
ದೊಡ್ಡಬಳ್ಳಾಪುರ: ತಾಲೂಕಿನ ಕೈಗಾರಿಕಾ ಪ್ರದೇಶದಲ್ಲಿ 2 ಕೋಟಿ ವೆಚ್ಚದಲ್ಲಿ ಕಾರ್ಮಿಕ ಕಲ್ಯಾಣ ಭವನಕ್ಕೆ ಕಟ್ಟಡ ನಿರ್ಮಿಸುವುದಾಗಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ಹಾಗೂ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ರವಿ ಮಾವಿನಕುಂಟೆ ನಿಯೋಗ ನಗರದ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಭವನ ಕಟ್ಟಡ ನಿರ್ಮಿಸುವಂತೆ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಭೇಟಿ ಮಾಡಿ ಮನವಿಗೆ ಸ್ಪಂದಿಸಿ ಈ ಕುರಿತು ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ರವಿ ಮಾವಿನಕುಂಟೆ, ತಾಲೂಕಿನಲ್ಲಿ ಕಾರ್ಮಿಕ ಭವನ ನಿರ್ಮಿಸುವಂತೆ ಎರಡು ವರ್ಷಗಳಿಂದ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಸಾಧ್ಯವಾಗುತ್ತಿಲ್ಲ. ಸಾವಿರಾರು ಮಂದಿ ಕಾರ್ಯನಿರ್ವಹಿಸುತ್ತಿರುವ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕ ಭವನ ನಿರ್ಮಿಸಲು ತ್ವರಿತ ಕ್ರಮ ಕೈಗೊಳ್ಳಬೇಕೆಂದು ಸಚಿವರಿಗೆ ಮನವಿ ಮಾಡಿದರು.
ಈ ಸಂಧರ್ಭದಲ್ಲಿ ಚಿರಋಣಿ ಕನ್ನಡಾಂಬೆ ಹೋರಾಟ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜು, ಜಿಲ್ಲಾಧ್ಯಕ್ಷ ಸುಬ್ರಮಣಿ, ಜಿಲ್ಲಾ ಗೌರವ ಅಧ್ಯಕ್ಷ ಅನಿಲ್, ತಾಲೂಕು ಗೌರವ ಅಧ್ಯಕ್ಷ ನಾಗರಾಜ್ ನಾಯಕ್, ತಾಲೂಕ್ ಅದ್ಯಕ್ಷರು ರಮೇಶ್ ಆರ್ ಸೊಣ್ಣಪ್ಪನಹಳ್ಳಿ, ಪ್ರದಾನ ಕಾರ್ಯದರ್ಶಿ ಶ್ರೀರಾಮ್, ಕಾರ್ಮಿಕ ಘಟಕ ಅಧ್ಯಕ್ಷ ಆನಂದ್ ಕುಮಾರ್, ಪ್ರಧಾನ ಕಾರ್ಯದರ್ಶಿ ಶಿವು ತಿಪ್ಪಾಪುರ, ಜಿಲ್ಲಾ ಯುವ ಘಟಕದ ಅಧ್ಯಕ್ಷ ಮಂಜು ನಾಯಕ, ತಾಲೂಕು ಖಜಾಂಚಿ ಹಮಾಮ್ ಶ್ರೀನಿವಾಸ್, ಮುಖಂಡರಾದ ಯಮನೂರು, ದೀಪುನಾಯಕ್, ಬಾಬು, ಪ್ರಕಾಶ್, ಹಾಗು ಇಂಡೋಮಿಮ್ ಕಂಪನಿ ಕಾರ್ಮಿಕ ಅಧ್ಯಕ್ಷ ಜಯಂತ್ ಮತ್ತಿತರರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

