ದೊಡ್ಡಬಳ್ಳಾಪುರ: ಕೃಷಿ ಇಲಾಖೆಯ ಕೇಂದ್ರ ಪುರಸ್ಕೃತ ಆತ್ಮ ಯೊಜನೆಯಡಿ ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ಕಿಸಾನ್ ಗೋಷ್ಠಿ ಹಾಗೂ ರೈತ ಉತ್ಪಾದಕ ಸಂಸ್ಥೆಗಳ ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸಹಾಯಕ ಕೃಷಿ ನಿರ್ದೇಶಕಿ ಎನ್.ಸುಶೀಲಮ್ಮ ಮಾತನಾಡಿ, ರೈತ ಆಸಕ್ತ ಗುಂಪುಗಳು ಈ ಸಂಸ್ಥೆಯ ರಚನೆಗೆ ಸಹಕರಿಸಬೇಕು ಎಂದು ತಿಳಿಸಿದರು.
ರೈತ ಉತ್ಪಾದಕ ಸಂಸ್ಥೆಯ ತೂಬಗೆರೆ ಲೀಲಾವತಿ, ರಾಜಘಟ್ಟ ಚೈತ್ರಾ ಮಾತನಾಡಿ, ರೈತ ಉತ್ಪಾದಕ ಸಂಸ್ಥೆಯ ರಚನೆ, ಕಾರ್ಯವೈಖರಿ ಆಸಕ್ತ ಗುಂಪುಗಳ ಆಯ್ಕೆ, ನೋಂದಣಿ ಹಾಗೂ ಕೃಷಿ ಸಂಬಂಧಿತ ಉತ್ಪನ್ನಗಳ ಮಾರಾಟದ ಕುರಿತು ವಿವರಿಸಿದರು.
ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಕೆಸ್ತೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜಮ್ಮ, ಉಪಾಧ್ಯಕ್ಷ ಕೃಷ್ಣಪ್ಪ, ಕೃಷಿ ಇಲಾಖೆಯ ಕೃಷಿ ಅಧಿಕಾರಿ ಗೀತಾ, ಆತ್ಮ ಯೋಜನೆಯ ಉಪಯೋಜನಾ ನಿರ್ದೇಶಕ ಯತೀಶ್, ತಾಂತ್ರಿಕ ವ್ಯವಸ್ಥಾಪಕಿ ಅರ್ಚನಾ, ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾದ ಗಗನ್, ದಶರಥ ಮತ್ತಿತರರು ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.