
ದೊಡ್ಡಬಳ್ಳಾಪುರ: ಪದವೀಧರ ಶಿಕ್ಷಕರ ಸಮಸ್ಯೆಯಾದ C & R ತಿದ್ದುಪಡಿಯ ಆಕ್ಷೇಪಣೆಯನ್ನು ಶಾಸಕ ಟಿ.ವೆಂಕಟರಮಣಯ್ಯ ಮೂಲಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರಿಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಪಧವೀಧರ ಶಿಕ್ಷಕರ ಸಂಘ ದೊಡ್ಡಬಳ್ಳಾಪುರ ಘಟಕಗಳ ಸಹಯೋಗದೊಂದಿಗೆ ಮನವಿ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿದ ಶಾಸಕ ಟಿ.ವೆಂಕಟರಮಣಯ್ಯ ಈ ಕುರಿತಂತೆ ಸದನದಲ್ಲಿ ಪ್ರಸ್ತಾಪಿಸಲಾಗುವುದೆಂದು ಭರವಸೆ ನೀಡಿದರು.
ನಗರದ ಪ್ರವಾಸಿ ಮಂದಿರಲ್ಲಿ ಶಾಸಕರ ಭೇಟಿಯಾದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್.ಲಕ್ಷ್ಮೀನರಸಿಂಹಯ್ಯ, ಉಪಾಧ್ಯಕ್ಷರು & ರಾಜ್ಯ ಜಂಟಿ ಕಾರ್ಯದರ್ಶಿ ಎಂ.ಎಸ್.ರಾಜಶೇಖರ್, ಪ್ರಧಾನ ಕಾರ್ಯದರ್ಶಿ ವಿ.ಧನಂಜಯ, ಜಂಟಿ ಕಾರ್ಯದರ್ಶಿ ಎ.ವಿ.ಚಂದ್ರಪ್ಪ, ಮತ್ತು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಪ್ರಧಾನ ಕಾರ್ಯದರ್ಶಿ ಎಸ್.ವಿ.ವಸಂತಗೌಡ, ಉಪಾಧ್ಯಕ್ಷ ಆರ್.ರಾಜೇಶ್ವರಿ, ಖಜಾಂಚಿ ಕೆ.ಆರ್.ನರಸಿಂಹಮೂರ್ತಿ, ಸಂಘಟನಾ ಕಾರ್ಯದರ್ಶಿ ಟಿ.ಎ.ಜ್ಯೋತಿ, ಸಹಕಾರ್ಯದರ್ಶಿ ಅಮ್ಜದ್ ಖಾನ್, ಜಿಲ್ಲಾ ಖಜಾಂಚಿ ಕೆ.ಹೆಚ್.ಬಸವಲಿಂಗಯ್ಯ, ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಎಸ್.ರಾಜಣ್ಣ ಮತ್ತು ಸಂಘದ ಸದಸ್ಯ ಹಾಗೂ ಪದವೀಧರ ಶಿಕ್ಷಕರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ. ನಮ್ಮೊಂದಿಗೆ ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

