ದೊಡ್ಡಬಳ್ಳಾಪುರ: ಜ.26ರಂದು ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಿಸಾನ್ ಮೇಳ ಮತ್ತು ಸಿರಿಧಾನ್ಯಗಳ ಹಬ್ಬ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಡೋನಹಳ್ಳಿ ಇವರ ಸಹಯೋಗದೊಂದಿಗೆ 2021ರ ಜನವರಿ 26 ರಂದು ಬೆಳಿಗ್ಗೆ 11:00 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ “ಕಿಸಾನ್ ಮೇಳ ಮತ್ತು ಸಿರಿಧಾನ್ಯಗಳ ಹಬ್ಬ-2021” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಸಹಾಯ ಕೃಷಿ ನಿರ್ದೇಶಕಿ ಸುಶೀಲಮ್ಮ ತಿಳಿಸಿದ್ದಾರೆ.

ಕಿಸಾನ್ ಮೇಳವನ್ನು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಉದ್ಘಾಟಿಸಲಿದ್ದಾರೆ. 

ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಪೌರಾಡಳಿತ ಮತ್ತು ಸಕ್ಕರೆ ಸಚಿವ ನಾಗರಾಜು.ಎನ್(ಎಂ.ಟಿ.ಬಿ)ಉಪಸ್ಥಿತಿಯಲ್ಲಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಶಿ ಪೂಜೆ ನೇರವೇರಿಸಲಿದ್ದಾರೆ.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸದಸ್ಯ ಬಿ.ಎನ್.ಬಚ್ಚೇಗೌಡ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. 

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಪ್ರಸಾದ್.ವಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ಕುಮಾರ್ ಬಚ್ಚೇಗೌಡ,

ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್.ಆರ್, ಜಿ.ಕೆ.ವಿ.ಕೆ. ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಯಾದ ಡಾ|| ಎಸ್‌.ರಾಜೇಂದ್ರಪ್ರಸಾದ್, ಹೆಬ್ಬಾಳದ ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿರ್ದೇಶಕ ಡಾ|| ವಿ.ವೆಂಕಟಸುಬ್ರಮಣಿಯನ್, ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಯ್ಯಣ್ಣ.ಹೆಚ್, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಉಪಾಧ್ಯಕ್ಷೆ ಯಶೋಧಮ್ಮ ಶಿವಕುಮಾರ್, ಸದಸ್ಯ ಮಂಜುಳಾ ವೆಂಕಟೇಶ್, ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಟಿ.ಎನ್.ಅಂಜನೇಗೌಡ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು.ಹೆಚ್.ಎ, ರಮ್ಯ.ಸಿ.ಹೆಚ್., ಮಂಜುಳ.ಹೆಚ್.ಬಿ., ಆನಂದ್‌ಕುಮಾರ್ ಹೆಚ್.ಕೆ. ಭಾಗವಹಿಸಲಿದ್ದಾರೆ.

ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯತಿ ಸದಸ್ಯರುಗಳು, ತಾಲ್ಲೂಕು ಪಂಚಾಯತಿ ಸದಸ್ಯರುಗಳು, ನಗರಸಭೆ/ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಕೃಷಿಕ ಸಮಾಜದ ಸದಸ್ಯರುಗಳು, ತಾಲ್ಲೂಕು ಕೃಷಿಕ ಸಮಾಜದ ಸದಸ್ಯರು,‌ ರೈತ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು,‌ ರೈತ ಬಾಂಧವರು ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ,‌ ಉಪ ಕೃಷಿ ನಿರ್ದೇಶಕ ಎಂ.ಸಿ.ವಿನುತ, ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ|| ಎ.ಪಿ. ಮಲ್ಲಿಕಾರ್ಜುನಗೌಡ, ತಾಂತ್ರಿಕ ಅಧಿಕಾರಿ ರೂಪ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಯುದ್ಧ ಇನ್ನೂ ಸ್ಥಗಿತಗೊಂಡಿಲ್ಲ. ಅಡುಗೆ ಅನಿಲ ಸೇರಿದಂತೆ ತೈಲ ಸಮಸ್ಯೆ ಎಲ್ಲ ದೇಶಗಳಿಗೆ ತಟ್ಟಿದೆ. ಸಹಜವಾಗಿ ಅಡುಗೆ ಅನಿಲದ ಬೆಲೆ ಏರಿಕೆಯಾಗಿದೆ: ಆರ್‌. ಅಶೋಕ (R. Ashoka)

[ccc_my_favorite_select_button post_id="121608"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]