ಕೇಂದ್ರ ಬಜೆಟ್: ಈ ಬಾರಿ ಯಾವ ವಸ್ತು ಅಗ್ಗ, ಯಾವುದು ದುಬಾರಿ..?

ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಂಡಿಸಿದ 2021-22ನೇ ಸಾಲಿನ ಆಯವ್ಯಯದಲ್ಲಿ ಕೋವಿಡ್ ಸೆಸ್ ವಿಧಿಸಿಲ್ಲ ಎಂಬುದಷ್ಟೆ ಗಮನಾರ್ಹ ಅಂಶವಾಗಿದೆ.

ರೈತರ ಕಲ್ಯಾಣ, ಉನ್ನತಿಗಾಗಿ ಸರ್ಕಾರ ಬದ್ಧವಾಗಿದೆ” ಎಂದಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಈ ಬಾರಿ ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಕುರಿತು ಕೆಲವು ಘೋಷಣೆಗಳನ್ನು ಮಾಡಿದ್ದಾರೆ.

ಕೋವಿಡ್ ನಿಂದಾಗಿ ಭಾರತ ತಾಂತ್ರಿಕ ಹಿಂಜರಿಕೆಯಲ್ಲಿದ್ದು, ಈ ನಿಟ್ಟಿನಲ್ಲಿ ಬಜೆಟ್ ನಲ್ಲಿ ಕೋವಿಡ್ ಸೆಸ್ ವಿಧಿಸುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಸರ್ಕಾರ ಕೋವಿಡ್ ಸೆಸ್ ವಿಧಿಸಿಲ್ಲ.

ಅಲ್ಲದೇ ಈ ಬಾರಿ ಬಜೆಟ್ ನಲ್ಲಿ ಯಾವ ವಸ್ತು ಬೆಲೆ ಏರಿಕೆಯಾಗಿದೆ, ಯಾವ ವಸ್ತು ಬೆಲೆ ಇಳಿಕೆಯಾಗಿದೆ ಎಂಬ ಮಾಹಿತಿ ಇಲ್ಲಿದೆ.

ಯಾವುದು ದುಬಾರಿ: ಪೆಟ್ರೋಲ್, ಡೀಸೆಲ್, ಮದ್ಯ, ರಸಗೊಬ್ಬರ, ಕಲ್ಲಿದ್ದಲು, ಹತ್ತಿ, ಸೇಬು, ಮೊಬೈಲ್ ಚಾರ್ಜರ್ ಬೆಲೆ ಏರಿಕೆ, ವಿದೇಶಿ ಅಡುಗೆ ಎಣ್ಣೆ,  ವಾಹನದ ಬಿಡಿ ಭಾಗ, ವಿದೇಶದಿಂದ ಆಮದಾಗುವ ಮೊಬೈಲ್ ಬಟ್ಟೆ, ಎಲೆಕ್ಟ್ರಾನಿಕ್ಸ್ ವಸ್ತುಗಳು, ಚರ್ಮದ ಶೂ

ಯಾವುದು ಅಗ್ಗ: ಚಿನ್ನ, ಬೆಳ್ಳಿ, ಕಬ್ಬಿಣ, ನೈಲಾನ್ ಬಟ್ಟೆಗಳು,ತಾಮ್ರದ ಲೋಹಗಳು, ವಿದ್ಯುತ್.

ಉಳಿದಂತ ಕ್ಷೇತ್ರವಾರು ಮಾಹಿತಿಯಂತೆ

ಕೃಷಿ: ಎಪಿಎಂಸಿಯ ಸೌಕರ್ಯಗಳನ್ನ ಬಲಪಡಿಸಲು ಕೃಷಿ ಸೌಕರ್ಯ ನಿಧಿಗಳನ್ನ ಘೋಷಣೆ ಮಾಡಲಾಗಿದೆ. ರೈತರಿಗೆ ನೀಡುವ ಎಂಎಸ್​ಪಿಯಲ್ಲಿ ಗಣನೀಯ ಹೆಚ್ಚಳವಾಗಿದೆ. ಗೋದಿ ಖರೀದಿಗೆ ರೈತರಿಗೆ 2019-20ರಲ್ಲಿ 62 ಸಾವಿರ ಕೋಟಿ ನೀಡಲಾಗಿತ್ತು. 2020-21ರಲ್ಲಿ ಇದರ ಮೊತ್ತ 75 ಸಾವಿರ ಕೋಟಿ ರೂ ಆಗಿದೆ. 2013-14ರಲ್ಲಿ ಭತ್ತ ಖರೀದಿಗೆ 53,928 ಕೋಟಿ ರೂ ವೆಚ್ಚ ಮಾಡಲಾಗಿತ್ತು. 2020-21ರಲ್ಲಿ ಇದು 1,72,752 ಕೋಟಿ ರೂಗೆ ಹೆಚ್ಚಳವಾಯಿತು ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

ವೈಯಕ್ತಿಕ ತೆರಿಗೆ: 75 ವರ್ಷ ಮೇಲ್ಪಟ್ಟ ವಯಸ್ಸಿನ ಹಾಗೂ ಮನೆ ಬಾಡಿಗೆ ಮತ್ತು ಪಿಂಚಣಿಯ ಆದಾಯ ಮಾತ್ರ ಹೊಂದಿರುವ ಹಿರಿಯ ನಾಗರಿಕರಿಗೆ ಐಟಿ ರಿಟರ್ನ್ ಸಲ್ಲಿಕೆಯಿಂದ ವಿನಾಯಿತಿ ನೀಡಲಾಗಿದೆ. ಇದು ವಯೋವೃದ್ಧರಿಗೆ ನಿರಾಳ ತರುವ ಬೆಳವಣಿಗೆಯಾಗಿದೆ. ಹಾಗೆಯೇ, ಸಣ್ಣ ತೆರಿಗೆ ಪಾವತಿದಾರರ ವ್ಯಾಜ್ಯ ಪರಿಹಾರಕ್ಕಾಗಿ ಫೇಸ್​ಲೆಸ್ ವ್ಯವಸ್ಥೆ ಸ್ಥಾಪನೆ ಮಾಡುವುದಾಗಿ ಸಚಿವರು ಘೋಷಿಸಿದ್ದಾರೆ.

ಐಟಿ ರಿಟರ್ನ್ ವ್ಯವಸ್ಥೆಯನ್ನ ಇನ್ನಷ್ಟು ಸರಳಗೊಳಿಸಲಾಗಿದೆ. ಸ್ಯಾಲರಿ ಇನ್ಕಮ್, ತೆರಿಗೆ ಪಾವತಿ ಮತ್ತು ಟಿಡಿಎಸ್ ಅಂಶಗಳನ್ನ ಐಟಿಆರ್ ಫಾರ್ಮ್​ಗಳಲ್ಲಿ ಮೊದಲೇ ಭರ್ತಿ ಮಾಡಲಾಗುವುದು.

ಆರೋಗ್ಯ ಕ್ಷೇತ್ರ: ಆರೋಗ್ಯ ಕ್ಷೇತ್ರಕ್ಕೆ 2,23,246 ಕೋಟಿ ರೂ ಕೊಡಲಾಗಿದೆ. ಕಳೆದ ಬಜೆಟ್​ಗೆ ಹೋಲಿಸಿದರೆ ಶೇ. 137ರಷ್ಟು ಹೆಚ್ಚಳವಾಗಿದೆ.ಪಿಎಂ ಆತ್ಮನಿರ್ಭರ್ ಸ್ವಸ್ಥ್ ಭಾರತ್ ಯೋಜನೆಯ ಘೋಷಣೆ ಆಗಿದೆ. ಆರು ವರ್ಷದವರೆಗೆ ಈ ಯೋಜನೆಗೆ 64,180 ಕೋಟಿ ರೂ ವಿನಿಯೋಗವಾಗಲಿದೆ. 15 ತುರ್ತು ಆರೋಗ್ಯ ಕೇಂದ್ರಗಳಿಗೆ ಸಹಾಯಕವಾಗಲಿದೆ. ರಾಷ್ಟ್ರೀಯ ರೋಗ ನಿಯಂತ್ರಣ ಕೇಮದ್ರ ಮತ್ತಿತರ ವಿಚಾರಗಳಿಗೆ ಪುಷ್ಟಿ ಸಿಗಲಿದೆ. ರಾಷ್ಟ್ರೀಯ ಪೌಷ್ಟಿಕ ಯೋಜನೆಯ ವ್ಯವಸ್ಥೆ ಬಲಗೊಳ್ಳಲಿದೆ.

ರಸ್ತೆ ಸೌಕರ್ಯ: ಹೊಸ ಹೆದ್ದಾರಿಗಳ ಘೋಷಣೆ ಆಗಿದೆ. ತಮಿಳುನಾಡಿನಲ್ಲಿ 3,500 ಕಿಮೀ ಕಾರಿಡಾರ್, ಕೇರಳದಲ್ಲಿ 1,100 ಕಿಮೀ ಕಾರಿಡಾರ್ ಯೋಜನೆಗೆ ಅನುಮೋದನೆ ಸಿಕ್ಕಿದೆ. ಇದಕ್ಕೆ 65 ಸಾವಿರ ಕೋಟಿ ರೂ ಬಿಡುಗಡೆಯಾಗಲಿದೆ. ಪಶ್ಚಿಮ ಬಂಗಾಳದಲ್ಲಿ 675 ಕಿಮೀ ಕಾರಿಡಾರ್​ಗೆ 95 ಸಾವಿರ ಕೋಟಿ ರೂ, ಅಸ್ಸಾಮ್​ನಲ್ಲಿ 1,300 ಕೋಟಿ ರೂ ಹಣವನ್ನು ಮುಂದಿನ ಮೂರು ವರ್ಷಗಳಲ್ಲಿ ಒದಗಿಸಲಾಗುತ್ತದೆ. ಒಟ್ಟಾರೆ, ರಸ್ತೆ ಸೌಕರ್ಯ ಯೋಜನೆಗಳಿಗೆ ಈ ಬಜೆಟ್​ನಲ್ಲಿ ಭರ್ಜರಿ ಪುಷ್ಟಿ ಸಿಕ್ಕಿದೆ.

ಬ್ಯಾಂಕ್: ಸ್ಟಾರ್ಟಪ್​ಗಳ ಪೈಕಿ ಶೇ. 1 ಕಂಪನಿಗಳಿಗೆ ಪೇಯ್ಡ್ ಅಪ್ ಕ್ಯಾಪಿಟಲ್ ಮೇಲಿನ ನಿರ್ಬಂಧ ಇರುವುದಿಲ್ಲ.  ಐಡಿಬಿಐ ಸೇರಿದಂತೆ ಮೂರು ಬ್ಯಾಂಕುಗಳ ಬಂಡವಾಳ ಹಿಂತೆಗೆತ ಆಗಲಿದೆ. ಈಗಾಗಲೇ ಘೋಷಣೆ ಆಗಿರುವ ಏರ್ ಇಂಡಿಯಾ, ಬಿಪಿಸಿಎಲ್ ಮೊದಲಾದ ಸಂಸ್ಥೆಗಳ ಬಂಡವಾಳ ಹಿಂತೆಗೆತ ಪ್ರಕ್ರಿಯೆ 2022ರಷ್ಟರಲ್ಲಿ ಪೂರ್ಣಗೊಳ್ಳಲಿದೆ.

ರೈಲ್ವೆ: ರೈಲ್ವೆ ಕ್ಷೇತ್ರಕ್ಕೆ 1,10,055 ಕೋಟಿ ರೂ ವಿನಿಯೋಗ ಆಗಿದೆ. ಪಶ್ಚಿಮ ಬಂಗಾಳದಲ್ಲಿ ರೈಲ್ವೆ ಯೋಜನೆಗಳಿಗೆ 25,000 ಕೋಟಿ, ಚೆನ್ನೈ ಮೆಟ್ರೋಗೆ 63,000 ಕೋಟಿ ರೂ ನೀಡಲಾಗಿದೆ. ಬೆಂಗಳೂರಿನಲ್ಲಿ ನಮ್ಮ ಮೆಟ್ರೋಗೆ ಹಣ ಬಿಡುಗಡೆ ಮಾಡಲಾಗಿದೆ.

ಕೋವಿಡ್-19 ಲಸಿಕೆ: ಕೋವಿಡ್ ಲಸಿಕೆಗಳಿಗೆ 35 ಸಾವಿರ ಕೋಟಿ ರೂ ಮೀಸಲಿರಿಸಲಾಗಿದೆ. ಈಗ ಅನುಮೋದನೆ ಪಡೆದಿರುವ ಕೋವಿಶೀಲ್ಡ್ ಮ್ತು ವೋವ್ಯಾಕ್ಸಿನ್ ಜೊತೆಗೆ ಶೀಘ್ರದಲ್ಲೇ ಇನ್ನೆರಡು ಲಸಿಕೆಗಳು ಹೊರಬರಲಿವೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಎಫ್​​ಡಿಐ: ವಿದೇಶೀ ನೇರ ಬಂಡವಾಳ ಶೇ. 74ರಷ್ಟು ಹೆಚ್ಚಳವಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದರು.

ಸ್ವಚ್ಛ ಭಾರತ್ ಮತ್ತು ಸ್ವಸ್ಥ್ ಭಾರತ್: ನಗರ ಸ್ವಚ್ಛ ಭಾರತ್ ಮಿಷನ್ ಯೋಜನೆಗೆ ಐದು ವರ್ಷಗಳಿಗೆ 1,41,678 ಕೋಟಿ ರೂ ವಿನಿಯೋಗ ಮಾಡಲು ನಿರ್ಧರಿಸಲಾಗಿದೆ.

ಉಜ್ವಲ್ ಯೋಜನೆ: ಕೇಂದ್ರದ ಉಜ್ವಲ್ ಎಲ್​ಪಿಜಿ ಯೋಜನೆಯ ವ್ಯಾಪ್ತಿಗೆ ಇನ್ನೂ 1 ಕೋಟಿ ಮಂದಿಯನ್ನ ತರಲಾಗಿದೆ. ಒಟ್ಟು 8 ಕೋಟಿ ಮಂದಿಗೆ ಈ ಸ್ಕೀಮ್ ಇದೆ. ಮುಂದಿನ ಮೂರು ವರ್ಷದಲ್ಲಿ ಇನ್ನೂ 100 ಜಿಲ್ಲೆಗಳನ್ನ ಸೇರಿಸಲಾಗುವುದು.

ಸ್ವಚ್ಛ ಗಾಳಿ: ಹತ್ತು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ 42 ನಗರ ಕೇಂದ್ರಗಳಲ್ಲಿ ಸ್ವಚ್ಛ ಗಾಳಿಗಾಗಿ 2,217 ಕೋಟಿ ರೂ ಘೋಷಣೆ ಮಾಡಲಾಗಿದೆ. ಹಳೆಯ ವಾಹನಗಳನ್ನ ನಿರ್ಮೂಲನೆ ಮಾಡಲಾಗುತ್ತದೆ.

ಜಲ ಜೀವನ್ ಮಿಷನ್: ಎಲ್ಲಾ ನಗರ ಸಂಸ್ಥೆಗಳಲ್ಲಿ ಜನಜೀವನ್ ಮಿಷನ್ ಘೋಷಣೆ ಮಾಡಲಾಗಿದೆ. ಮುಂದಿನ ಐದು ವರ್ಷದಲ್ಲಿ ಜನಜಿವನ್ ಯೋಜನೆಗೆ 2.87 ಲಕ್ಷ ಕೋಟಿ ವಿನಿಯೋಗವಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ (Sringeri) ಶಾಸಕ (MLA) ಡಿ.ಎನ್.ಜೀವರಾಜ್ (D.N. Jeevaraj) ಅವರಿಗೆ ಸ್ಪೀಕರ್ ಯು.ಟಿ.ಖಾದರ್ (U.T. Khader) ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ.‌ ಆದ್ದರಿಂದ ರಾಜ್ಯಪಾಲರೇ (Governor) ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ

[ccc_my_favorite_select_button post_id="121777"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]