ನಿಗದಿತ ಅವಧಿಯೊಳಗೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್ ವಿತರಣೆ ಪ್ರಗತಿ ಸಾಧಿಸಲು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚನೆ

ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಬಡತನ ರೇಖೆಗಿಂತ ಕೆಳಗಿರುವ(ಬಿ.ಪಿ.ಎಲ್.) ಕಾರ್ಡ್‌ದಾರರ ಎಲ್ಲಾ ಕುಟುಂಬಗಳಿಗೆ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಿ ನಿಗದಿತ ಅವಧಿಯಲ್ಲಿ  ಪ್ರಗತಿ ಸಾಧಿಸಲು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. 

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಆಯುಷ್ಮಾನ್ ಭಾರತ್-ಆರೋಗ್ಯ ಕನಾ೯ಟಕ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿರುವ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಪಡೆಯಲು ಆಧಾರ್ ಕಾರ್ಡ್, ಬಿ.ಪಿ.ಎಲ್. ರೇಷನ್ ಕಾರ್ಡ್ ಅಥವಾ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್ ಹಾಗೂ ಹೊರ ರಾಜ್ಯದ ರೋಗಿಗಳಿಗೆ ಪ್ರಧಾನಮಂತ್ರಿ ಜನ ಆರೋಗ್ಯ ಕಾರ್ಡ್(ಪಿ.ಎಂ.ಜೆ) ಹೊಂದಿರುವವರಿಗೂ ಉಚಿತ ಚಿಕಿತ್ಸೆ ನೀಡಬೇಕು ಎಂದು ತಿಳಿಸಿದರು.ತಾಲ್ಲೂಕುವಾರು ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಅವರು ನೆಲಮಂಗಲ, ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಆಯುಷ್ಮಾನ್ ಭಾರತ್ ಕರ್ನಾಟಕ ಕಾರ್ಡ್‌  ಯೋಜನೆಯಡಿ ದಾಖಲಾಗಿದ್ದ ರೋಗಿಗಳ ಮಾಹಿತಿಯನ್ನು ಆರೋಗ್ಯ ಮಿತ್ರ ಆ್ಯಪ್ ನಲ್ಲಿ ಕಾಲ-ಕಾಲಕ್ಕೆ ಸರಿಯಾಗಿ ಅಪ್‌ಲೋಡ್ ಮಾಡುವಂತೆ ತಿಳಿಸಿದರಲ್ಲದೆ, ನೆಲಮಂಲ ಮತ್ತು ಹೊಸಕೋಟೆ ತಾಲ್ಲೂಕುಗಳ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್ ಕರ್ನಾಟಕ ಕಾರ್ಡ್‌  ಯೋಜನೆಯಡಿ ದಾಖಲಾಗುವ ರೋಗಿಗಳ ದಾಖಲೆಗಳನ್ನು ಸೂಕ್ತವಾಗಿ ಪರಿಶೀಲಿಸಿ, ಸಂಗ್ರಹಿಸುತ್ತಿರುವುದು ಉತ್ತಮ ಕೆಲಸವಾಗಿದೆ ಎಂದರು.

ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆಯಡಿ ಆಸ್ಪತ್ರೆಗಳಿಗೆ ಅನುದಾನ ಸಿಗಲಿದ್ದು, ನಿಗದಿತ ಅವಧಿಯಲ್ಲಿ ಸಮಗ್ರ ಮಾಹಿತಿಯನ್ನು ಸಾಫ್ಟ್‌ವೇರ್‌ನಲ್ಲಿ ದಾಖಲಿಸಬೇಕು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇ.26ರಷ್ಟು ಪ್ರಗತಿ ಸಾಧಿಸಿದ್ದು, ತಾಲ್ಲೂಕು ಆರೋಗ್ಯಾಧಿಕಾರಿಗಳು ಪ್ರಗತಿ ಪರಿಶೀಲನೆ ನಡೆಸಿ, ಜಿಲ್ಲೆ ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು ನಿರಂತರ‌ ಸಂಪರ್ಕ ಸಾಧಿಸಿ, ಸಹಕಾರದಿಂದ ಕಾರ್ಯನಿರ್ವಹಿಸುವ ಮೂಲಕ ಜಿಲ್ಲೆಗೆ ಉತ್ತಮ ರ್ಯಾಂಕ್ ತರುವ ನಿಟ್ಟಿನಲ್ಲಿ ಶ್ರಮಿಸಬೇಕು ಎಂದರು. ಕುಟುಂಬಗಳವಾರು ಅಂಕಿಅಂಶಗಳ ಮಾಹಿತಿ ಕಲೆಹಾಕಿ ವರದಿ ನೀಡಲು ತಿಳಿಸಿದರಲ್ಲದೆ, ಪ್ರತಿ ವಾರ ಆಯುಷ್ಮಾನ್ ಭಾರತ-ಆರೋಗ್ಯ ಕರ್ನಾಟಕ ಯೋಜನೆ ಪ್ರಗತಿ ಕುರಿತು ಚರ್ಚೆ ನಡೆಸಲಾಗುವುದೆಂದು ತಿಳಿಸಿದರು.

ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಶಾಂತಲ ಅವರು ಮಾತನಾಡಿ 2020ರ ಡಿಸೆಂಬರ್ ಮಾಸಾಂತ್ಯಕ್ಕೆ ಸರ್ಕಾರಿ ಆಸ್ಪತ್ರೆಗಳು, ಸೇವಾ ಸಿಂಧೂ ಕೇಂದ್ರಗಳು ಹಾಗೂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಒಟ್ಟು ಜಿಲ್ಲೆಯಲ್ಲಿ 2,67,337 ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್‌ಗಳನ್ನು ವಿತರಿಸಲಾಗಿದೆ ಎಂದು ಸಭಗೆ ಮಾಹಿತಿ ನೀಡಿದರು.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕ ಇಲಾಖೆಯ ಕಲ್ಯಾಣಾಧಿಕಾರಿ ಜಗದೀಶ್ ಅವರು ಮಾತನಾಡಿ, ಜಿಲ್ಲೆಯ ದಿವ್ಯಾಂಗರಿಗೆ ವಿಶಿಷ್ಟ ಗುರುತಿನ ಚೀಟಿ ನೀಡಲು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ವಿ.ಆರ್.ಡಬ್ಲ್ಯೂ. ಮೂಲಕ ಮಾಹಿತಿ ನೀಡಲಾಗುತ್ತಿದ್ದು, ಮೊಬೈಲ್ ಮೂಲಕ ಅಜಿ೯ ಸಲ್ಲಿಸಬಹುದಾಗಿದೆ ಎಂದಾಗ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು, ವೇಳಾಪಟ್ಟಿಯೊಂದನ್ನು ತಯಾರಿಸಿ, ವಿವಿಧ ಅಂಗ ವೈಕಲ್ಯತೆ ಕುರಿತು ನುರಿತ ವಿಶೇಷ ವೈದ್ಯರನ್ನು ಆಸ್ಪತ್ರೆಗಳಿಗೆ ಕರೆಸಿ, ವಿಕಲಚೇತನರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿ, ಶೇಕಡಾವಾರು ಎಷ್ಟು ರಷ್ಟು ಅಂಗವೈಕಲ್ಯ ಹೊಂದಿದ್ದಾರೆಂದು ದಾಖಲಿಸಿ, ಗುರುತಿನ ಚೀಟಿ ನೀಡಲು ನಿರ್ದೇಶಿಸಿದರು. 

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಮಂಜುಳಾದೇವಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ, ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ರಾಜ್ಯ ಸಂಯೋಜಕರಾದ ಡಾ.ಶಕೀಬ್, ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಂಯೋಜಕರಾದ ಡಾ.ಸುಷ್ಮಾ, ಜಿಲ್ಲಾ ತಂಬಾಕು ನಿಯಂತ್ರಣ ಅಧಿಕಾರಿ ಡಾ.ವಿದ್ಯಾ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ತಾಲ್ಲೂಕು ಆರೋಗ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]