
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾಹಿತ್ಯ ಸಮ್ಮೇಳನ ನಡೆಸುವ ಕುರಿತಂತೆ ಜ.25 ರಂದು ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಕರೋನಾ ಸೋಂಕನ್ನು ತಡೆಗಟ್ಟಲು ಘೋಷಿಸಲಾದ ಲಾಕ್‌ಡೌನ್ ಹಿನ್ನೆಲೆಯಲ್ಲಿ 22ನೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ 16 ಮತ್ತು 17ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಸಮ್ಮೇಳನ ಮುಂದೂಡಲ್ಪಟ್ಟಿತ್ತು. ಮತ್ತೆ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ಕುರಿತು ಶಾಸಕ ಟಿ.ವೆಂಕಟರಮಣಯ್ಯ ಅಧ್ಯಕ್ಷತೆಯಲ್ಲಿ ಜ.25ರಂದು ಬೆಳಗ್ಗೆ 10 ಗಂಟೆಗೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಲು ತೀರ್ಮಾನಿಸಲಾಗಿದೆ.
ಸಭೆಗೆ ತಾಲೂಕು ಮಟ್ಟದ ಎಲ್ಲಾ ಕಚೇರಿಯ ಮುಖ್ಯಸ್ಥರುಗಳು, ಚುನಾಯಿತ ಪ್ರತಿನಿಧಿಗಳು, ಎಲ್ಲಾ ಸಮುದಾಯದ ಮುಖಂಡರುಗಳು, ಹಾಗೂ ಪದಾಧಿಕಾರಿಗಳು, ಕನ್ನಡ ಪರ ಸಂಘಟನೆಗಳ, ಪದಾಧಿಕಾರಿಗಳು, ವಿವಿಧ ಪಕ್ಷದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಸಾರ್ವಜನಿಕರು ಸದರಿ ಸಭೆಗೆ ಹಾಜರಾಗಿ ಸಲಹೆ ನೀಡುವಂತೆ ಕೋರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ.

