
ದೊಡ್ಡಬಳ್ಳಾಪುರ: ಜಿಲ್ಲಾಡಳಿತದ ಸೂಚನೆಯ ಅನ್ವಯ ತಾಲೂಕಿನ 25 ಗ್ರಾಮ ಪಂಚಾಯಿತಿಗಳ ಅದ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಸದಸ್ಯರನ್ನು ಆಯ್ಕೆ ಮಾಡಲು ಫೆ.7ರೊಳಗೆ ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಹರಿತಲೇಖನಿಗೆ ದೊರೆತಿರುವ ಉನ್ನತ ಮೂಲಗಳ ಮಾಹಿತಿ ಅನ್ವಯ ಫೆಬ್ರವರಿ 7ರಂದು ಭಾನುವಾರವಾದ ಕಾರಣ ಫೆ.6ರ ಒಳಕೆ ಮುಗಿಸುವಂತೆ ಚುನಾವಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮಪಂಚಾಯಿತಿ ಆಡಳಿತಾಧಿಕಾರಿಗಳಿಗೆ ಆದೇಶ ನೀಡಲಾಗಿದೆ.
ಚುನಾವಣೆ ಪ್ರಕ್ರಿಯೆ ಚುರುಕು: ಜಿಲ್ಲಾಡಳಿತದ ಆದೇಶದ ಮೇರೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಯನ್ನು ಚುನಾವಣಾಧಿಕಾರಿಗಳು ಚುರುಕುಗೊಳಿಸಿದ್ದು, ಶುಕ್ರವಾರದಿಂದ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸಭೆ, ದಿನಾಂಕ ನಿಗದಿ ಮಾಡಲಿದ್ದಾರೆ.
ಮೂಲಗಳ ಪ್ರಕಾರ ತಾಲೂಕಿನ ಅನೇಕ ಗ್ರಾಮ ಪಂಚಾಯತಿಗಳಿಗೆ ಫೆ.5 ಮತ್ತು 6 ರಂದು ಚುನಾವಣೆ ನಡೆಯಲಿದೆ ಎನ್ನಲಾಗುತ್ತಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

