
ದೊಡ್ಡಬಳ್ಳಾಪುರ: ಶ್ರೀಕ್ಷೇತ್ರ ಘಾಟಿ ಸುಬ್ರಹ್ಮಣ್ಯದಲ್ಲಿ ಹುಂಡಿ ಹಣ ಎಣಿಕೆ ಸೋಮವಾರ ನಡೆಯಿತು.
ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗಿದೆ.
ಬ್ರಹ್ಮರಥೋತ್ಸವ ನಡೆದ ನಂತರ ಹುಂಡಿ ಎಣಿಕೆಯಲ್ಲಿ ಒಟ್ಟು 54 ಲಕ್ಷ 65 ಸಾವಿರದ 301 ರೂ ದಾಖಲೆ ಮೊತ್ತ ಸಂಗ್ರಹವಾಗಿದೆ. ಇದರೊಂದಿಗೆ 52,000 ರೂ ಮೌಲ್ಯದ 1 ಕೆಜಿ 600 ಗ್ರಾಂ ಬೆಳ್ಳಿ, 11,800ರೂ ಮೌಲ್ಯದ 3 ಗ್ರಾಂ 75 ಮಿಲಿ ಚಿನ್ನವನ್ನು ಭಕ್ತರು ಹುಂಡಿಯಲ್ಲಿ ಹಾಕುವ ಮೂಲಕ ಹರಕೆ ತೀರಿಸಿದ್ದಾರೆ.
ಹುಂಡಿಯನ್ನು ನಿಯಮಾನುಸಾರ ತೆಗೆದು ಎಣಿಸಲಾಗಿದ್ದು, ಎಣಿಕೆ ಕಾರ್ಯದಲ್ಲಿ ದೇವಾಲಯಕ್ಕೆ ಆಗಮಿಸಿದ್ದ ಭಕ್ತಾದಿಗಳು ಭಾಗವಹಿಸಿದ್ದರು. ಮುಜರಾಯಿ ತಹಶೀಲ್ದಾರ್ ಜಿ.ಜೆ.ಹೇಮಾವತಿ, ಅಧೀಕ್ಷಕ ರಘುಹುಚ್ಚಪ್ಪ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಕೃಷ್ಣಪ್ಪ, ಪ್ರಧಾನ ಅರ್ಚಕ ಗುರುರಾಜಶರ್ಮ, ಇಂಡಿಯನ್ ಓವರ್‍ಸೀಸ್ ಬ್ಯಾಂಕ್ ಸಿಬ್ಬಂದಿ, ಪೊಲೀಸ್ ಹಾಗೂ ದೇವಸ್ಥಾನದ ಸಿಬ್ಬಂದಿ ವರ್ಗದ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಲಾಯಿತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

