ಕರೊನಾ ಲಸಿಕೆ ಪಡೆಯದ ನೋಂದಾಯಿತ ಆರೋಗ್ಯ ಕಾರ್ಯಕರ್ತರ ಮೇಲೆ ಕ್ರಮ: ಬೆಂ.ಗ್ರಾ.ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ

ಬೆಂ.ಗ್ರಾ.ಜಿಲ್ಲೆ: ಮೊದಲ ಹಂತದ ಕರೊನಾ ಲಸಿಕಾ ಕಾರ್ಯಕ್ರಮದಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19 ಚುಚ್ಚುಮದ್ದು ಪಡೆದವರಲ್ಲಿ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ, ಈಗಾಗಲೇ ನೋಂದಣಿ ಮಾಡಿಸಿ, ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಪೂರ್ವಾಗ್ರಹಗಳಿಗೆ ಕಿವಿಗೊಡದೆ, ತಕ್ಷಣವೇ ಲಸಿಕೆಯನ್ನು ಪಡೆದುಕೊಳ್ಳಬೇಕು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಹಾಗೂ ತಾಯಿ ಮತ್ತು ಮಗುವಿನ ಮರಣ ಪರಿಶೀಲನೆ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮೊದಲ ಹಂತದ ಕೊರೋನಾ ಲಸಿಕೆ ವಿತರಣೆಯಲ್ಲಿ ಶೇ. 61 ರಷ್ಟು ಆರೋಗ್ಯ ಕಾರ್ಯಕರ್ತರು ಮಾತ್ರ ಲಸಿಕೆ ಪಡೆದಿದ್ದು, ಬಾಕಿ ಉಳಿದಿರುವ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯುವಂತೆ ತಾಲ್ಲೂಕು ವೈದ್ಯಾಧಿಕಾರಿಗಳು ಅರಿವು ಮೂಡಿಸಬೇಕು ಎಂದರಲ್ಲದೆ, ಲಸಿಕೆ ಪಡೆಯದವರು ಸೂಕ್ತ ಕಾರಣ ನೀಡಿದರೆ ಮಾತ್ರ ವಿನಾಯಿತಿ ನೀಡಬಹುದು ಎಂದು ತಿಳಿಸಿದರು.

ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕೊರೋನ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು.

ಗರ್ಭಿಣಿಯರು, ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಲಸಿಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯಲ್ಲಿ ನೀಡಲಾಗುತ್ತಿದ್ದು, 2020ರ‌ ಏಪ್ರಿಲ್ ನಿಂದ ಡಿಸೆಂಬರ್ ಮಾಹೆಯವರೆಗೂ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದರಲ್ಲದೆ, ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಯೋಜನೆ ಜಾರಿಗೆ ತರಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನೆಲಮಂಗಲ, ದಾಬಸ್‌ಪೇಟೆ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿನ ಗರ್ಭಿಣಿ ಮಹಿಳೆಯರು ಲಸಿಕೆ ಪಡೆಯುವ ವೇಳೆ, ಹೆಚ್ಚಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಅವರ ಮಾಹಿತಿಯನ್ನು ಸಂಗ್ರಹಿಸಿ, ಲಸಿಕೆಯನ್ನು ಪಡೆದಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದರು. 

ಶಾಲೆಗಳಿಗೆ ಭೇಟಿ ನೀಡಿ, ಎಸ್.ಎಸ್.ಎಲ್.ಸಿ‌. ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಎಂದರು. ಅಲ್ಲದೆ, ಬಾಕಿ ಉಳಿದಿರುವ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಡ್‌ವಾರು ಅಥವಾ ಹಳ್ಳಿಗಳಿಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಲಸಿಕೆಯನ್ನು ನೀಡುವ ಕಾರ್ಯವಾಗಬೇಕು ಹಾಗೂ ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ ಉತ್ತಮ ಪ್ರಗತಿ ಸಾಧ್ಯವಾಗಿದ್ದು, ಉಳಿದ ಮೂರು ತಾಲ್ಲೂಕು ಆರೋಗ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು. 

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬಿಸಿಜಿ ಲಸಿಕೆಯಲ್ಲಿ ಶೇ.108% ಹಾಗೂ ಪೋಲಿಯೊ ಲಸಿಕೆ ಹಾಕುವ ಗುರಿಯಲ್ಲಿ ಶೇ.107 % ಪ್ರಗತಿ ಸಾಧಿಸಿರುವುದು ಅಭಿನಂದನಾರ್ಹವಾದದ್ದು ಎಂದರು. ಲಸಿಕಾ ಯೋಜನೆಯಿಂದ ಯಾವೊಂದು ಮಗುವು ಹೊರಗುಳಿಯಬಾರದು ಎಂದು ತಿಳಿಸಿದರು. 

ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದಾಗಿ ಆಗಸ್ಟ್ ನಿಂದ ಡಿಸೆಂಬರ್ ಮಾಸಾಂತ್ಯದವರೆಗೆ 11 ಮಕ್ಕಳು ಹಾಗೂ 4 ತಾಯಂದಿರು ಮರಣ ಹೊಂದಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡುವುದು ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರ ಕರ್ತವ್ಯವಾಗಿದ್ದು, ಇಲಾಖೆಯಲ್ಲಿರುವ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು. 

ಮಕ್ಕಳಿಗೆ ವಿಟಮಿನ್ ‘ಕೆ’ ಲಸಿಕೆ ನೀಡುವಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದ್ದು, ತಾಲ್ಲೂಕು ವೈದ್ಯಾಧಿಕಾರಿಗಳು ಸೂಕ್ತ ಕ್ರಮ ವಹಿಸಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ಮಾಡಬೇಕು ಹಾಗೂ ಈಗಾಗಲೇ ದೇವನಹಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಐ.ಸಿ.ಯು. ಇದ್ದು, ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಬಂದಿದ್ದು, ಐ.ಸಿ.ಯು ನಿರ್ವಹಣೆ ಕುರಿತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ, ಶೀಘ್ರವಾಗಿ ಕಾರ್ಯಾರಂಭ ಮಾಡುವಂತೆ ತಿಳಿಸಿದರು. 

ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಜಿಲ್ಲಾ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶರ್ಮಿಳಾ, ರಾಜ್ಯ ಮಾನಿಟರಿ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಕ್ಷಯಾ ರೋಗ ನಿಯಂತ್ರಣ ಘಟಕದ ಸಂಚಾಲಕಿ ಡಾ.ಶಕೀಲಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು,  ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

ಬೆಂಗಳೂರಿನಿಂದ IPL ಫೈನಲ್ ಪಂದ್ಯ ಸ್ಥಳಾಂತರ: ನಿಖಿಲ್ ಆಕ್ರೋಶ.. ಡಿಸಿಎಂ ಪ್ರತಿಕ್ರಿಯೆ

"ಅಹಮದಾಬಾದ್ ನಲ್ಲಿ ದೊಡ್ಡ ಕ್ರೀಡಾಂಗಣವಿದೆ, ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ (IPL) ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ" ಎಂದು‌ ಡಿಸಿಎಂ ಡಿ.ಕೆ.

[ccc_my_favorite_select_button post_id="121800"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]