ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ “ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ 2020-21” ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು 2021ರ ಫೆಬ್ರವರಿ 15 ರಂದು ಬೆಳಿಗ್ಗೆ 10.00 ಗಂಟೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.
ಪೌರಾಡಳಿತ ಮತ್ತು ಸಕ್ಕರೆ ಸಚಿವ ಎನ್.ನಾಗರಾಜ್(ಎಂ.ಟಿ.ಬಿ) ಉಪಸ್ಥಿತಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ.ನಾರಾಯಣಗೌಡ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್, ಚಿಕ್ಕಬಳ್ಳಾಪುರ ಕ್ಷೇತ್ರದ ಲೋಕಸಭಾ ಸದಸ್ಯ ಬಿ.ಎನ್.ಬಚ್ಚೇಗೌಡ, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ನಿಸರ್ಗ ನಾರಾಯಣಸ್ವಾಮಿ.ಎಲ್.ಎನ್., ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ,
ನೆಲಮಂಗಲ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್ ಕುಮಾರ್ ಬಚ್ಚೇಗೌಡ,
ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೇಗೌಡ, ಎಸ್.ರವಿ, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಜಿಲ್ಲಾ ಪಂಚಾಯಿತಿ ಸ್ಥಾಯಿ ಸಮಿತಿಗಳ ಅಧ್ಯಕ್ಷರುಗಳಾದ ಕೆ.ಸಿ.ಮಂಜುನಾಥ್, ಬಾಲೇಪುರ ಜಿ.ಲಕ್ಷ್ಮೀನಾರಾಯಣ, ಕೃಷ್ಣಮೂರ್ತಿ, ಬೆಂಗಳೂರಿನ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಕೆ.ಪಿ.ಪುರುಷೋತ್ತಮ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಕೆ.ಶ್ರೀನಿವಾಸ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಎಂ.ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಯಾದ ಪಿ.ಗಂಗಾಧರಪ್ಪ, ತಾಲ್ಲೂಕುಗಳ ಅಧ್ಯಕ್ಷರುಗಳಾದ ಎಚ್.ಬಾಲಕೃಷ್ಣ, ಲಕ್ಷ್ಮೀ ನರಸಿಂಹಯ್ಯ, ವಾಸದೇವ ಮೂರ್ತಿ, ಆರ್.ಮುನಿಶಾಮಪ್ಪ, ಬೆಂಗಳೂರಿನ ಕೇಂದ್ರ ಸಂಘದ ಜಂಟಿ ಕಾರ್ಯದರ್ಶಿ ಎಂ.ರಾಜಶೇಖರ್ ಹಾಗೂ ಜಿಲ್ಲೆಯ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರುಗಳು, ತಾಲ್ಲೂಕು ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ,ಸದಸ್ಯರು, ನಗರಸಭೆ/ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ ಎಲ್ಲಾ ಪದಾಧಿಕಾರಿಗಳು ಹಾಗೂ ಮುಖಂಡರುಗಳು ಭಾಗವಹಿಸಲಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರರವಿಕುಮಾರ್,ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರಾದ ಆರ್.ಗೀತಾ ಭಾಗವಹಿಸಲಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.