ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ದ ದೊಡ್ಡಬಳ್ಳಾಪುರದಲ್ಲಿ ಪಿವಿಸಿ ಸ್ವಾಭಿಮಾನ ಪ್ರತಿಭಟನೆ

ದೊಡ್ಡಬಳ್ಳಾಪುರ: ಪ್ರತಿನಿತ್ಯ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಖಂಡಿಸಿ, ಕೇಂದ್ರ ಸರ್ಕಾರದ ವಿರುದ್ದ ಪಿವಿಸಿ ಸ್ವಾಭಿಮಾನ ಸಂಘಟನೆಯ ಕಾರ್ಯಕರ್ತರು ನಗರದ ತಾಲೂಕು ಕಚೇರಿ ಬಳಿ ಪ್ರತಿಭಟನೆ ನಡೆಸಿದರು. (ವಿಡಿಯೋ ನೋಡಿ)

ಈ ವೇಳೆ ಮಾತನಾಡಿದ ಸಂಘಟನೆಯ ರಾಜ್ಯಾಧ್ಯಕ್ಷ ಮುನಿಆಂಜನಪ್ಪ, ಕಳೆದ ಏಳು ವರ್ಷಗಳಿಂದಲೂ ಕೇಂದ್ರದಲ್ಲಿ ಆಡಳಿತದ ನಡೆಸುತ್ತಿರುವ ಎನ್.ಡಿ.ಎ. ಸರ್ಕಾರ ಕೈಗೊಂಡ ನೋಟು ಅಮಾನೀಕರಣದ ನಂತರ ಬಡವರ ಬದುಕು ಬೀದಿಪಾಲಾದದ್ದು ಒಂದೆಡೆಯಾದರೆ, ಮಧ್ಯಮವರ್ಗದ ಜನತೆಯ ಪಾಡು ಹೇಳತೀರದಾಗಿದೆ. ಜನತೆಗೆ ಬೇಕಾದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ವೇಳೆಯಲ್ಲಿಯೇ ಕೋವಿಡ್ 19 ಕರೊನ ವೈರಸ್ ಮಾರಿಯಿಂದ ನಷ್ಟ ಅಷ್ಟಿಷ್ಟಲ್ಲ. ದೇಶದಲ್ಲಿ ತಾಂಡವವಾಡುತ್ತಿರುವ ನಿರುದ್ಯೋಗ ಮತ್ತು ನಿರುದ್ಯೋಗಿಗಳ ಪಾಡು ಹಾಗೂ ವಲಸೆ ಕಾರ್ಮಿಕರ ಬದುಕು ವರ್ಣಿಸಲು ಅಸಾಧ್ಯವಾಗಿದೆ. ಸುಳ್ಳು ಹೇಳಿ ಮತ ಪಡೆದವರು ಅಧಿಕಾರಕ್ಕೆ ಬಂದ ನಂತರ ಜನತೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ವೈಫಲ್ಯತೆ ಕಂಡಿದ್ದಾರೆ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿ ಯುವ ಜನತೆಗೆ ಕೇಂದ್ರ ಸರ್ಕಾರದ ಮೇಲೆ ಯಾವುದೇ ವಿಶ್ವಾಸವಿಲ್ಲದಿರುವುದು ಸಾಬೀತುಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷ ಹನುಮಣ್ಣ ಗೂಳ್ಯ ಮಾತನಾಡಿ, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಪ್ರತಿನಿತ್ಯವೂ ದೇಶದಾದ್ಯಂತ ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಕೆ ಮಾಡಿ ಬಡ ಮಧ್ಯಮವರ್ಗದವರನ್ನು ಜೀವ ಹಿಂಡುತ್ತಿದೆ. ನೂರಾರು ಕೋಟಿ ಜನಸಂಖ್ಯೆ ಇರುವ ಬಡವರ ಹಿತ ಕಾಪಾಡದೆ ಕೇಂದ್ರ ಸರ್ಕಾರ ಮೌನ ತಾಳಿರುವ ಕಾರಣದಿಂದ ತೈಲ ಕಂಪನಿಗಳು ನಿತ್ಯವೂ ಸುಲಿಗೆ ಕಾರ್ಯದಲ್ಲಿ ನಿರತವಾಗಿವೆ. ಕಣ್ಣು,ಬಾಯಿ,ಕಿವಿ ಮುಚ್ಚಿಕೊಂಡಿರುವ ಕೇಂದ್ರ ಸರ್ಕಾರ ಬಡವರ ಜೇಬಿಗೆ ಕೈ ಹಾಕಿ ಹಗಲು ದರೋಡೆಯಲ್ಲಿ ಮಗ್ನರಾಗಿರುವುದು ಸುಳ್ಳೇನಲ್ಲ.

ಸ್ಥಳೀಯ ಮಾರಾಟ, ತೆರಿಗೆ ,ವ್ಯಾಟ್ ಆಧಾರದ ಮೇರೆಗೆ ರಾಜ್ಯ ಸರ್ಕಾರಗಳು ಸಹ ಬಡವರ ಹಿತರಕ್ಷಣೆಗೆ ಮುಂದಾಗದೆ ಜನವಿರೋಧಿ ಧೋರಣೆ ತಾಳಿವೆ ರಾಜ್ಯ ಅಲ್ಲದೆ ದೇಶದಾದ್ಯಂತ ಅಗತ್ಯ ವಸ್ತುಗಳ ಬೆಲೆಗಳು ಗಗನಕ್ಕೇರಿದ್ದರೂ ಸಹ ಪರಿಗಣಿಸದೆ ಕ್ಷುಲ್ಲಕ ರಾಜಕೀಯದ ಮಧ್ಯೆ ಜನರ ಜೀವನದ ಜೊತೆ ಚೆಲ್ಲಾಟವಾಡುವ ಕಾರ್ಯತಂತ್ರವನ್ನು ಮುಂದುವರಿಸುತ್ತಿರುವುದರಿಂದ ಜನತೆಯ ಜೀವನದ ಮೇಲೆ ಕಾರ್ಮೋಡ ಕವಿಯುತ್ತಿರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಕರೊನಾ ವೈರಸ್ ಸಂಕಷ್ಟದ ಮಧ್ಯೆ ನಲುಗಿಹೋಗಿರುವ ಆರ್ಥಿಕತೆಯಿಲ್ಲದೆ ಕಂಗಾಲಾಗಿರುವ ಜನತೆ. ಪ್ರತಿನಿತ್ಯ ತೈಲಬೆಲೆ ಏರಿಕೆ ಮಾಡುತ್ತಿರುವುದರಿಂದ ನಾಡಿನ ಜನರು ಕೇಂದ್ರ ಸರ್ಕಾರದ ವಿರುದ್ಧ ಹಿಡಿಶಾಪ ಹಾಕುತ್ತಿದ್ದಾರೆ. ಕೇಂದ್ರ ಸರ್ಕಾರದ ಜನವಿರೋಧಿ ಮತ್ತು ಅಸಮರ್ಪಕ ಆಡಳಿತ ವಿರುದ್ಧ ಜನತೆ ಸಿಡಿದೇಳುವ ಮುಂಚೆ ತೈಲ ಬೆಲೆ ಏರಿಕೆಯನ್ನು ತಕ್ಷಣದಿಂದಲೇ ತಡೆಗಟ್ಟುವುದು ಕೇಂದ್ರ ಸರ್ಕಾರದ ಹೊಣೆಗಾರಿಕೆಯಾಗಿದೆ ಎಂದರು.

ಈ ವೇಳೆ ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ ಪ್ರತಿಭಟನಾಕಾರರು, ಅರುಳ್ ಕುಮಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಬೆಂಗಳೂರು ನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿ ಕಾಕೋಳು ಚನ್ನಮರಿಯಪ್ಪ, ದೊಡ್ಡಬಳ್ಳಾಪುರ ಶಾಖ ಅಧ್ಯಕ್ಷ ಪುನೀತ್ ಕುಮಾರ್, ಉಪಾಧ್ಯಕ್ಷ ವಡ್ಡರಹಳ್ಳಿ ರಾಜಶೇಖರ್ ಪ್ರಧಾನ ಕಾರ್ಯದರ್ಶಿ ಮುನಿರಾಜ, ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ರತ್ನಮ್ಮ, ಯಲಹಂಕ ತಾಲೂಕು ಅಧ್ಯಕ್ಷೆ ಮುನಿಲಕ್ಷ್ಮಮ್ಮ, ಮುಖಂಡರಾದ ವಸಂತಮ್ಮ ಮತ್ತಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]