
ಬೆಂಗಳೂರು: ರಾಜ್ಯ ತೆಂಗಿನ ನಾರಿನ ಸಹಕಾರ ಮಹಾ ಮಂಡಳಿ ಅದ್ಯಕ್ಷರಾಗಿ ದೊಡ್ಡಬಳ್ಳಾಪುರ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಗಂಟಗಾನಹಳ್ಳಿ ಬಾಬು ಆಯ್ಕೆಯಾಗಿದ್ದಾರೆ.
19 ಸದಸ್ಯ ಬಲದ ಮಹಾಮಂಡಳಿಯ ಇಂದು ನಡೆದ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ವೆಂಕಟೇಶ್ ಬಾಬು 13ಮತಗಳನ್ನು ಪಡೆದು ಅದ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ಚುನಾವಣೆ ನಡೆದ ಇಂದಿನಿಂದ ಮುಂದಿನ ಐದು ವರ್ಷಗಳ ಕಾಲ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆಂದು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ರಾಜ್ಯ ತೆಂಗಿನ ನಾರಿನ ಸಹಾಕಾರ ಮಹಾ ಮಂಡಳಿಯ ಉಪ ಕಾರ್ಯದರ್ಶಿ ಚಿದಾನಂದ್ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

