
ದೊಡ್ಡಬಳ್ಳಾಪುರ: ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆಯಾಗಿ 5 ಚಿನ್ನದ ಪದಕಗಳಿಸಿ ಅಭೂತಪೂರ್ವ ಸಾಧನೆ ಮಾಡಿದ ನಗರದ ಎಂ.ಎಸ್.ವಿ.ಪಬ್ಲಿಕ್ ಶಾಲೆಯಲ್ಲಿನ ಪ್ರೌಢಶಾಲೆ ವಿಭಾಗದ ವಿಜ್ಞಾನ ಶಿಕ್ಷಕ ಎಂ.ಆರ್.ಪವನ್ ಕುಮಾರ್ ಅವರನ್ನು ಶಾಲೆಯ ಆಡಳಿತ ಮಂಡಳಿವತಿಯಿಂದ ಸನ್ಮಾನಿಸಲಾಯಿತು.
ಮಂಗಳವಾರ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಕಾರ್ಯಕ್ರಮದಲ್ಲಿ, ಆಡಳಿತ ಮಂಡಳಿ ಅಧ್ಯಕ್ಷ ಎ.ಸುಬ್ರಮಣ್ಯ, ಪ್ರಾಂಶುಪಾಲರಾದ ನಾಗರತ್ನ.ಎನ್.ಪಾಲನ್, ಮತ್ತು ಶಿಕ್ಷಕರು ಸನ್ಮಾನಿಸಿ, ಅಭಿನಂದನೆ ಸಲ್ಲಿಸಿದರು.
ಜ.31ರಂದು ಬೆಂಗಳೂರು ವಿಶ್ವವಿದ್ಯಾಲಯದ 55ನೇ ಘಟಿಕೋತ್ಸವ ಸಮಾರಂಭದಲ್ಲಿ ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್ ಅವರಿಂದ ಎಂ.ಆರ್.ಪವನ್ ಕುಮಾರ್ ಚಿನ್ನದ ಪದಕಗಳನ್ನು ಸ್ವೀಕರಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

