
ಬೆಂ.ಗ್ರಾ.ಜಿಲ್ಲೆ: ಮಹಾತ್ಮ ಗಾಂಧೀಜಿ ಅವರ ಪುಣ್ಯಸ್ಮರಣೆ ಹಾಗೂ ಹುತಾತ್ಮರ ದಿನಾಚರಣೆ ಅಂಗವಾಗಿ ಬೆಂಗಳೂರು ಗ್ರಾಮಾಂತರ, ಗ್ರಾಮದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರಪಿತ, ಮಹಾತ್ಮ ಗಾಂಧೀಜಿಯವರ ಪುಣ್ಯ ಸ್ಮರಣೆ ಅಂಗವಾಗಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ.ಕೆ.ನಾಯಕ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು ಹಾಗೂ ಮೌನಾಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಹಾಯಕರಾದ ರಾಜೀವಲೋಚನ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಗೀತಾ, ಮುಜರಾಯಿ ಇಲಾಖೆ ತಹಶೀಲ್ದಾರ್ ಹೇಮಲತಾ, ಜಿಲ್ಲಾಧಿಕಾರಿ ಕಚೇರಿಯ ಇಂದಿರಮ್ಮ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

