ಬೆಂ.ಗ್ರಾ.ಜಿಲ್ಲೆ: ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯತಿ ಕಚೇರಿ ಸಭಾಂಗಣದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿಯ ಜನವರಿ 2021ರ ಮಾಹೆಯ ಅಂತ್ಯದವರೆಗಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ(ಕೆ.ಡಿ.ಪಿ) ಸಭೆ”ಯು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ವಿ.ಪ್ರಸಾದ್ ಅಧ್ಯಕ್ಷತೆಯಲ್ಲಿ ನಡೆಯುತ್ತಿದೆ.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ರೂಪ ಮರಿಯಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಮಂಜುನಾಥ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಆರ್.ರವಿಕುಮಾರ್, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ರಮೇಶರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಉಪಸ್ಥಿತರಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.