
ದೊಡ್ಡಬಳ್ಳಾಪುರ: ರಾಷ್ಟ್ರೀಯ ಮತದಾರರ ದಿನದ ಅಂಗವಾಗಿ ಶ್ರೀ ದೇವರಾಜ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಈ ವೇಳೆ ಮಾತನಾಡಿದ ಶಾಲೆಯ ಪ್ರಾಂಶುಪಾಲರಾದ ದೇವಿಕಾರಾಣಿ, ಇಂದಿನ ಮಕ್ಕಳೆ ಮುಂದಿನ ಪ್ರಜೆಗಳು ಎಲ್ಲಾ ಮಕ್ಕಳು ಮತದಾನದ ಪ್ರಾಮುಖ್ಯತೆಯನ್ನು ತಿಳಿಯಬೇಕು. ಮತದಾನ ಮಾಡಿದರೆ ಆಡಳಿತ ವ್ಯವಸ್ಥೆ ಚುರುಕಾಗುತ್ತದೆ, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಅಭಿವೃದ್ಧಿ ಕಾಣುತ್ತದೆ. ಆದರೆ ಮತದಾನದಿಂದ ದೂರ ಉಳಿದರೆ ದೇಶಕ್ಕೆ ದೊಡ್ಡ ದ್ರೋಹ ಮಾಡಿದಂತೆ ಎಂದರು.
ಶಿಕ್ಷಕ ಬಾಬುಸಾಬಿ ಪ್ರತಿಜ್ಞಾ ವಿಧಿ ಬೋಧಿಸಿದರು, ಈ ವೇಳೆ ಶಾಲೆಯ ಶಿಕ್ಷಕರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

