ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್ಸೈಟ್ www.ssp.postmatric.karnataka.gov.in ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ಮಾರ್ಚ್ 05 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ.: 8050770005, 8050770004, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:[email protected], ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.