
ದೊಡ್ಡಬಳ್ಳಾಪುರ: 2021ನೇ ಸಾಲಿನ ಮೊದಲ ಸುತ್ತಿನ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ತಾಲೂಕಿನಲ್ಲಿ ಶೇ.95ರಷ್ಟು ಯಶಸ್ವಿಯಾಗಿದೆ ಎಂದು ತಹಶಿಲ್ದಾರ್ ಟಿ.ಎಸ್.ಶಿವರಾಜ್ ತಿಳಿಸಿದ್ದಾರೆ.
ಈ ಕುರಿತು ಹರಿತಲೇಖನಿಗೆ ಮಾಹಿತಿ ನೀಡಿರುವ ಅವರು ಜ.31ರಿಂದ ಫೆ.3ರವರೆಗೆ ನಡೆಯಲಿರುವ ಪಲ್ಸ್ ಪೋಲಿಯೊ ಅಭಿಯಾನಕ್ಕೆ ತಾಲೂಕಿನಲ್ಲಿ ಉತ್ತಮ ಸ್ಪಂದನೆ ದೊರಕಿದೆ ಎಂದರು.
ಇಂದು ಬೆಳಗ್ಗೆ ಅಭಿಯಾನಕ್ಕೆ ಶಾಸಕ ಟಿ.ವೆಂಕಟರಮಣಯ್ಯ ನಗರದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಾಲನೆ ನೀಡಿದ್ದರು. ತಾಲೂಕಿನ 13 ವ್ಯಾಪ್ತಿಗಳಲ್ಲಿ ಸ್ಥಳೀಯ ಮುಖಂಡರು ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಪೋಷಕರು ಉತ್ಸಾಹದಿಂದ ಅಭಿಯಾನದಲ್ಲಿ ಪಾಲ್ಗೊಂಡು ಮಕ್ಕಳಿಗೆ ಪೋಲಿಯೊ ಹನಿ ಹಾಕಿಸಿದ್ದಾರೆ.
ತಾಲೂಕಿನ 152 ಬೂತ್‍ಗಳಲ್ಲಿ 5 ವರ್ಷ ಒಳಗಿನ 30,348 ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು 27581 ಮಕ್ಕಳಿಗೆ ಲಸಿಕೆ ಹಾಕಲಾಗಿದೆ. ಈ ಕಾರ್ಯಕ್ರಮದಲ್ಲಿ 648 ಲಸಿಕಾ ಕಾರ್ಯಕರ್ತರು ಕಾರ್ಯನಿರ್ವಹಿಸಿದ್ದರು.
ಮೊದಲ ದಿನ ದೊಡ್ಡಬಳ್ಳಾಪುರ ಗ್ರಾಮಾಂತರದಲ್ಲಿ ಶೇ.93 ಹಾಗೂ ನಗರ ವ್ಯಾಪ್ತಿಯಲ್ಲಿ ಶೇ.85 ಒಟ್ಟು ಶೇ.95ರಷ್ಟು ಲಸಿಕೆ ಕಾರ್ಯ ಪೂರ್ಣಗೊಂಡಿದೆ.
ಫೆ.2ರಿಂದ 3ರವರೆಗೆ ಮನೆ ಭೇಟಿ ನೀಡಿ, ಲಸಿಕೆ ಹಾಕಿಸಿರುವ ಅನುಪಾಲನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

