
ಬೆಂ.ಗ್ರಾ.ಜಿಲ್ಲೆ: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಒಬ್ಬ ವಿದ್ಯಾರ್ಥಿನಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಪರಿಭಾವಿಸುವ ಕಾರ್ಯಕ್ರಮದ ಅನ್ವಯ ಕೋನಘಟ್ಟದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರಶ್ಮಿತಾ ಅವರನ್ನು ಆಯ್ಕೆಮಾಡಲಾಗಿದ್ದು, ಒಂದು ದಿನದ ಮಟ್ಟಿಗೆ ಅವರು ಕಾರ್ಯ ನಿರ್ವಹಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ನಡೆದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಅಂಗವಾಗಿ ಒಬ್ಬ ವಿದ್ಯಾರ್ಥಿನಿಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನಾಗಿ ಪರಿಭಾವಿಸುವ ಕಾರ್ಯಕ್ರಮ”ದಲ್ಲಿ ಕಾರ್ಯನಿರ್ವಹಿಸಿದರು.
ಎಲ್ಲಾ ವಿದ್ಯಾರ್ಥಿನಿಯರು ತಮ್ಮ ಸಮಸ್ಯೆಗಳನ್ನು ಲಿಖಿತ ರೂಪದಲ್ಲಿ ಸಿಇಒ ಗಮನಕ್ಕೆ ತಂದಿದ್ದು, ವಿದ್ಯಾರ್ಥಿನಿಯರ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲು ಸಿಇಓ ಅವರಿಗೆ ಮನವಿ ಮಾಡಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ವಿಷಯ ಪರಿವೀಕ್ಷಕರಾದ ಶ್ರೀಕಂಠಯ್ಯ, ಪರಿವೀಕ್ಷಕರಾದ ಶ್ರೀನಿವಾಸ್ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

