ದೊಡ್ಡಬಳ್ಳಾಪುರ: ನಗರದ ಶಾಂತಿನಗರದ 5ನೇ ಕ್ರಾಸ್ನ ಉದ್ಯಾನವನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಕ ಧೀರಜ್ ಮುನಿರಾಜು ಧ್ವಜಾರೋಹಣ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು ಸಂವಿಧಾನ ನಮಗೆ ನೀಡಿರುವ ಹಕ್ಕುಗಳನ್ನು ಸದುಪಯೋಗಪಡಿಸಿಕೊಂಡು ನಾವು ದೇಶದ ಒಳಿತಿಗಾಗಿ ದುಡಿಯಬೇಕು ಎಂದರು.
ಕಾರ್ಯಕ್ರಮದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಸಂಯೋಜಕ ಬಿ.ಜಿ.ಅಮರನಾಥ್, ಅನಿಕೇತನ ಟ್ರಸ್ಟ್ ಕಾರ್ಯದರ್ಶಿ ಡಿ.ಶ್ರೀಕಾಂತ, ನಗರಸಭೆ ಮಾಜಿ ಅಧ್ಯಕ್ಷೆ ಶಾಂತಮ್ಮ, ನಿವೃತ್ತ ಶಿಕ್ಷಕ ಎಂ.ಆರ್.ವರದರಾಜ ಅಯ್ಯಂಗಾರ್, ಮುಖಂಡರಾದ ಆರಿಫ್, ನಿರ್ಮಲ, ಶಿಕ್ಷಕ ದಾದಾಪೀರ್ ಮತ್ತಿತರರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.