಾರತಮ್ಯವಿಲ್ಲದ ಸಮ-ಸಮಾಜ ನಿರ್ಮಾಣದ ಕನಸನ್ನು 12ನೇ ಶತಮಾನದಲ್ಲಿ ಭಿತ್ತಿದವರು ಬಸಣ್ಣನವರು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮೈಸೂರಿನ ವಿಜಯನಗರದಲ್ಲಿ ಬಸವ ಸಮಿತಿ ವತಿಯಿಂದ ನಿರ್ಮಿಸಿದ ಬಸವ ಭವನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಸಮಾನತೆ, ಕಾಯಕ, ದಾಸೋಹದ ತತ್ವಗಳನ್ನು ಬೋಧಿಸಿದ್ದಲ್ಲದೆ ಅದನ್ನು ಆಚರಿಸಿದ ಮಹಾನ್ ಮಾನವತವಾದಿ ಬಸವಣ್ಣನವರು. ಅವರು ರಚಿಸಿದ ವಚನದ ಸತ್ವ, ಸಂದೇಶಗಳು ಸರ್ವಕಾಲಿಕವಾದದ್ದು ಎಂದು ಹೇಳಿದರು.

ಜಗತ್ತಿನ ಮೊದಲ ಸಂಸತ್ ಎಂದೆ ಪರಿಗಣಿಸಲಾಗಿದ್ದ ಅನುಭವ ಮಂಟಪವು ಪ್ರಜಾಪ್ರಭುತ್ವ ಪರಿಕಲ್ಪನೆಯನ್ನು ಸಮಾಜಕ್ಕೆ ನೀಡಿತ್ತು. ಇಂದು ಅದೇ ಬಸವ ಕಲ್ಯಾಣದಲ್ಲಿ ಭವ್ಯವಾದಂತಹ ಅನುಭವ ಮಂಟಪ ನಿರ್ಮಾಣಕ್ಕೆ 500 ಕೋಟಿ ಮಂಜೂರು ಮಾಡಲಾಗಿದ್ದು, ಕಾಮಗಾರಿ ನಡೆಯುತ್ತಿದೆ. ಅದು ದೇಶದ ಜನರ ಗಮನ ಸೆಳೆಯುವಂತಹ ಅತ್ಯಂತ ಭವ್ಯವಾದಂತಹ ಕಟ್ಟಡ ಆಗಲಿದೆ ಎಂದರು.

ಅಲ್ಲಮ ಪ್ರಭು, ಅಕ್ಕ ಮಹಾದೇವಿಯವರಿಗೆ ಜನ್ಮಕೊಟ್ಟಂತಹ ನಾಡು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ. ಅಕ್ಕ ಮಹಾದೇವಿ ಹುಟ್ಟಿದ ಸ್ಥಳದಲ್ಲಿ ಹತ್ತಾರು ಕೋಟಿ ಖರ್ಚುಮಾಡಿ ಅಭಿವೃದ್ಧಿ ಕಾರ್ಯಗಳು ಈಗಾಗಲೇ ಪ್ರಾರಂಭವಾಗಿದ್ದು, ಇನ್ನು 2 ವರ್ಷದೊಳಗಾಗಿ ಪೂರ್ಣವಾಗುವ ಭರವಸೆಯನ್ನು ನೀಡಿದರು.

12ನೇ ಶತಮಾನದಲ್ಲಿ ಹುಟ್ಟಿದ ಅನೇಕ ಶರಣ, ಶರಣೆಯರಿಗೆ ಜನ್ಮಕೊಟ್ಟಂತಹ  ಕರ್ಮಭೂಮಿ, ಧರ್ಮಭೂಮಿ, ಭವ್ಯಭೂಮಿಯಾಗಿದೆ ಈ ನಾಡು. ಇವರೆಲ್ಲರ ನೆನಪನ್ನು ಮುಂದಿನ ಪೀಳಿಗೆಗೆ ಉಳಿಸುವ  ಚಿಂತನೆಯನ್ನು ಮಾಡುತ್ತಿದ್ದು, ಇದಕ್ಕಾಗಿ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ವಚನಗಳ ಮೂಲಕ ಬಸವಣ್ಣನವರು ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಅಂದಿನ ಕಾಲಕ್ಕೆ ಪ್ರಜಾಪ್ರಭುತ್ವ ಸಮಾಜದಲ್ಲಿ ಸ್ತ್ರೀ ಸಮಾನತೆ, ಮಹಿಳಾ ಶಿಕ್ಷಣ, ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು ಎಂದರು. 

ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರು ಅನುಭವ ಮಂಟಪವನ್ನು ಹಲವು ಬಾರಿ ನೆನಪು ಮಾಡಿಕೊಂಡು ಬಸವಣ್ಣ ಮತ್ತು ಅಕ್ಕ ಮಹಾದೇವಿಯವರ ವಿಚಾರಧಾರೆಗಳನ್ನು ದೇಶದ ಜನರಿಗೆ ತಿಳಿಸುವಂತಹ ಕೆಲಸವನ್ನು ಮಾಡಿದ್ದಾರೆ ಎಂದು ಸ್ಮರಿಸಿದರು.

ಕಾರ್ಯಕ್ರಮದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಸಂಸದ ಪ್ರತಾಪ್ ಸಿಂಹ, ಶಾಸಕರಾದ ಎಲ್. ನಾಗೇಂದ್ರ, ತನ್ವೀರ್ ಸೇಠ್, ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಹೊಸಮಠದ ಶ್ರೀಗಳಾದ ಶ್ರೀ ಚಿದಾನಂದ ಸ್ವಾಮೀಜಿ ಸೇರಿದಂತೆ ಇತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]