ರೈತರ ಹೆಸರಲ್ಲಿನ ಬುದ್ದಿ ಜೀವಿಗಳು, ಎಫ್‌ಡಿಐಯಿಂದ ದೇಶವನ್ನು ರಕ್ಷಿಸಿಕೊಳ್ಳಬೇಕು: ಪ್ರಧಾನಿ ಮೋದಿ

ನವದೆಹಲಿ: ರೈತರ ಪ್ರತಿಭಟನೆಯ ಹೆಸರಿನಲ್ಲಿ ತಮ್ಮ ಸ್ವಾರ್ಥ ಲಾಭ ಮಾಡಿಕೊಳ್ಳುತ್ತಿರುವ ವ್ಯಕ್ತಿಗಳ ವಿರುದ್ಧ ಪ್ರಧಾನಿ ಮೋದಿ ತಮ್ಮದೇ ಶೈಲಿಯಲ್ಲಿ ಚಾಟಿ ಬೀಸಿ ʼಆಂದೋಲನ ಜೀವಿಗಳುʼ ಎಂದು ವ್ಯಂಗ್ಯವಾಡಿದರು.

ಕೃಷಿ ಕಾಯ್ದೆಗಳನ್ನು ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಸಮರ್ಥನೆ ಮಾಡಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನೆ ಸಲ್ಲಿಸಿ ಮಾತನಾಡಿದ ಅವರು, MSP ಇತ್ತು, ಎಂಎಸ್‌ಪಿ ಇದೆ, ಎಂಎಸ್‌ಪಿ ಇದ್ದೇ ಇರುತ್ತದೆ ಎಂದು ಮತ್ತೆ ಸ್ಪಷ್ಟಪಡಿಸಿದ್ದಾರೆ. ರೈತರ ನಿರಂತರ ಪ್ರತಿಭಟನೆ ಬಗ್ಗೆ ಮಾತನಾಡಿದ ಅವರು ನಾವು ಮಾತುಕತೆಗೆ ಸಿದ್ಧರಿದ್ದೇವೆ ಮತ್ತು ನಾನು ನಿಮ್ಮನ್ನು ಈ ಸದನದ ಮೂಲಕ ಆಹ್ವಾನಿಸುತ್ತಿದ್ದೇನೆ. ಕನಿಷ್ಠ ಬೆಂಬಲ ಇತ್ತು. ಇದೆ, ಇದ್ದೇ ಇರುತ್ತದೆ . ಯಾರೂ ತಪ್ಪು ಮಾಹಿತಿಯನ್ನು ಹರಡಬಾರದು” ಎಂದು ಪ್ರಧಾನಿ ಮೋದಿ ಹೇಳಿದರು.

ಶ್ರಮ ಜೀವಿ, ಬುದ್ಧಿ ಜೀವಿ ಈ ಪದಗಳೆಲ್ಲ ನಮಗೆ ತಿಳಿದಿದೆ. ಆದರೆ ಈಗ ದೇಶದಲ್ಲಿ ಹೊಸ ಸಮುದಾಯ ಹುಟ್ಟಿಕೊಂಡಿದೆ. ಇವರು ಆಂದೋಲನ್‌ ಜೀವಿಗಳು. ಪ್ರತಿಭಟನೆ ನಡೆದಲ್ಲೆಲ್ಲಾ ಇವರನ್ನು ಗುರುತಿಸಬಹುದು. ವಕೀಲರು, ವಿದ್ಯಾರ್ಥಿಗಳು ಅಥವಾ ಕಾರ್ಮಿಕರ ಆಂದೋಲನ ಯಾವುದೇ ಇರಲಿ. ಆಂದೋಲನ‌ ಇಲ್ಲದೇ ಇವರಿಗೆ ಬದುಕಲು ಸಾಧ್ಯವಿಲ್ಲ. ನಾವು ಆಂದೋಲನ ಜೀವಿಗಳನ್ನು ಗುರುತಿಸಬೇಕು ಮತ್ತು ಅವರಿಂದ ರಾಷ್ಟ್ರವನ್ನು ರಕ್ಷಿಸಬೇಕು ಎಂದು ಪ್ರಧಾನಿ ಮೋದಿ ಹೇಳಿದರು.

ಅಭಿವೃದ್ದಿ ವಿಚಾರದಲ್ಲಿ ನಾವು ಮುಂದೆ ಹೋಗಬೇಕು, ಹಿಂದಕ್ಕಲ್ಲ. ಈ ಸುಧಾರಣೆಗಳಿಗೆ ನಾವು ಒಂದು ಅವಕಾಶ ನೀಡಬೇಕು, ಇಂದು ಎರಡು ಹೆಕ್ಟೇರ್‌ಗಿಂತ ಕಡಿಮೆ ಭೂಮಿ ಇರುವ ಶೇ. 86ರಷ್ಟು ರೈತರಿದ್ದಾರೆ. ಅಂದರರ್ಥ 12 ಕೋಟಿ ರೈತರಿದ್ದಾರೆ. ಈ  ರೈತರ ಬಗ್ಗೆ ದೇಶಕ್ಕೆ ಯಾವುದೇ ಜವಾಬ್ದಾರಿ ಇಲ್ಲವೆ ಎಂದು ಪ್ರಶ್ನಿಸಿದ್ದಾರೆ.

ಎನ್‌ಡಿಎಯ ಇತರ ಯೋಜನೆಗಳು ಸಹ ರೈತರಿಗೆ ಸಹಾಯ ಮಾಡುತ್ತವೆ.ಪಿಎಂಜಿಎಸ್‌ವೈ. ರಸ್ತೆ ಸಂಪರ್ಕವು ಸುಧಾರಿಸಿದಾಗ ರೈತರ ಉತ್ಪನ್ನಗಳನ್ನು ದೂರದ ಸ್ಥಳಗಳಿಗೆ ತಲುಪಿಸಲು ಸಾಧ್ಯವಾಗುತ್ತದೆ. ಕಿಸಾನ್ ರೈಲಿನಂತಹ ಪ್ರಯತ್ನಗಳೂ ಇವೆ. ಸಣ್ಣ ರೈತರ ಜೀವನವನ್ನು ಸುಧಾರಿಸುವುದು ಸಮಯದ ಅಗತ್ಯವಾಗಿದೆ ಎಂದು ಮೋದಿ ಹೇಳಿದ್ಧರೆ.

ಭಾರತದ ಆತ್ಮ ನಿರ್ಭರದ ಹಾದಿಯಲ್ಲಿ ಸಾಗಿದೆ. ಕೊರೊನಾ ವಿರುದ್ಧದ ಗೆಲುವು ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ, ಅದು ಜನರ ಗೆಲುವು. ಭಾರತ ತನ್ನ ಪ್ರಜೆಗಳನ್ನು ರಕ್ಷಣೆ ಮಾಡಿದೆ. ಭಾರತದ ಬಗ್ಗೆ ನಮ್ಮವರೇ ವ್ಯಂಗ್ಯವಾಡುತ್ತಿದ್ದಾರೆ. ಕೊರೊನಾ ವೇಳೆ ದೀಪ ಬೆಳಗಿಸಿದ್ದರ ಬಗ್ಗೆ ವ್ಯಂಗ್ಯವಾಡಿದ್ದಾರೆ. ಇದರಿಂದ ದೇಶದ ಜನರ ಮನೋಬಲ ಕುಸಿಯುತ್ತದೆ ಎಂದು ಗರಂ ಆದರು.

ಕಡಿಮೆ ಸಮಯದಲ್ಲಿ ವ್ಯಾಕ್ಸಿನ್ ಕಂಡುಹಿಡಿಯಲಾಗಿದೆ. ಇದಕ್ಕೆ ಇಡೀ ದೇಶ ಹೆಮ್ಮೆ ಪಡಬೇಕು. ವಿಶ್ವದ ಅತಿದೊಡ್ಡ ವ್ಯಾಕ್ಸಿನೇಷನ್ ಭಾರತದಲ್ಲಿ ನಡೆಯುತ್ತಿದೆ. ಇದು ಭಾರತದ ಸಾಮಾಥ್ರ್ಯವನ್ನು ತೋರಿಸುತ್ತದೆ. ಆರಂಭದಲ್ಲಿ ಕೊರೊನಾ ವ್ಯಾಕ್ಸಿನ್ ಇರಲಿಲ್ಲ. ಯಾವ ಮಾತ್ರೆ ಬಳಸಬೇಕು ಎಂದು ಗೊತ್ತಿರಲಿಲ್ಲ. ಆಗ ಇಡೀ ವಿಶ್ವ ಭಾರತದತ್ತ ನೋಡಿತ್ತು. ಸಂಕಷ್ಟ ಸಂದರ್ಭದಲ್ಲೂ ನಾವು ಹಲವು ದೇಶಗಳಿಗೆ ಔಷಧಿ ಸರಬರಾಜು ಮಾಡಿದ್ದೇವೆ. ಕೊರೊನಾ ಭಾರತದ ಫೆಡರಲ್ ವ್ಯವಸ್ಥೆ ತಾಕತ್ತು ತೋರಿಸಿದೆ. ಸಂಕಷ್ಟ ಸಮಯದಲ್ಲಿ ರಾಜ್ಯ ಸರ್ಕಾರಗಳು ಕೇಂದ್ರದೊಂದಿಗೆ ಕೆಲಸ ಮಾಡಿದೆ. ಈ ಹಿನ್ನೆಲೆ ಎಲ್ಲ ರಾಜ್ಯ ಸರ್ಕಾರಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ರಾಷ್ಟ್ರಪತಿ ಅತ್ಯಂತ ಶಕ್ತಿಶಾಲಿ ಭಾಷಣವಾಗಿತ್ತು. ಕೆಲವರ ಅನುಪಸ್ಥಿತಿ ಬಳಿಕವೂ ಅದು ಪರಿಣಾಮ ಬೀರಿದೆ ಎಂದು ಹೇಳಿದ್ದಾರೆ. ಭಾರತ ನಿಜಕ್ಕೂ ಅವಕಾಶಗಳ ನೆಲ. ಹಲವಾರು ಅವಕಾಶಗಳು ನಮ್ಮನ್ನು ಕಾಯುತ್ತಿವೆ, ಆದ್ದರಿಂದ ಯುವ, ಉತ್ಸಾಹದಿಂದ ತುಂಬಿರುವ ರಾಷ್ಟ್ರ ಮತ್ತು ಕನಸುಗಳನ್ನು ಸಾಕಾರಗೊಳಿಸುವ ಪ್ರಯತ್ನಗಳನ್ನು ಮಾಡುತ್ತಿರುವ ರಾಷ್ಟ್ರ, ಸಂಕಲ್ಪದೊಂದಿಗೆ, ಈ ಅವಕಾಶಗಳನ್ನು ಎಂದಿಗೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಜಗತ್ತಿನ ಕಣ್ಣುಗಳು ಭಾರತದ ಮೇಲಿವೆ. ಭಾರತ ದೇಶದ ಮೇಲೆ ನಿರೀಕ್ಷೆಗಳಿವೆ ಮತ್ತು ನಮ್ಮ ಭೂಮಂಡಲದ ಸುಧಾರಣೆಗೆ ಭಾರತ ಕೊಡುಗೆ ನೀಡುತ್ತದೆ ಎಂಬ ವಿಶ್ವಾಸವಿದೆ. 

ದೇವೇಗೌಡರು ನಮ್ಮ ಕೃಷಿ ಕಾಯ್ದೆಗಳನ್ನು ಬೆಂಬಲಿಸಿದ್ದಾರೆ. ಅವರಿಗೆ ಆಭಾರಿಯಾಗಿದ್ದೇನೆ, ಸದನದಲ್ಲಿ ಕೃಷಿಗೆ ಸಂಬಂಧಿಸಿದ ಚರ್ಚೆಗಳಲ್ಲಿ ಎಚ್ ಡಿ ದೇವೇಗೌಡಜೀ ಕೊಡುಗೆಯನ್ನು ನಾನು ಪ್ರಶಂಸಿಸುತ್ತೇನೆ. ಅವರ ಮಾತುಗಳು ಚರ್ಚೆಗೆ ಉತ್ತಮ ದೃಷ್ಟಿಕೋನವನ್ನು ನೀಡಿವೆ. ಅವರೇ ಕೃಷಿ ಕ್ಷೇತ್ರದೊಂದಿಗೆ ಬಲವಾದ ಒಡನಾಟವನ್ನು ಹೊಂದಿದ್ದಾರೆ ಎಂದು ಮೋದಿ ಹೇಳಿದ್ದಾರೆ.

ನಮ್ಮ ಪ್ರಜಾಪ್ರಭುತ್ವ ಪಾಶ್ಚಿಮಾತ್ಯ ಸಂಸ್ಥೆಯಲ್ಲ. ಇದು ಮಾನವ ಸಂಸ್ಥೆ. ಭಾರತದ ಇತಿಹಾಸವು ಪ್ರಜಾಪ್ರಭುತ್ವ ಸಂಸ್ಥೆಗಳ ಉದಾಹರಣೆಗಳಿಂದ ತುಂಬಿದೆ. ಪ್ರಾಚೀನ ಭಾರತದಲ್ಲಿ 81 ಪ್ರಜಾಪ್ರಭುತ್ವಗಳ ಉಲ್ಲೇಖವನ್ನು ನಾವು ಕಾಣುತ್ತೇವೆ. ಭಾರತದ ರಾಷ್ಟ್ರೀಯತೆಯ ಮೇಲಿನ ದಾಳಿಯ ಬಗ್ಗೆ ನಾಗರಿಕರಿಗೆ ಎಚ್ಚರಿಕೆ ನೀಡುವುದು ಇಂದು ಅತ್ಯಗತ್ಯ.

ಭಾರತ ಪ್ರಜಾಪ್ರಭುತ್ವದ ತಾಯಿ. ನಾವು ಈ ಪಾಠಗಳನ್ನು ಮುಂಬರುವ ಪೀಳಿಗೆಗೆ ಕಲಿಸಬೇಕಾಗಿದೆ. ಏಕೆಂದರೆ, ನಮ್ಮ ಪೂರ್ವಜರು ನಮಗೆ ಪ್ರಜಾಪ್ರಭುತ್ವದ ಸಂಪ್ರದಾಯಗಳನ್ನು ರವಾನಿಸಿದ್ದಾರೆ. ನಾವು ಪ್ರಜಾಪ್ರಭುತ್ವದ ಆಧಾರಸ್ತಂಭಗಳನ್ನು ರಕ್ಷಿಸಬೇಕಾಗಿದೆ.

ಕೃಷಿ ಚರ್ಚೆ ವೇಳೆ ಡೆರೆಕ್ ಜಿ ಅವರ ಮಾತುಗಳನ್ನು ಕೇಳುತ್ತಿದ್ದೆ, ಅವನು ಒಳ್ಳೆಯ ಪದಗಳನ್ನು ಆರಿಸಿದ್ದರು – ವಾಕ್ ಸ್ವಾತಂತ್ರ್ಯ,ಕ್ಕೆ ಧಕ್ಕೆ ಬಂದಿದೆ ಎಂದು ಹೇಳಿದರು. ಅವರು ಬಂಗಾಳದ ಬಗ್ಗೆ ಹೇಳಿದರೋ ಅಥವಾ ದೇಶದ ಬಗ್ಗೆ ಮಾತನಾಡುತ್ತಿದ್ದಾರೆಯೇ ಎಂದು ನನಗೆ ಆಶ್ಚರ್ಯವಾಯಿತು. 

ಭಾರತದ ರಾಷ್ಟ್ರೀಯತೆ ಸಂಕುಚಿತ ಅಥವಾ ಸ್ವಾರ್ಥಪರತೆಯಿಂದ ಕೂಡಿದ್ದಲ್ಲ. ಇದು ಆಕ್ರಮಣಕಾರಿಯೂ ಕೂಡ ಅಲ್ಲ. ಇದು ‘ಸತ್ಯಂ ಶಿವಂ ಸುಂದರಂ’ ಮೌಲ್ಯಗಳಿಂದ ಪ್ರೇರಿತವಾಗಿದೆ. ಈ ಉಲ್ಲೇಖವನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ನೀಡಿದ್ದಾರೆ ಎಂದು ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.‌

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!