
ಬೆಂ.ಗ್ರಾ.ಜಿಲ್ಲೆ: ಬೆಂಗಳೂರಿನ ಶಾಂತಿನಗರಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮಾಂತರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಗೆ ವರ್ಗಾಹಿಸುವಂತೆ ದೊಡ್ಡಬಳ್ಳಾಪುರದ ನ್ಯಾಯವಾದಿ ಟಿ.ಕೆ.ಹನುಮಂತರರಾಜು ಎನ್ನುವವರು ಕಾನೂನು ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಕುರಿತು ಇ- ಮೇಲ್ ಮೂಲಕ ಸಚಿವರಿಗೆ ಪತ್ರ ಬರೆದಿರುವ ಅವರು,ಬೆಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಬೆಂಗಳೂರು ಶಾಂತಿನಗರದಲ್ಲಿ ಕಾರ್ಯನಿರ್ವಹಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಹೊಸಕೋಟೆ, ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ತಾಲ್ಲೂಕುಗಳಿಂದ ಗ್ರಾಹಕರು ಬೆಂಗಳೂರು ಶಾಂತಿನಗರಕ್ಕೆ ತೆರಳಿ ದೂರು ದಾಖಲಿಸಲು, ಪ್ರಕರಣಗಳಿಗೆ ತೆರಳಲು ತೀವ್ರ ತೊಂದರೆ ಉಂಟಾಗುತ್ತಿರುವುದರಿಂದ ಅನ್ಯಾಯವಾದರು, ಪ್ರಕರಣ ದಾಖಲಿಸಲು ಹಿಂದೇಟು ಹಾಕುವಂತಾಗಿದೆ.
ಈಗಾಗಲೇ ಜಿಲ್ಲಾ ಕೇಂದ್ರ ಗ್ರಾಮಾಂತರ ಜಿಲ್ಲೆಗೆ ವರ್ಗಾವಣೆಯಾಗಿತ್ತು, ಸಾರ್ವಜನಿಕರಿಗೆ ಅನುಕೂಲವಾಗಿದೆ. ಅದರಂತೆಯೇ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆಯನ್ನು ವರ್ಗಾವಣೆ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

