
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಮರಾಠಿ ಅಭಿವೃದ್ದಿ ಪ್ರಾಧಿಕಾರ ರಚಿಸಿರುವುದನ್ನು ಹಿಂಪಡೆಯಬೇಕು ಹಾಗೂ ಎಂ.ಇ.ಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಆಗ್ರಹಿಸಿ, ಹಾಗೂ ಇತ್ತೀಚೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಬವ್ ಠಾಕ್ರೆ, ಬೆಳಗಾವಿ ಹಾಗೂ ಕರ್ನಾಟಕದ ಗಡಿ ವಿಚಾರವಾಗಿ ನೀಡಿರುವ ಹೇಳಿಕೆಗಳನ್ನು ಖಂಡಿಸಿ ಜ.30ರಂದು ರಾಜ್ಯಾದ್ಯಂತ ನಡೆಯಲಿರುವ ರೈಲು ತಡೆ ಚಳವಳಿಗೆ ಬೆಂಬಲಿಸಿ, ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ನಗರದ ರೈಲ್ವೆ ನಿಲ್ದಾಣದಲ್ಲಿ ಜ.30ರಂದು ಬೆಳಿಗ್ಗೆ 7 ಗಂಟೆಗೆ ರೈಲು ತಡೆ ಚಳವಳಿ ನಡೆಸಲಾಗುವುದು ಎಂದು ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.
ನಾಟಕೋತ್ಸವ: ನಗರದ ಪುರಭವನದಲ್ಲಿ ನಡೆಯುತ್ತಿರುವ ನಾಟಕೋತ್ಸವದ ಅಂಗವಾಗಿ ಜ.30ರಂದು ಬೆಳಿಗ್ಗೆ 10 ಗಂಟೆಗೆ ಗಂಗಸಂದ್ರದ ಶ್ರೀ ಆಂಜನೇಯಸ್ವಾಮಿ ಕೃಪಾ ಪೋಷಿತ ನಾಟಕ ಮಂಡಲಿ ವತಿಯಿಂದ ಕುರುಕ್ಷೇತ್ರ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.
ಜ.31ರಂದು ಬೆಳಿಗ್ಗೆ 10 ಗಂಟೆಗೆ ತುರುವನಹಳ್ಳಿ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಕೃಪಾ ಪೋಷಿತ ನಾಟಕ ಮಂಡಲಿ ವತಿಯಿಂದ ಶನಿಪ್ರಭಾವ ಪೌರಾಣಿಕ ನಾಟಕ ಪ್ರದರ್ಶನ ನಡೆಯಲಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

