
ದೊಡ್ಡಬಳ್ಳಾಪುರ: ತಾಲೂಕಿನ 25 ಗ್ರಾಮಪಂಚಾಯಿತಿಗಳ 2020ರ ಮೊದಲ ಅವಧಿಗೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇಮಿಸಿದ್ದಾರೆ.
1.ಕೊನಘಟ್ಟ, ತಿಪ್ಪೂರು: ಕಾರ್ಯನಿರ್ವಾಹಕ ಅಧಿಕಾರಿ ತಾಲೂಕು ಪಂಚಾಯಿತಿ.
2.ಕೊಡಿಗೇಹಳ್ಳಿ, ಕಂಟನಕುಂಟೆ: ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವಿಭಾಗ.
3.ಚನ್ನದೇವಿ ಅಗ್ರಹಾರ: ಸಹಾಯಕ ಕಾರ್ಯಪಾಲಕ ಅಭಿಯಂತರರು, ಲೋಕೋಪಯೋಗಿ ಇಲಾಖೆ.
4.ರಾಜಘಟ್ಟ, ಹೆಗ್ಗಡಿಹಳ್ಳಿ: ಸಹಾಯಕ ನಿರ್ದೇಶಕರು, ಮೀನುಗಾರಿಕೆ ಇಲಾಖೆ.
5.ಕೆಸ್ತೂರು, ಹಾದ್ರಿಪುರ: ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ.
6.ಸಾಸಲು, ಭಕ್ತರಹಳ್ಳಿ: ಸಹಾಯಕ ನಿರ್ದೇಶಕ, ಸಮಾಜ ಕಲ್ಯಾಣ ಇಲಾಖೆ.
7.ಸಕ್ಕರೆಗೊಲ್ಲಹಳ್ಳಿ, ಹೊಸಹಳ್ಳಿ: ಸಹಾಯಕ ಕೃಷಿ ನಿರ್ದೇಶಕರು, ಕೃಷಿ ಇಲಾಖೆ.
8.ಹಣಬೆ, ಆರೂಢಿ: ಹಿರಿಯ ಸಹಾಯಕ ತೋಟಗಾರಿಕೆ ಇಲಾಖೆ ನಿರ್ದೇಶಕರು, ತೋಟಗಾರಿಕೆ ಇಲಾಖೆ.
9.ದೊಡ್ಡಬೆಳವಂಗಲ, ಹುಲಿಕುಂಟೆ: ಕ್ಷೇತ್ರ ಶಿಕ್ಷಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ.
10.ಕಾಡನೂರು, ದೊಡ್ಡತುಮಕೂರು: ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ.
11.ತೂಬಗೆರೆ, ಹಾಡೋನಹಳ್ಳಿ: ರೇಷ್ಮೆ ಸಹಾಯ ನಿರ್ದೇಶಕರು, ರೇಷ್ಮೆ ಇಲಾಖೆ.
12.ಕನಸವಾಡಿ, ಹೊನ್ನಾವರ: ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.
13.ಮೆಳೇಕೋಟೆ, ಮೇಲಿನ ಜೂಗಾನಹಳ್ಳಿ: ಸಹಾಯಕ ನಿರ್ದೇಶಕರು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ.
ಚುನಾವಣೆ ದಿನಾಂಕ ಶೀಘ್ರದಲ್ಲಿಯೇ ಘೋಷಣೆಯಾಗಲಿದೆ ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ

