ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಕೃಷಿ ಇಲಾಖೆ, ಕೃಷಿ ವಿಜ್ಞಾನ ಕೇಂದ್ರ ಹಾಡೋನಹಳ್ಳಿ ಇವರ ಸಹಯೋಗದೊಂದಿಗೆ 2021ರ ಜನವರಿ 26 ರಂದು ಬೆಳಿಗ್ಗೆ 11:00 ಗಂಟೆಗೆ ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿಯಲ್ಲಿರುವ ಕೃಷಿ ವಿಜ್ಞಾನ ಕೇಂದ್ರದಲ್ಲಿ “ಕಿಸಾನ್ ಮೇಳ ಮತ್ತು ಸಿರಿಧಾನ್ಯಗಳ ಹಬ್ಬ-2021” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ತಾಲೂಕು ಸಹಾಯ ಕೃಷಿ ನಿರ್ದೇಶಕಿ ಸುಶೀಲಮ್ಮ ತಿಳಿಸಿದ್ದಾರೆ.
ಕಿಸಾನ್ ಮೇಳವನ್ನು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ಉದ್ಘಾಟಿಸಲಿದ್ದಾರೆ.
ಕೃಷಿ ಸಚಿವ ಬಿ.ಸಿ.ಪಾಟೀಲ್ ಹಾಗೂ ಪೌರಾಡಳಿತ ಮತ್ತು ಸಕ್ಕರೆ ಸಚಿವ ನಾಗರಾಜು.ಎನ್(ಎಂ.ಟಿ.ಬಿ)ಉಪಸ್ಥಿತಿಯಲ್ಲಿ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ರಾಶಿ ಪೂಜೆ ನೇರವೇರಿಸಲಿದ್ದಾರೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸದಸ್ಯ ಬಿ.ಎನ್.ಬಚ್ಚೇಗೌಡ ವಸ್ತು ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಪ್ರಸಾದ್.ವಿ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿವೆಂಕಟರಮಣಯ್ಯ, ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‌ಕುಮಾರ್ ಬಚ್ಚೇಗೌಡ,
ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕೃಷ್ಣಮೂರ್ತಿ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ರವಿಕುಮಾರ್.ಆರ್, ಜಿ.ಕೆ.ವಿ.ಕೆ. ಕೃಷಿ ವಿಶ್ವವಿದ್ಯಾನಿಲಯದ ಕುಲಪತಿಯಾದ ಡಾ|| ಎಸ್.ರಾಜೇಂದ್ರಪ್ರಸಾದ್, ಹೆಬ್ಬಾಳದ ಕೃಷಿ ತಂತ್ರಜ್ಞಾನ ಅಳವಡಿಕೆ ಸಂಶೋಧನಾ ಸಂಸ್ಥೆ, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿರ್ದೇಶಕ ಡಾ|| ವಿ.ವೆಂಕಟಸುಬ್ರಮಣಿಯನ್, ಜಿಲ್ಲಾ ಪಂಚಾಯಿತಿ ಸದಸ್ಯ ಅಪ್ಪಯ್ಯಣ್ಣ.ಹೆಚ್, ದೊಡ್ಡಬಳ್ಳಾಪುರ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನಾರಾಯಣಗೌಡ, ಉಪಾಧ್ಯಕ್ಷೆ ಯಶೋಧಮ್ಮ ಶಿವಕುಮಾರ್, ಸದಸ್ಯ ಮಂಜುಳಾ ವೆಂಕಟೇಶ್, ದೊಡ್ಡಬಳ್ಳಾಪುರ ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಟಿ.ಎನ್.ಅಂಜನೇಗೌಡ, ಹಾಡೋನಹಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ನಾಗರಾಜು.ಹೆಚ್.ಎ, ರಮ್ಯ.ಸಿ.ಹೆಚ್., ಮಂಜುಳ.ಹೆಚ್.ಬಿ., ಆನಂದ್‌ಕುಮಾರ್ ಹೆಚ್.ಕೆ. ಭಾಗವಹಿಸಲಿದ್ದಾರೆ.
ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯತಿ ಸದಸ್ಯರುಗಳು, ತಾಲ್ಲೂಕು ಪಂಚಾಯತಿ ಸದಸ್ಯರುಗಳು, ನಗರಸಭೆ/ಪುರಸಭೆ ಅಧ್ಯಕ್ಷರು ಹಾಗೂ ಸದಸ್ಯರು, ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಜಿಲ್ಲಾ ಕೃಷಿಕ ಸಮಾಜದ ಸದಸ್ಯರುಗಳು, ತಾಲ್ಲೂಕು ಕೃಷಿಕ ಸಮಾಜದ ಸದಸ್ಯರು, ರೈತ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ರೈತ ಬಾಂಧವರು ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ, ಉಪ ಕೃಷಿ ನಿರ್ದೇಶಕ ಎಂ.ಸಿ.ವಿನುತ, ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಹಾಗೂ ಮುಖ್ಯಸ್ಥರಾದ ಡಾ|| ಎ.ಪಿ. ಮಲ್ಲಿಕಾರ್ಜುನಗೌಡ, ತಾಂತ್ರಿಕ ಅಧಿಕಾರಿ ರೂಪ ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.