ಬೆಂ.ಗ್ರಾ.ಜಿಲ್ಲೆ: ದೊಡ್ಡಬಳ್ಳಾಪುರದ ಆಸ್ಪತ್ರೆಯಲ್ಲಿ ಫೆ.8 ರಿಂದ ಆರಂಭವಾಗುವ ಎರಡನೇ ಹಂತದ ಕರೊನಾ ಲಸಿಕೆ ನೀಡುವ ಕಾರ್ಯಕ್ರಮವನ್ನು ಅಪರ ಜಿಲ್ಲಾಧಿಕಾರಿಗಳು ಜಗದೀಶ್ ಎ.ನಾಯಕ್ ಉದ್ಘಾಟಿಸಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಅವರು ಸ್ವತಃ ಲಸಿಕೆ ಪಡೆದು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸಾತ್ ನೀಡಿದರು.
ಮೊದಲನೇ ಹಂತದ ಲಸಿಕಾ ಕಾರ್ಯಕ್ರಮದ ನಂತರ ಎರಡನೇ ಹಂತದ ಲಸಿಕೆ ಕಾರ್ಯಕ್ರಮ ಒಂದುವಾರದ ಕಾಲ ನಡೆಯಲಿದ್ದು ಈ ಹಂತದಲ್ಲಿ ಪೊಲೀಸ್ ಇಲಾಖೆ, ಪಂಚಾಯಿತ್ ರಾಜ್ ಅಡಿಯಲ್ಲಿ ಬರುವ ಸ್ಥಳೀಯ ಆಡಳಿತ ಸಂಸ್ಥೆಗಳು, ನಗರ ಸ್ಥಳೀಯ ಆಡಳಿತ ಸಂಸ್ಥೆಗಳು, ಅಗ್ನಿಶಾಮಕದಳ, ಹೋಂಗಾರ್ಡ್ಸ್ ಗಳಿಗೆ ನೀಡಲಾಗುತ್ತದೆ.
ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ, ಆಡಳಿತಾಧಿಕಾರಿ ಡಾ.ರಮೇಶ್, ಜಿಲ್ಲಾ ಸಂತಾನೋತ್ಪತ್ತಿ ಮತ್ತು ಮಕ್ಕಳ ಆರೋಗ್ಯಾಧಿಕಾರಿ ಡಾ.ಶರ್ಮಿಳಾ, ಡಾ.ರಾಜು, ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿ ರಾಜೀವ್ ಲೋಚನ್ ಮತ್ತಿತರರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.